Homeಮುಖಪುಟಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಅತ್ಮಹತ್ಯೆಗೊಳಗಾದ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದರಲ್ಲಿ ಅರ್ನಾಬ್ ಸೇರಿದಂತೆ ಇನ್ನಿಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ.

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೊಸ್ವಾಮಿಯನ್ನು ನಿನ್ನೆ ಮುಂಬೈ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ

ಜೊತೆಗೆ, ನಿನ್ನೆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

2018 ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿಯನ್ನು ಬೆಳಿಗ್ಗೆ ಬಂಧಿಸಲು ಅಲಿಬಾಗ್ ಪೊಲೀಸರ ತಂಡ ಹೋದಾಗ ಈ ಘಟನೆ ನಡೆದಿದೆ.

ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ನಂತರ, ಅರ್ನಾಬ್ ಗೋಸ್ವಾಮಿ ಮತ್ತು ಇತರರ ವಿರುದ್ಧ ಮುಂಬೈನ ಎನ್ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಸ್ 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯ ನಿರ್ವಹಣೆಯಿಂದ ತಡೆದು ಹಲ್ಲೆ), 504 (ಉದ್ದೇಶಪೂರ್ವಕ ಶಾಂತಿ ಕದಡುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

0
ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ...