Homeಮುಖಪುಟ'ನೀವು ಭಾಷಾತಜ್ಞರೋ?'..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

- Advertisement -
- Advertisement -

“ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ (ಜೂ.3) ತರಾಟೆಗೆ ತೆಗೆದುಕೊಂಡಿದೆ. ತನ್ನ ಹೇಳಿಕೆಗೆ ಕ್ಷಮೆಯಾಚಿಸಲು ಕಮಲ್ ಹಾಸನ್ ನಿರಾಕರಿಸಿದ್ದನ್ನು ಪ್ರಶ್ನಿಸಿದ ನ್ಯಾಯಾಲಯ, ಒಂದೇ ಒಂದು ಕ್ಷಮೆಯಾಚನೆಯಿಂದ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಹೇಳಿದೆ.

ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅವರ ಮುಂಬರುವ ಚಿತ್ರ ‘ಥಗ್ ಲೈಫ್’ ಬಿಡುಗಡೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಕನ್ನಡಿಗರು ಹೇಳುತ್ತಿದ್ದಾರೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಅವಕಾಶ ಮತ್ತು ಸೂಕ್ತ ರಕ್ಷಣೆ ಕೋರಿ ‘ರಾಜ್‌ಕಮಲ್ ಫಿಲ್ಮ್ಸ್’ ನ್ಯಾಯಾಲಯದ ಮೊರೆ ಹೋಗಿತ್ತು.

ಸಾರ್ವಜನಿಕ ವ್ಯಕ್ತಿಯಾಗಿ ಕಮಲ್ ಹಾಸನ್ ಅವರ ಜವಾಬ್ದಾರಿಗಳ ಬಗ್ಗೆ ನ್ಯಾಯಾಧೀಶರು ಕಳವಳ ವ್ಯಕ್ತಪಡಿಸುತ್ತಾ, “ನೀವು ಕಮಲ್ ಹಾಸನ್ ಆಗಿರಬಹುದು ಅಥವಾ ಯಾರಾದರೂ ಆಗಿರಬಹುದು, ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಈ ದೇಶ ಭಾಷಾವಾರು ವಿಭಜನೆಯಾಗಿದೆ. ಹಾಗಾಗಿ, ಸಾರ್ವಜನಿಕ ವ್ಯಕ್ತಿಯೊಬ್ಬರು ಅಂತಹ ಹೇಳಿಕೆ ನೀಡಲು ಸಾಧ್ಯವಿಲ್ಲ. ಈ ಹೇಳಿಕೆಯಿಂದ ಆಗಿರುವುದು ಏನು? ಅಶಾಂತಿ, ಅಸಂಗತತೆ ಅಲ್ಲವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನರು ನಿಮ್ಮಿಂದ ಕ್ಷಮೆ ಬಯಸಿದ್ದಾರೆ. ನೀವು ರಕ್ಷಣೆ ಕೋರಿ ಇಲ್ಲಿಗೆ ಬಂದಿದ್ದೀರಿ. ನೀವು ಯಾವ ಆಧಾರದ ಮೇಲೆ ಹೇಳಿಕೆ ನೀಡಿದ್ದೀರಿ? ನೀವು ಇತಿಹಾಸಕಾರರೇ, ಭಾಷಾಶಾಸ್ತ್ರಜ್ಞರೇ? ಎಂದು ನ್ಯಾಯಾಧೀಶರು ಖಾರವಾಗಿ ಕೇಳಿದ್ದಾರೆ.

ಅರ್ಜಿದಾರರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ಪರವಾಗಿ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, “ಕಮಲ್ ಹಾಸನ್ ಬೇರೆಯೇ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ. ದಯವಿಟ್ಟು ಈ ಹೇಳಿಕೆಯನ್ನು ಯಾವ ಸಂದರ್ಭದಲ್ಲಿ ನೀಡಲಾಗಿದೆ ಎಂಬುದನ್ನು ನೋಡಿ” ಎಂದು ಮನವಿ ಮಾಡಿದ್ದಾರೆ.

ಮುಂದುವರಿದು, “ಆ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರೋದ್ಯಮದ ಸೂಪರ್‌ಸ್ಟಾರ್ ಕೂಡ ಉಪಸ್ಥಿತರಿದ್ದರು. ಅವರು (ಕಮಲ್ ಹಾಸನ್) ನೀಡಿದ ಹೇಳಿಕೆಯನ್ನು ಕನ್ನಡ ಭಾಷೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ” ಎಂದು ಚಿನ್ನಪ್ಪ ವಾದಿಸಿದ್ದಾರೆ. ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡ ನಂತರ ಕಮಲ್ ಹಾಸನ್ ನೀಡಿದ ಉತ್ತರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ವೇಳೆ ನ್ಯಾಯಾಲಯ, 75 ವರ್ಷಗಳ ಹಿಂದೆ ಇದೇ ರೀತಿಯ ಹೇಳಿಕೆ ನೀಡಿದ್ದ ರಾಜಗೋಪಾಲ್ ಆಚಾರ್ಯ ಅವರ ಉದಾಹರಣೆಯನ್ನು ಉಲ್ಲೇಖಿಸಿದೆ.

“ರಾಜಗೋಪಾಲ್ ಅವರು 75 ವರ್ಷಗಳ ಹಿಂದೆ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ನಂತರ ಅವರು ಕ್ಷಮೆಯಾಚಿಸಿದರು. ಈಗ ನೀವು ನಿಮ್ಮ ಚಿತ್ರದ ಬಿಡುಗಡೆಗೆ ರಕ್ಷಣೆ ಕೋರುತ್ತಿದ್ದೀರಿ. ಕ್ಷಮೆಯಾಚಿಸಬೇಕಾಗಿತ್ತು” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...