Homeಮುಖಪುಟ224 ಶಾಸಕರು ಶ್ರೀರಾಮಚಂದ್ರರೇ?: ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ ಸಚಿವ ಸುಧಾಕರ್!

224 ಶಾಸಕರು ಶ್ರೀರಾಮಚಂದ್ರರೇ?: ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ ಸಚಿವ ಸುಧಾಕರ್!

- Advertisement -
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸದನದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ವಿರುದ್ದ “224 ಶಾಸಕರ ವಿರುದ್ಧ ತನಿಖೆ ನಡೆದು ಏಕಪತ್ನಿ ವ್ರತಸ್ಥರೆಂದು ಸಾಬೀತಾಗಲಿ” ಎಂದು ಸವಾಲು ಹಾಕಿದ್ದ ಸಚಿವ ಸುಧಾಕರ್ ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.

ಯಾರ್ಯಾರು ಮುಖ್ಯಮಂತ್ರಿಯಾಗಿದ್ದಾಗ ಏನೇನು ಮಾಡಿದ್ದರೆಂದು ಹೊರಬರಲಿ. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್, ಮುನಿಯಪ್ಪ, ಎಚ್.ಡಿ ಕುಮಾರಸ್ವಾಮಿಯವರು ಶ್ರಿರಾಮಚಂದ್ರರೇ? ಏಕಪತ್ನಿ ವ್ರತಸ್ಥರೆ? ಈ ಕುರಿತು ಎಲ್ಲಾ 224 ಶಾಸಕರ ಮೇಲೂ ತನಿಖೆಯಾಗಲಿ ಎಂದು ಸುಧಾಕರ್ ಹೇಳಿದ್ದರು.

ಇದಕ್ಕೆ ತೀವ್ರ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡುವ ಮೂಲಕ ವಿಷಾಧ ವ್ಯಕ್ತಪಡಿಸಿದ್ದಾರೆ. “ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ” ಎಂದಿದ್ದಾರೆ.

ಮುಂದುವರಿದು “ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಸದನದಲ್ಲಿ ಸಿಡಿ ಗಲಾಟೆ: ಏಕಪತ್ನಿ ವ್ರತಸ್ಥರ ಪ್ರಶ್ನೆ – ಬಿಜೆಪಿ, ಕಾಂಗ್ರೆಸ್ ಗದ್ದಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...