Homeಮುಖಪುಟಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ?- ಮನಿಶ್ ತಿವಾರಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರು ವಾಟ್ಸಾಪ್‌ನಲ್ಲಿ ನಡೆಸಿರುವ ಸಂಭಾಷಣೆಗಳನ್ನು ಮುಂಬೈ ಪೊಲೀಸರು ಬಹಿರಂಗಗೊಳಿಸಿದ್ದು, ಅದರಲ್ಲಿ ಹತ್ತಾರು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಗಾಗಿ ಇದರ ಮೇಲೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಬಹಿರಂಗಗೊಂಡಿರುವ ವಾಟ್ಸಾಪ್ ಚಾಟ್‌ನಲ್ಲಿ, ಪುಲ್ವಾಮಾ ದಾಳಿಯಲ್ಲಿನ ಸೈನಿಕರ ಸಾವನ್ನು ಸಂಭ್ರಮಿಸಿರುವುದು, ಬಿಜೆಪಿಯೊಂದಿಗಿನ ಸಂಬಂಧ, ಪ್ರಧಾನಿ ಸೇರಿದಂತೆ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರ ಹೆಸರುಗಳು ಉಲ್ಲೇಖವಾಗಿರುವುದು ಕಂಡುಬಂದಿತ್ತು. ಜೊತೆಗೆ ತಮ್ಮ ಚಾನೆಲ್‌ಗೆ ಕರೆದು ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಿಸುತ್ತಿದ್ದ ಕಂಗನಾ ರಣಾವತ್ ಬಗ್ಗೆಯೂ ಅಶ್ಲೀಲವಾಗಿ ಮಾತನಾಡಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಕಾಂಗ್ರೆಸ್ ಸಂಸದ ಮನಿಶ್ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ವಿವಾದಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. “ಕೆಲವು ಮಾಧ್ಯಮಗಳು ಮಾಡುತ್ತಿರುವ ವರದಿಗಳು ನಿಜವಾಗಿದ್ದರೆ, 2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ? ಜಂಟಿ ಸಂಸದೀಯ ತನಿಖೆಯ ಅಗತ್ಯವಿದೆ” ಎಂದು ಮನಿಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

“ಯಾರೇ ಆದರೂ ಮತ್ತೊಬ್ಬರ ಖಾಸಗೀ ಚಾಟ್‌ಗಳನ್ನು ತನಿಖೆ ಮಾಡಬಾರದು. ಆದರೆ ವಾಯುದಾಳಿ ಮತ್ತು ಚುನಾವಣೆಗಳ ನಡುವೆ ಸಂಬಂಧವಿದ್ದರೆ ಅದನ್ನು ತನಿಖೆ ಮಾಡಲೇಬೇಕು” ಎಂದು ಹಿಂದೂಸ್ಥಾನ್ ಟೈಮ್ಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಪಿ ಚಿದಂಬರಂ ಟ್ವೀಟ್ ಮಾಡಿ, “ಸರ್ಜಿಕಲ್ ಸ್ಟ್ರೈಕ್‌ಗೆ ಮೂರು ದಿನಗಳ ಮೊದಲೇ ಪತ್ರಕರ್ತರಿಗೆ (ಅವರ ಸ್ನೇಹಿತರಿಗೆ) ತಿಳಿದಿದೆಯೇ? ಹೌದು ಎನ್ನುವುದಾದರೆ, ಈ ಮಾಹಿತಿಯನ್ನು ಅವರು ಗೂಢಾಚಾರರು ಮತ್ತು ಪಾಕಿಸ್ತಾನಕ್ಕಾಗಿ ಕೆಲಸ ಮಾಡುವವರೊಂದಿಗೆ ಹಂಚಿಕೊಂಡಿಲ್ಲ ಎನ್ನುವುದಕ್ಕೆ ಭರವಸೆ ಏನು? ನಿಮಗೆ ಮಾತ್ರ ತಿಳಿದಿರಬೇಕಾದ ವಿಷಯ ನಿಮ್ಮ ಸರ್ಕಾರವನ್ನು ಬೆಂಬಲಿಸುವ ಪತ್ರಕರ್ತನಿಗೆ ಹೇಗೆ ತಿಳಿದಿದೆ” ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ ಟ್ವೀಟ್ ಮಾಡಿದ್ದು, “ರಾಷ್ಟ್ರಕ್ಕೆ ತಿಳಿಯಬೇಕಿದೆ. ಸರ್ಕಾರವು ಬಾಲಾಕೋಟ್ ದಾಳಿ ಮತ್ತು 370 ನೇ ವಿಧಿಯ ರದ್ದತಿಯ ಪ್ರಾಥಮಿಕ ಮಾಹಿತಿಯನ್ನು