Homeಮುಖಪುಟಪೂಂಛ್‌ನಲ್ಲಿ ಸೇನೆಯಿಂದ ಮೂವರು ನಾಗರಿಕರ ಹತ್ಯೆ ಆರೋಪ: ತನಿಖೆಗೆ ಆದೇಶ, ಅಧಿಕಾರಿಗಳ ವರ್ಗಾವಣೆ

ಪೂಂಛ್‌ನಲ್ಲಿ ಸೇನೆಯಿಂದ ಮೂವರು ನಾಗರಿಕರ ಹತ್ಯೆ ಆರೋಪ: ತನಿಖೆಗೆ ಆದೇಶ, ಅಧಿಕಾರಿಗಳ ವರ್ಗಾವಣೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನೆಯ ವಶದಲ್ಲಿದ್ದ ಮೂವರು ನಾಗರಿಕರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಭಾರತೀಯ ಸೇನೆಯು ಆದೇಶಿಸಿದೆ.

ಐವರು ಯೋಧರು, ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ  ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಸೇನೆಯು ಈ ಬಗ್ಗೆ ಆಂತರಿಕ ತನಿಖೆ ನಡೆಸುತ್ತಿದೆ ಜೊತೆಗೆ ತನಿಖೆಯ ನಿಷ್ಪಕ್ಷಪಾತವನ್ನು ಖಚಿತಪಡಿಸಿಕೊಳ್ಳಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯು ಹೇಳುತ್ತಿದೆ. ಈ ಬಗ್ಗೆ 72 ಗಂಟೆಗಳಲ್ಲಿ ತನಿಖೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈ ಕುರಿತ ತನಿಖೆಯ ಹಂತದಲ್ಲೇ ಸೇನೆಯು ರಾಜೌರಿಯಲ್ಲಿನ ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಅವರನ್ನು ವರ್ಗಾವಣೆ ಮಾಡಿದೆ ಎಂದು ಟ್ರಿಬ್ಯೂನ್ ವರದಿ ಮಾಡಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸೇನೆಯು, ಈ ವಿಷಯವು ತನಿಖೆಯ ಹಂತದಲ್ಲಿದೆ ಮತ್ತು ತನಿಖೆ ನಡೆಸುವಲ್ಲಿ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡುವುದಾಗಿ ಹೇಳಿತ್ತು.

ಇದನ್ನು ಓದಿ: ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...