Homeಮುಖಪುಟಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

- Advertisement -
- Advertisement -

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ

ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ ಸಹಚರರಾದ ಕೃಷ್ಣಕುಮಾರ್ ಮತ್ತು ಅಪ್ಪು ಕೂಡ ಪೊಲೀಸರಿಗೆ ಬೇಕಾಗಿದ್ದಾರೆ. ಆರ್ಮ್‌ಸ್ಟ್ರಾಂಗ್ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವ್ಯಾಪಾರಿ ಕುಟುಂಬದ ಕಾನೂನು ಪದವೀಧರನಾಗಿರುವ ಆರೋಪಿ ಸೆಂಥಿಲ್ ತಮಿಳುನಾಡಿನಲ್ಲಿ ಆರು ಕೊಲೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎಂದು ತಮಿಳುನಾಡು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸುಲಿಗೆ, ಹಿಂಸಾಚಾರ ಮತ್ತು ‘ಕಟ್ಟೆ’ ಪಂಚಾಯತ್‌ಗಳನ್ನು ನಿರ್ವಹಿಸುವುದು ಸೇರಿದಂತೆ ಹಲವು ಅಪರಾಧಗಳಲ್ಲಿ ಅವನು ಭಾಗಿಯಾಗಿದ್ದರೂ, ಈ ವರೆಗೆ ಆತ ಪೊಲೀಸ್ ಬಲೆಗೆ ಬಿದ್ದಿಲ್ಲ ಎಂದು ವರದಿಯಾಗಿದೆ.

ವಾಷರ್‌ಮೆನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೆಂಥಿಲ್ ಅವರನ್ನು A+ ಹಿಸ್ಟರಿ ಶೀಟರ್ ಎಂದು ವರ್ಗೀಕರಿಸಲಾಗಿದೆ. ಸೆಂಥಿಲ್ ಅಪಾಯಕಾರಿ ಆರೋಪಿಯಾಗಿದ್ದು, ಆತನ ಚಲನವಲನವನ್ನು ನಿರ್ಬಂಧಿಸಲು ಪೊಲೀಸರು ಬ್ಯೂರೋ ಆಫ್ ಇಮಿಗ್ರೇಷನ್‌ಗೆ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಅನ್ನು ಸಹ ಸಲ್ಲಿಸಿದ್ದಾರೆ. ರೆಡ್ ಕಾರ್ನರ್ ನೋಟಿಸ್ ಅಂತರಾಷ್ಟ್ರೀಯ ಕಾನೂನು ಜಾರಿ ಸಂಸ್ಥೆಗಳು ಸೆಂಥಿಲ್ ಅನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸಲು ಅನುವು ಮಾಡಿಕೊಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈ ಪೊಲೀಸ್ ಕಮಿಷನರ್ ಎಂ. ಅರುಣ್ ವಿಶೇಷ ತಂಡವನ್ನು ರಚಿಸಿದ್ದು, ಸೆಂಥಿಲ್ ಪತ್ತೆಗೆ ನಿರಂತರ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ. ಹದಿನೇಳು ಪೊಲೀಸ್ ತಂಡಗಳು ಪ್ರಸ್ತುತ ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ತನಿಖೆ ನಡೆಸುತ್ತಿವೆ, ಇದು ಇಲ್ಲಿಯವರೆಗೆ 27 ವ್ಯಕ್ತಿಗಳ ಬಂಧನ ನಡೆಸಲಾಗಿದೆ. ಇವರಲ್ಲಿ ಭಾರಿ ಕ್ರಿಮಿನಲ್‌ಗಳು, ರೌಡಿ ಶೀಟರ್‌ಗಳು ಮತ್ತು ಎಐಎಡಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿವೆ.

ಕೊಲೆಯಾಗಿ ಸಮಯ ಕಳೆದರೂ, ಆರೋಪಿ ಸೆಂಥಿಲ್‌ನನ್ನು ಹುಡುಕಲು ಪೊಲೀಸರು ಆತನ ಸುಮಾರು 20 ವರ್ಷಗಳಷ್ಟು ಹಳೆಯ ಪೋಟೋವನ್ನು ಅವಲಂಬಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವಿವರವಾದ 5,000 ಪುಟಗಳ ಚಾರ್ಜ್ ಶೀಟ್‌ನಲ್ಲಿ ಆರ್ಮ್‌ಸ್ಟ್ರಾಂಗ್ ಹತ್ಯೆ ಮಾಡಲು ಮೂರು ಗ್ಯಾಂಗ್‌ಗಳು ಸಹಕರಿಸಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...