Homeಮುಖಪುಟಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

ಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯ ಪೀಠೋಪಕರಣಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಕಳೆದ ವಾರ ಬಂಧಕ್ಕೊಳಗಾಗಿ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೇನಾಧಿಕಾರಿಯ ಸ್ನೇಹಿತೆ, ಇದೀಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಗೆಳೆಯನನ್ನು ಅಕ್ರಮವಾಗಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಪೊಲೀಸರನ್ನು ಶಿಸ್ತಿನ ಪ್ರಕ್ರಿಯೆಯ ಭಾಗವಾಗಿ ಅಮಾನತುಗೊಳಿಸಲಾಗಿದೆ ಎಂದು ಒಡಿಶಾ ಪೊಲೀಸರ ಉನ್ನತ ಮೂಲಗಳು ತಿಳಿಸಿದೆ.

“ಕಳೆದ ಭಾನುವಾರ ರಾತ್ರಿ 1 ಗಂಟೆಗೆ ನನ್ನ ರೆಸ್ಟೋರೆಂಟ್ ಮುಚ್ಚಿ ನಾನು ನನ್ನ ಗೆಳೆಯನ ಜೊತೆ ಮನೆ ಕಡೆಗೆ ಹೋಗುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಪುರುಷರ ತಂಡವೊಂದು ನಮ್ಮ ಮೇಲೆ ದಾಳಿ ಮಾಡಿತ್ತು. ಅವರಿಂದ ತಪ್ಪಿಸಿಕೊಂಡು, ಈ ಕುರಿತು ದೂರು ದಾಖಲಿಸಲು ಭರತ್‌ಪುರ ಪೊಲೀಸ್ ಠಾಣೆಗೆ ನಾವು ತೆರಳಿದ್ದೆವು. ನಾವು ಠಾಣೆಗೆ ತಲುಪಿದಾಗ, ಅಲ್ಲಿ ಸಿವಿಲ್ ಡ್ರೆಸ್‌ನಲ್ಲಿ ಒಬ್ಬರು ಮಹಿಳಾ ಪೇದೆ ಮಾತ್ರ ಇದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿದರು” ಎಂದು ಸೇನಾಧಿಕಾರಿಯ ಸ್ನೇಹಿತೆ ಹೇಳಿದ್ದಾರೆ.

“ಮಹಿಳಾ ಪೇದೆ ದೂರು ಸ್ವೀಕರಿಸುವ ಬದಲು ನಮಗೆ ಅಸಭ್ಯವಾಗಿ ನಿಂದಿಸಲು ಶುರು ಮಾಡಿದರು. ಈ ವೇಳೆ ಅಲ್ಲಿಗೆ ಬಂದ ಕೆಲ ಪುರುಷ ಸಿಬ್ಬಂದಿ ನನ್ನ ಗೆಳೆಯನ ಬಳಿ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದರು. ಬಳಿಕ ಅವರು, ನನ್ನ ಗೆಳೆಯನನ್ನು ಸೆಲ್‌ಗೆ ಹಾಕಿದರು. ಆಗ ನಾನು ಸೇನಾಧಿಕಾರಿಯನ್ನು ಈ ರೀತಿ ಸೆಲ್‌ಗೆ ಹಾಕುವಂತಿಲ್ಲ ಎಂದು ಜೋರಾದ ಧ್ವನಿಯಲ್ಲಿ ಹೇಳಿದೆ. ಆಗ ಇಬ್ಬರು ಮಹಿಳಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಅವರಿಂದ ಬಿಡಿಸಿಕೊಳ್ಳಲು ಒಬ್ಬರ ಕೈಗೆ ಕಚ್ಚಿದೆ. ಆಗ ಅವರು ಜಾಕೆಟ್‌ನಿಂದ ನನ್ನನ್ನು ಕಟ್ಟಿದಂತೆ ಮಾಡಿ ಕೋಣೆಯೊಂದರಲ್ಲಿ ಹಾಕಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಸ್ವಲ್ಪ ಸಮಯದ ನಂತರ, ಪುರುಷ ಅಧಿಕಾರಿಯೊಬ್ಬರು ಕೋಣೆಯ ಬಾಗಿಲು ತೆರೆದರು. ನನ್ನ ಸ್ತನಗಳ ಮೇಲೆ ಹಲವಾರು ಬಾರಿ ಒದ್ದರು. ಅವರು ತನ್ನ ಪ್ಯಾಂಟ್ ಬಿಚ್ಚಿದರು. ನನ್ನ ಪ್ಯಾಂಟ್ ಅನ್ನೂ ಬಲವಂತವಾಗಿ ಬಿಚ್ಚಿಸಿದರು” ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶ್ಲೀಲ ಸನ್ನೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮಹಿಳೆಯ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, “ಕೋಲ್ಕತ್ತಾದ 22ನೇ ಸಿಖ್ ರೆಜಿಮೆಂಟ್‌ಗೆ ನಿಯೋಜಿಸಲಾಗಿರುವ ಸೇನಾಧಿಕಾರಿ ಮತ್ತು ಅವರ ಸ್ನೇಹಿತೆ ಕುಡಿದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯೊಳಗಿನ ಕಂಪ್ಯೂಟರ್ ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೇನಾ ಅಧಿಕಾರಿಯ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ” ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆರೋಪ-ಪ್ರತ್ಯಾರೋಪಗಳ ನಡುವೆ, ಪೊಲೀಸ್ ಮಹಾನಿರ್ದೇಶಕ ವೈ.ಬಿ. ಖುರಾನಿಯಾ ಅವರ ನಿರ್ದೇಶನದ ಮೇರೆಗೆ ಚಂಡಕಾ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದು, ಸೆಪ್ಟೆಂಬರ್ 15ರಂದು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಪುರುಷರ ಗುಂಪು ದಾಳಿ ನಡೆಸಿದೆ ಎಂಬ ಮಹಿಳೆಯ ಆರೋಪದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಭುವನೇಶ್ವರ ನಗರದ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಯ ಬಳಿಕ ಅಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಬ್ರೇಸ್ ಮತ್ತು ಕೈಯಲ್ಲಿ ಪ್ಲಾಸ್ಟರ್ ಹಾಕಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆ ಸಂಬಂಧ ಸ್ವಯಂಪ್ರೇರಿತ ತನಿಖೆ ಕೈಗೊಂಡಿದ್ದು ಪೊಲೀಸರಿಂದ ವರದಿ ಕೇಳಿದೆ. ಈ ಪ್ರಕರಣದ ತನಿಖೆಯನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಮಹಿಳೆ ಸೇನಾಧಿಕಾರಿಯ ಭಾವಿ ಪತ್ನಿ ಹಾಗೂ ನಿವೃತ್ತ ಸೇನಾಧಿಕಾರಿಯ ಮಗಳು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...