Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...