Homeಕರ್ನಾಟಕಗ್ಯಾರಂಟಿ ಮುಂದಿಟ್ಟು ಚುನಾವಣೆ ಎದುರಿಸಲು ಸಿದ್ದರಿದ್ದೀರಾ?: ಮೋದಿಗೆ ಸಿಎಂ ಸಿದ್ದು ಸವಾಲು

ಗ್ಯಾರಂಟಿ ಮುಂದಿಟ್ಟು ಚುನಾವಣೆ ಎದುರಿಸಲು ಸಿದ್ದರಿದ್ದೀರಾ?: ಮೋದಿಗೆ ಸಿಎಂ ಸಿದ್ದು ಸವಾಲು

- Advertisement -
- Advertisement -

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ”ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿ” ಎಂದು ಮೋದಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

”ಮೋದಿಯವರೆ, ಗ್ಯಾರೆಂಟಿ ಯೋಜನೆಗಳನ್ನು ವಿರೋಧ ಮಾಡುತ್ತಿರುವುದು ವೈಯಕ್ತಿಕ ಅಭಿಪ್ರಾಯವೇ? ಪ್ರಧಾನಿ ಅಭಿಪ್ರಾಯವೇ? ಅಥವಾ ಪಕ್ಷದ ಅಭಿಪ್ರಾಯವೇ?” ಎಂದು ಪ್ರಶ್ನಿಸಿದ್ದಾರೆ.

”ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿ, ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ ನಮ್ಮ ಸರ್ಕಾರದ ಗಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆ ಮಾಡಿದರೂ ಹೋರಾಟ ನಡೆಸುವುದಾಗಿ ಬಿ.ಎಸ್.ಯಡಿಯೂರಪ್ಪ ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು??” ಎಂದು ಕೇಳಿದ್ದಾರೆ.

”ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್‌ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನಿ ಹಾಲು ಉಚಿತವಾಗಿ ನೀಡುತ್ತೇವೆಂದು ವಿಧಾನಸಭೆ ಚುನಾವಣೆಯ ಪುಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇವು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ? ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000ರೂ. ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಮೊತ್ತವನ್ನು 3,000ಕ್ಕೆ ಹಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆಯಲ್ಲವೇ? ಕಿಸಾನ್‌ ಸಮ್ಮಾನ್ ಅನ್ನು ಹೇಗೆ ವ್ಯಾಖ್ಯಾನಿಸುತ್ತೀರಿ? ನಾವು ಐದು ಕೆ.ಜಿ ಅಕ್ಕಿ ಹೆಚ್ಚುವರಿಯಾಗಿ ನೀಡಿದರೆ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದಾದರೆ, ಐದು ಕೆ.ಜಿ ಅಕ್ಕಿ ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆ’ಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ” ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಕೂಡ ಮಾಡಿದ್ದು, ”ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...