Homeಮುಖಪುಟರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕ್ಯಾಪ್ಟರ್ ಪತನ: 10 ಅಂಶಗಳು

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕ್ಯಾಪ್ಟರ್ ಪತನ: 10 ಅಂಶಗಳು

ಸದ್ಯಕ್ಕೆ 5 ಮೃತದೇಹಗಳು ಪತ್ತೆಯಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ 3 ಜನರನ್ನು ಕೂನೂರ್ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

- Advertisement -
  1. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿ ಹಿರಿಯ ರಕ್ಷಣಾ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್‌ನಲ್ಲಿ ಪತನಗೊಂಡಿದೆ.
  2. IAFನ ಹೊಸ Mi-17 V5 ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುವಾಗ 12.20 ರ ಸಮಯದಲ್ಲಿ ಈ ದುರ್ಘಟನೆ ಜರುಗಿದೆ.
  3. ಕೊಯಮತ್ತೂರಿನ ಸೂಲೂರಿನ ಸೇನಾ ನೆಲೆಯಿಂದ  Mi ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನೀಲಗಿರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಚಾಲ್ಲಿಯಲ್ಲಿದೆ.
  4. ರಾವತ್ ಜೊತೆಯಲ್ಲಿ ಅವರ ಪತ್ನಿ ಮಧುಲಿಕಾ ರಾವತ್, ಅವರ ವಯಕ್ತಿಕ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು 09 ಜನರು ಸೇರಿ ಒಟ್ಟು 14 ಮಂದಿ ಇದ್ದರು ಎನ್ನಲಾಗಿದೆ.
  5. ಸದ್ಯಕ್ಕೆ 5 ಮೃತದೇಹಗಳು ಪತ್ತೆಯಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ 3 ಜನರನ್ನು ಕೂನೂರ್ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
  6. ಕೊಯಮತ್ತೂರು ಮತ್ತು ಸುಲೂರ್ ನಡುವೆ ಮಿಲಿಟರಿ ಹೆಲಿಕಾಪ್ಟರ್ ಅಪಘಾತದ ಘಟನೆಯ ನಂತರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಇಂದು ಸಂಜೆ ಚೆನ್ನೈ ವಿಮಾನ ನಿಲ್ದಾಣದಿಂದ ಕೊಯಂಬತ್ತೂರ್‌ಗೆ ತೆರಳಿ ನಂತರ ನೀಲಗಿರಿಗೆ ತೆರಳಲಿದ್ದಾರೆ.
  7. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಟ್ವಿಟರ್‌ನಲ್ಲಿ ತಿಳಿಸಿದೆ.
  8. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಯುತ್ತಿದೆ. ರಾಜನಾಥ್‌ ಸಿಂಗ್ ಅವರು ಪ್ರಧಾನಿಗೆ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.
  9. ಪೂರ್ಣ ಮೂರು ವರ್ಷಗಳ ಅವಧಿಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಂತರ ರಾವತ್ ಅವರು ಡಿಸೆಂಬರ್ 31, 2019 ರಂದು ಭಾರತದ ಮೊದಲ ಸಿಡಿಎಸ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
  10. ಫೆಬ್ರವರಿ 3, 2015 ರಂದು ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿ ಚೀತಾ ಅಪಘಾತದಲ್ಲಿ ರಾವತ್ ಅಪಾಯದಿಂದ ಪಾರಾಗಿದ್ದರು. ಆ ಸಮಯದಲ್ಲಿ ಅವರು ಲೆಫ್ಟಿನೆಂಟ್ ಜನರಲ್ ಆಗಿದ್ದರು.

- Advertisement -

ಇದನ್ನೂ ಓದಿ: ತಮಿಳುನಾಡು: ಹಿರಿಯ ರಕ್ಷಣಾ ಅಧಿಕಾರಿಗಳಿದ್ದ ಸೇನಾ ಹೆಲಿಕಾಪ್ಟರ್ ಪತನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...