Homeಮುಖಪುಟಅರ್ನಾಬ್ ಜಾಮೀನು ಅರ್ಜಿ ವಿಚಾರಣೆ: ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ

ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ: ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ

ಮಹಾರಾಷ್ಟ್ರ ಸರ್ಕಾರವು ಅರ್ನಾಬ್‌ ಅವರ ಟ್ವೀಟ್‌ಗಳನ್ನು ,ಟಿವಿಯಲ್ಲಿ ಅವರ ಅವಹೇಳನ ಮಾತುಗಳನ್ನು ನಿರ್ಲಕ್ಷಿಸಬೇಕು ಎಂದು ನ್ಯಾಯಪೀಠ ಹೇಳಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ 2018ರ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವಂತೆ ಅರ್ನಾಬ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೊರ್ಟ್ ಬುಧವಾರ ವಿಚಾರಣೆ ನಡೆಸಿದೆ.

ಈ ವೇಳೆ ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಈ ರೀತಿ ಮೊಟಕುಗೊಳಿಸಿದರೆ ಅದು ನ್ಯಾಯದ ವ್ಯವಸ್ಥೆಯನ್ನು ನಗೆಪಾಟಲು ಮಾಡುತ್ತದೆ ಎಂದು ಹೇಳಿದೆ.

ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರ ರಜಾ ಪೀಠವು ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದೆ.

ಗೋಸ್ವಾಮಿಯವರ ಪ್ರಕರಣವು “ವೈಯಕ್ತಿಕ ಸ್ವಾತಂತ್ರ್ಯ”ಕ್ಕೆ ಸಂಬಂಧಿಸಿರುವುದರಿಂದ ಅವರನ್ನು ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿದೆಯೇ ಎಂದು ಮಹಾರಾಷ್ಟ್ರ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ನಾಳೆ ಸುಪ್ರೀಂನಲ್ಲಿ ಅರ್ನಾಬ್ ಅರ್ಜಿ ವಿಚಾರಣೆ: ಗೋಸ್ವಾಮಿಗೆ ಜೈಲೇ ಗತಿಯೋ, ಬೈಲ್ ಸಿಗುತ್ತದೋ?

ಮಹಾರಾಷ್ಟ್ರ ಸರ್ಕಾರವು ಅರ್ನಾಬ್‌ ಅವರ ಟ್ವೀಟ್‌ಗಳನ್ನು (ಟಿವಿಯಲ್ಲಿ ಅರ್ನಾಬ್ ಅವರ ಅವಹೇಳನ ಮಾತುಗಳನ್ನು) ನಿರ್ಲಕ್ಷಿಸಬೇಕು ಎಂದು ಹೇಳಿದೆ.

“ಅವರ ಸಿದ್ಧಾಂತ ಏನೇ ಇರಲಿ. ನಾನು ಕನಿಷ್ಠ ಅವರ ಚಾನೆಲ್ ಅನ್ನು ಸಹ ವೀಕ್ಷಿಸುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಸಾಂವಿಧಾನಿಕ ನ್ಯಾಯಾಲಯವು ಇಂದು ಹಸ್ತಕ್ಷೇಪ ಮಾಡದಿದ್ದರೆ, ನಾವು ನಿರ್ವಿವಾದವಾಗಿ ವಿನಾಶದ ಹಾದಿಯಲ್ಲಿ ಪ್ರಯಾಣಿಸುತ್ತಿದ್ದೇವೆ ಎಂದಾಗುತ್ತದೆ. ನೀವು ಅವರನ್ನು ನಿರಾಕರಿಸಬಹುದು. ಈ ಆರೋಪಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನದ್ದಾಗಿದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಮುಖ್ಯ ವಿಷಯವೆಂದರೆ, ಸರ್ಕಾರಗಳು ಅವರನ್ನು (ಟಿವಿಯಲ್ಲಿ ನಿಂದಿಸುವುದು) ನಿರ್ಲಕ್ಷಿಸಬೇಕು. ಇದು ಯಾವ ಆಧಾರದ ಮೇಲೆ ಚುನಾವಣೆಗಳನ್ನು ನಡೆಸುತ್ತದೆ ಎಂಬುದರ ಆಧಾರವಲ್ಲ. ಅವರು ಹೇಳುವುದು ಚುನಾವಣೆಯಲ್ಲಿ ಏನಾದರೂ ವ್ಯತ್ಯಾಸ ಉಂಟುಮಾಡುತ್ತದೆ ಎಂದು ನೀವು ಭಾವಿಸುತ್ತೀರಾ? ಎಂದು ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದೆ.

ರಾಜ್ಯ ಸರ್ಕಾರಗಳು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡರೆ, ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಅವರು ಅರಿತುಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಇದೇ ವಿಚಾರ ಬೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಿಗೂ ಅನ್ವಯ ಆಗಬೇಕಲ್ಲವಾ?

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...