Homeಮುಖಪುಟ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ ಎಂದು ಶರದ್ ಪವಾರ್‌ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’’ನೀವು ಜಾತ್ಯಾತೀತರಾಗಿ ಮಾರ್ಪಾಡಾಗಿದ್ದೀರಾ’’ ಎಂದು ಪ್ರಶ್ನಿಸಿದ್ದು, ಇದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಶರದ್ ಪವಾರ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರದಲ್ಲಿ, ”ರಾಜ್ಯಪಾಲರು ಬಳಸಿದ ಭಾಷೆಯನ್ನು ನೋಡಿ ಆಘಾತಕ್ಕೊಳಗಾದೆ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಜ್ಯಪಾಲರು ಈ ವಿಷಯದ ಬಗ್ಗೆ ತಮ್ಮ ಸ್ವಂತ ದೃಷ್ಟಿಕೋನಗಳನ್ನು ಮತ್ತು ಅಭಿಪ್ರಾಯಗಳನ್ನು ಹೊಂದಬಹುದು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮುಖ್ಯಮಂತ್ರಿಗೆ ಅವರು ತಮ್ಮ ಸಲಹೆಗಳನ್ನು ತಿಳಿಸುವ ಅಧಿಕಾರವನ್ನು ನಾನು ಪ್ರಶಂಸಿಸುತ್ತೇನೆ. ಆದಾಗ್ಯೂ, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ” ಎಂದು ಅವರು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ರಾಜ್ಯಪಾಲರು ಉದ್ಧವ್ ಠಾಕ್ರೆಗೆ ಸೋಮವಾರ ಬರೆದ ಪತ್ರದಲ್ಲಿ, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪೂಜಾ ಸ್ಥಳಗಳನ್ನು ಕೂಡಲೇ ಪುನಃ ತೆರೆಯಲು ಆದೇಶವನ್ನು ನೀಡುವಂತೆ ಕೋರಿದ್ದರು. “ನೀವು ಹಿಂದುತ್ವದ ಕಟ್ಟಾ ಸಮರ್ಥಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ನೀವು ಭಗವಾನ್ ರಾಮನ ಬಗ್ಗೆ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದೀರಿ. ನೀವು ಪಂಡರಪುರದ ವಿಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಆಶಾಡಿ ಏಕಾದಶಿಯ ಪೂಜೆ ನಡೆಸಿದ್ದೀರಿ” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದ್ದರು.

“ಪೂಜಾ ಸ್ಥಳಗಳ ಪುನರಾರಂಭವನ್ನು ಮತ್ತೆ ಮತ್ತೆ ಮುಂದೂಡಲು ನೀವು ಯಾವುದೇ ದೈವಿಕ ಮುನ್ಸೂಚನೆಯನ್ನು ಪಡೆದಿದ್ದೀರ ? ಅಥವಾ ನೀವು ‘ಜಾತ್ಯತೀತ’ರಾಗಿ ಮಾರ್ಪಟ್ಟಿದ್ದೀರಾ, ಹಿಂದೆ ನೀವು ಆ ಪದವನ್ನು ದ್ವೇಷಿಸುತ್ತಿದ್ದಿರಿ”

-ಭಗತ್‌ ಸಿಂಗ್ ಕೋಶ್ಯರಿ, ಮಹಾರಾಷ್ಟ್ರ ರಾಜ್ಯಪಾಲ

ಈ ಪತ್ರಕ್ಕೆ ಮುಖ್ಯಮಂತ್ರಿ ಠಾಕ್ರೆ ಪ್ರತಿಕ್ರಿಯಿಸಿದ್ದು, ತಮ್ಮ ಹಿಂದುತ್ವಕ್ಕೆ ರಾಜ್ಯಪಾಲರಿಂದ ಅಥವಾ ಯಾರಿಂದಲೂ ಪ್ರಮಾಣಪತ್ರ ಅಗತ್ಯವಿಲ್ಲ. ತಾನು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿರುವ ಅವರು, “ನಾನು ದೈವಿಕ ಮುನ್ಸೂಚನೆಗಳನ್ನು ಪಡೆಯುತ್ತಿದ್ದೇನೆ ಎಂದು ನೀವು ಹೇಳಿದ್ದೀರಾ? ಬಹುಶಃ ನೀವು ಅವುಗಳನ್ನು ಪಡೆದುಕೊಂಡಿರಬಹುದು ಆದರೆ ನಾನು ಅಷ್ಟು ದೊಡ್ಡವನಲ್ಲ” ಎಂದು ಬರೆದಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವುದು ಅಥವಾ ವಿಳಂಬ ಮಾಡುವುದು “ಜಾತ್ಯತೀತತೆಯ ಪ್ರಶ್ನೆಯಲ್ಲ” ಎಂದು ಠಾಕ್ರೆ ರಾಜ್ಯಪಾಲರಿಗೆ ನೆನಪಿಸಿದ್ದು, ಕೊಶ್ಯರಿ ಅವರು ತಮ್ಮದೇ ಆದ ಸಾಂವಿಧಾನಿಕ ಪ್ರಮಾಣವನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನೀವು ಕೂಡ ‘ಜಾತ್ಯತೀತ’ ಪದವನ್ನು ಹೊಂದಿರುವ ಸಂವಿಧಾನದ ಮೂಲಕ ಪ್ರತಿಜ್ಞೆ ಮಾಡಿದ್ದೀರಿ ಎಂಬುದನ್ನು ನೀವು ಮರೆತಿದ್ದೀರಾ? ನೀವು ಅದನ್ನು ತಿರಸ್ಕರಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...