ಪತ್ರಕರ್ತರಿಗೆ ಬಿಟ್ಟುಕೊಟ್ಟಿದೆ ಎಂಬುದನ್ನು ವಾಟ್ಸಾಪ್ ಸಂದೇಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಏನಾಗುತ್ತಿದೆ? ಮೋದಿ-ಶಾ ಮಾತ್ರ ಉತ್ತರಿಸಬೇಕೆಂಬುದು ನನ್ನ ಬಯಕೆ ಮಾತ್ರವೆ?” ಎಂದು ಪ್ರಶ್ನಿಸಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ನಡುವಿನ 500 ಪುಟಗಳ ವಾಟ್ಸಾಪ್ ಸಂಭಾಷಣೆಯು ಇತ್ತೀಚೆಗೆ ಬಹಿರಂಗಗೊಂಡಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಪಕ್ಷವು ಬಿಜೆಪಿಯನ್ನು ಪ್ರಶ್ನಿಸಬೆಕು. ಇದು ಸಮಸ್ಯೆಯನ್ನು ಮೃದುವಾಗಿ ನಿರ್ವಹಿಸುವ ಸಮಯವಲ್ಲ” ಎಂದು ಹೆಸರು ಹೇಳದೆ ಟೀಕಿಸುವ ಸಮಯವಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರಾದ ಜೈರಾಮ್ ರಮೇಶ್, ಜಿತೇಂದ್ರ ಸಿಂಗ್, ಅಭಿಷೇಕ್ ಮನು ಸಿಂಗ್ವಿ ಮತ್ತು ಕಾರ್ತಿ ಚಿದಂಬರಂ ಅವರು ಶನಿವಾರ ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ.

ಕಾರ್ತಿ ಚದಂರಂ ಟ್ವೀಟ್ ಮಾಡಿ, “ಅರ್ನಾಬ್‌ಗೆ ಸಂಬಂಧಿಸಿದ ವಿವಾದಗಳ ಬಗ್ಗೆ ಬಿಜೆಪಿ ಏನಾದರೂ ಹೇಳುತ್ತದೆಯೇ? ಆಥವಾ ಇದು ಪ್ರತಿಕ್ರಿಯಿಸುವ ವಿಷಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿಲ್ಲ. ಆದರೆ ದಾಖಲೆಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುತ್ತಿದ್ದೇವೆ ಮತ್ತು ಸಮಯಕ್ಕೆ ಸ್ಪಂದಿಸುತ್ತೇವೆ ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಟ್ವೀಟ್ ಮಾಡಿ, “ಪಾಕ್ ಗಡಿಯಲ್ಲಿನ ಭಾರತದ ಕ್ರಮವನ್ನು 23.02.2019 ರ ಅರ್ನಾಬ್‌ನ ಚಾಟ್‌ಗಳು ಉಲ್ಲೇಖಿಸುತ್ತವೆ. ಸರ್ಕಾರದಲ್ಲಿನ ಹಿರಿಯರು ಯಾರಾದರೂ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆಯೇ? ಇದು ನಮ್ಮ ಸೈನಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಮತ್ತು ಇವರ ಟಿಆರ್‌ಪಿಯನ್ನು ಹೆಚ್ಚಿಸಲು ಅನುವಾಯಿತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿ, “1967 ರಿಂದ BARC ಎಂದರೆ ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ಎಂದು ತಿಳಿದಿದ್ದೆವು. ಈಗ ಅರ್ನಾಬ್ ಗೋಸ್ವಾಮಿಯ ದೆಸೆಯಿಂದಾಗಿ ಮತ್ತೊಂದು BARC – ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಲ್ – ಸುದ್ದಿಯಲ್ಲಿದೆ. ಈ ಎರಡು BARC ಗಳಲ್ಲಿ ಮೊದಲನೆಯದು ಬಲಿಷ್ಟ ಹಾಗೂ ವೈಜ್ಞಾನಿಕ ಭಾರತದ ನಿರ್ಮಾಣಕ್ಕೆ ಕೆಲಸ ಮಾಡಿದ್ದರೆ ಮತ್ತೊಂದು ಸಮೂಹ ತಪ್ಪು ಮಾಹಿತಿಯ ಹತಾರಗಳನ್ನು ಒದಗಿಸುತ್ತಾ ಜನರನ್ನು ದಿಕ್ಕು ತಪ್ಪಿಸಲು ಕೆಲಸ ಮಾಡುತ್ತಿದೆ‌.” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....