Homeಮುಖಪುಟರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

"ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರವಿಲ್ಲದಿದ್ದರೂ, 'ಬಂಧಿಸಿ' ಎಂದು ಅರ್ನಾಬ್ ಒತ್ತಾಯಿಸುತ್ತಿದ್ದರು. ಆದರೆ ನನ್ನ ಪತಿ ಆತ್ಮಹತ್ಯೆ ಪತ್ರದಲ್ಲಿ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿದ್ದರೂ, ಯಾರನ್ನೂ ಬಂಧಿಸಿಲ್ಲ. ಇದು ನ್ಯಾಯವೇ? ಎಂದು ನಾಯಕ್ ಪತ್ನಿ ವಿಷಾದಿಸಿದರು.

- Advertisement -
- Advertisement -

2018 ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರಚೋದಿಸಿದ್ದರು ಎಂಬ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬಂಧಿಸಲಾಗಿದ್ದು, “ಇವರನ್ನು ಬಂಧಿಸಿರುವುದಕ್ಕೆ ಸಂತೋಷವಾಗಿದೆ” ಎಂದು ಅನ್ವಯ್ ನಾಯಕ್ ಅವರ ಕುಟುಂಬ ಹೇಳಿದೆ.

“ಅರ್ನಾಬ್ ಗೋಸ್ವಾಮಿ ಬಂಧನದಿಂದ ನಮಗೆ ಸಂತೋಷವಾಗಿದೆ. ಈ ಹಿಂದೆ ಪ್ರಕರಣವನ್ನು ಹಿಂಪಡೆಯುವಂತೆ ಪೊಲೀಸರಿಂದ ನಮಗೆ ಸಾಕಷ್ಟು ಒತ್ತಡವಿತ್ತು. ಹಣವನ್ನು ಹಿಂದಿರುಗಿಸುವಂತೆ ನನ್ನ ಪತಿ ಅರ್ನಾಬ್‌ಗೆ ಹಲವುಬಾರಿ ಒತ್ತಾಯಿಸಿದ್ದು, ಇದು ಅವರಿಗೆ ಸಾವು-ಬದುಕಿನ ವಿಷಯವಾಗಿದೆ ಎಂದು ಕೇಳಿಕೊಂಡಿದ್ದರು” ಎಂದು ಅದ್ನ್ಯಾ ಹೇಳಿದರು.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ರಿಪಬ್ಲಿಕ್ ಟಿವಿಯಿಂದ ಬಾಕಿ ಹಣ ಪಾವತಿ ಮಾಡದೇ ಇರುವುದೇ ನನ್ನ ತಂದೆ ಮತ್ತು ಅಜ್ಜಿಯ ಸಾವಿಗೆ ಕಾರಣವಾಗಿದೆ ಎಂದು ನಾಯಕ್ ಅವರ ಮಗಳು ಅದ್ನ್ಯಾ ಹೇಳಿದ್ದು, “ನಾವು ಈ ವಿಷಯವನ್ನು ರಾಜಕೀಯವಾಗಿಸಲು ಬಯಸುವುದಿಲ್ಲ. ಈ ಸಮಸ್ಯೆಯಿಂದಾಗಿ ನಾನು ಇಬ್ಬರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ. ಈ ಬಂಧನವನ್ನು ಬಹಳ ಹಿಂದೆಯೇ ಮಾಡಬೇಕಾಗಿತ್ತು” ಎಂದು ಅದ್ನ್ಯಾ ಹೇಳಿದರು.

ಈ ಪ್ರಕರಣವನ್ನು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧೀಕರಿಸಿದ್ದರೂ, “ಗೋಸ್ವಾಮಿ ಮತ್ತು ಇತರ ಇಬ್ಬರು ಹೆಸರನ್ನು ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದರೂ ಇದುವರೆಗೂ ಯಾವುದೇ ಬಂಧನವಾಗಿಲ್ಲ” ಎಂದು ನಾಯಕ್ ಪತ್ನಿ ಹೇಳಿದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

“ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಆತ್ಮಹತ್ಯೆ ಪತ್ರವಿಲ್ಲದಿದ್ದರೂ ಅರ್ನಾಬ್, ‘ಬಂಧಿಸಿ ಬಂಧಿಸಿ’ ಎಂದು ಒತ್ತಾಯಿಸುತ್ತಿದ್ದರು. ಆದರೆ ನನ್ನ ಪತಿ ಆತ್ಮಹತ್ಯೆ ಪತ್ರದಲ್ಲಿ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿದ್ದರೂ, ಯಾರನ್ನೂ ಬಂಧಿಸಿಲ್ಲ. ಇದು ನ್ಯಾಯವೇ?” ಎಂದು ವಿಷಾದ ವ್ಯಕ್ತಪಡಿಸಿದರು.

ಅನ್ವಯ್ ನಾಯಕ್ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...