Homeಕರ್ನಾಟಕಭಯ ಹುಟ್ಟಿಸುವ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?: ಅಮಿತ್‌ ಶಾ ದಂಗೆ ಹೇಳಿಕೆಗೆ ಜೈರಾಮ್ ರಮೇಶ್ ತಿರುಗೇಟು

ಭಯ ಹುಟ್ಟಿಸುವ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?: ಅಮಿತ್‌ ಶಾ ದಂಗೆ ಹೇಳಿಕೆಗೆ ಜೈರಾಮ್ ರಮೇಶ್ ತಿರುಗೇಟು

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ನೀಡಿದ್ದ ಹೇಳಿಕೆಗೆ ಇದು ಭಯಪಡಿಸುವ ಹೇಳಿಕೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

”ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸರ್ಕಾರ ರಚಿಸಿದರೆ ರಾಜ್ಯವು ಗಲಭೆಗಳಿಂದ ತುಂಬಿಹೋಗುತ್ತದೆ. ವಂಶಾಡಳಿತ ಮುನ್ನೆಲೆಗೆ ಬರುತ್ತದೆ” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಜೈರಾಮ್ ರಮೇಶ್ ಅವರು, ”ಭಯ ಹುಟ್ಟುಹಾಕುವ ಸಲುವಾಗಿಯೇ ಇಂತಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಮಿತ್ ಶಾ ಹೇಳಿಕೆಯು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ವಿಧಾನಸಭೆ ಚುನಾವಣೆ ಎಂದರೆ ಕೇವಲ ಶಾಸಕರನ್ನು ಆರಿಸುವುದಲ್ಲ, ಬದಲಾಗಿ ರಾಜ್ಯದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಿಡುವುದು” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯು 6.5 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಬುಧವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಶಾ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ”ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆಗಳು ಆಗುತ್ತವೆ’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಕರ್ನಾಟಕ ರಾಜ್ಯದ ಜನತೆ ಕೆಟ್ಟವರಿದ್ದಾರೆಯೇ? ಕಾಂಗ್ರೆಸ್ ಸರಕಾರ ಆಡಳಿತ ಮಾಡಿಲ್ಲವೇ?’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

”ಕಾಂಗ್ರೆಸ್ ಚುನಾವಣೆಯನ್ನೇ ಮಾಡಿಲ್ಲವೇ? ಶಾಂತಿ ಪ್ರಿಯ ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡುತ್ತಿರುವ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು” ಎಂದು ಇದೇ ವೇಳೆ ತಾಕೀತು ಮಾಡಿದರು.

”ಪ್ರಧಾನಿ ಮೋದಿ, ಅಮಿತ್ ಶಾ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಪ್ರಚಾರ ಮಾಡುವುದನ್ನು ಗಮನಿಸಿದರೆ ಅವರು ಹತಾಶರಾಗಿದ್ದು, ಮೋದಿ ಹಾಗೂ  ಶಾ ನೋಡಿ ಮತ ನೀಡಿ ಎಂದು ಬಸವರಾಜ ಬೊಮ್ಮಾಯಿ ಕೇಳುತ್ತಿದ್ದಾರೆ. ರಾಜ್ಯದ ಜನರಿಗೆ ಬಿಜೆಪಿ ಮತ್ತು ಬೊಮ್ಮಾಯಿ ನೀವೇನು ಮಾಡಿದ್ದೀರಿ? ಎಂಬುದನ್ನು ಜನ ಕೇಳುತ್ತಿದ್ದಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

”ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದ್ದು, ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ಒಂದು ಕಡೆ ಭ್ರಷ್ಟಾಚಾರ, ಇನ್ನೊಂದು ಕಡೆ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಅನೇಕ ನ್ಯೂನತೆಗಳಿವೆ. ಬಿಜೆಪಿ ಸರಕಾರ ತೆಗೆದು ಹಾಕಲು ಜನರು ತೀರ್ಮಾನ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...