Homeಮುಖಪುಟಭಾರತದಿಂದ ಯುಎಇಗೆ ಈ ಬಾರಿ 4,300 ಮಿಲಿಯನೇರ್‌ಗಳ ವಲಸೆ ಸಾಧ್ಯತೆ: ವರದಿ

ಭಾರತದಿಂದ ಯುಎಇಗೆ ಈ ಬಾರಿ 4,300 ಮಿಲಿಯನೇರ್‌ಗಳ ವಲಸೆ ಸಾಧ್ಯತೆ: ವರದಿ

- Advertisement -
- Advertisement -

ಈ ವರ್ಷ ಸುಮಾರು 4,300 ಮಿಲಿಯನೇರ್‌ಗಳು ಭಾರತದಿಂದ ವಲಸೆ ಹೋಗುವ ನಿರೀಕ್ಷೆಯಿದ್ದು, ಅವರಲ್ಲಿ ಹೆಚ್ಚಿನವರು ದೇಶವನ್ನು ತೊರೆದ ನಂತರ ಯುಎಇಯಲ್ಲಿ ವಾಸಿಸಲು ನಿರ್ಧರಿಸಿದ್ದಾರೆ ಎಂದು ಅಂತರಾಷ್ಟ್ರೀಯ ಹೂಡಿಕೆ ವಲಸೆ ಸಲಹಾ ಸಂಸ್ಥೆ (ಹೆನ್ಲಿ ಮತ್ತು ಪಾಲುದಾರರ) ವರದಿ ತಿಳಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿದೆ. ಚೀನಾ ಮತ್ತು ಇಂಗ್ಲೆಂಡ್‌ ನಂತರದ ಸ್ಥಾನದಲ್ಲಿ ಮಿಲಿಯನೇರ್‌ಗಳ ವಲಸೆಯ ವಿಷಯದಲ್ಲಿ ಭಾರತವು ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ.

ಈಗ ಚೀನಾವನ್ನು ಮೀರಿಸಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿರುವ ಭಾರತವು, ಮಿಲಿಯನೇರ್ ವಲಸೆ ವಿಚಾರದಲ್ಲಿ ಚೀನಾಕ್ಕಿಂತ 30%ಕ್ಕಿಂತ ಕಡಿಮೆ ಇದೆ. ಕಳೆದ ವರ್ಷದ ಜಾಗತಿಕ ಸಂಸ್ಥೆಯ ವರದಿಯಲ್ಲಿ ಭಾರತದಿಂದ 5,100 ಮಿಲಿಯನೇರ್‌ಗಳು ವಿದೇಶಕ್ಕೆ ವಲಸೆ ಹೋಗಿರುವುದನ್ನು ಎತ್ತಿ ತೋರಿಸಿತ್ತು.

ಭಾರತದಿಂದ ಪ್ರತಿ ವರ್ಷ ಸಾವಿರಾರು ಮಿಲಿಯನೇರ್‌ಗಳು ದೇಶಬಿಟ್ಟು  ಹೋಗುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಯುಎಇಗೆ ವಲಸೆ ಹೋಗುತ್ತಾರೆ. ಇದರಿಂದಾಗಿ ಕಳೆದ ದಶಕದಲ್ಲಿ 85%ದಷ್ಟು ಸಂಪತ್ತಿನ ಹೊರಹರಿವುನ ಬಗ್ಗೆ ಕಳವಳ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಅನೇಕ ಭಾರತೀಯ ಖಾಸಗಿ ಬ್ಯಾಂಕ್‌ಗಳು ಯುಎಇಯಲ್ಲಿ ವಿಸ್ತರಿಸುತ್ತಿವೆ. ಭಾರತೀಯ ಕುಟುಂಬಗಳಿಗೆ ಸಂಪತ್ತು ನಿರ್ವಹಣೆ ಸೇವೆಗಳನ್ನು ಕೆಲವು ಬ್ಯಾಂಕ್‌ಗಳು ಒದಗಿಸುತ್ತಿದೆ. ಅವುಗಳಲ್ಲಿ ಹಣಕಾಸು ಸಂಸ್ಥೆಗಳಾದ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು 360 ಒನ್ ವೆಲ್ತನ್ನು ಒಳಗೊಂಡಿವೆ ಎಂದು NDTV ವರದಿ ಮಾಡಿದೆ.

ಮಿಲಿಯನೇರ್‌ಗಳ ವಲಸೆಯು ಒಂದು ದೇಶದ ವಿದೇಶಿ ವಿನಿಮಯಗಳ ಮೇಲೆ ಗಮನಾರ್ಹ ಪ್ರಭಾವವನ್ನು ಹೊಂದಿರುವ ವಿದ್ಯಮಾನವಾಗಿದೆ, ಏಕೆಂದರೆ ಈ ಹೆಚ್ಚಿನ ನಿವ್ವಳ ಮೌಲ್ಯದ ವ್ಯಕ್ತಿಗಳು ಮತ್ತೊಂದು ದೇಶಕ್ಕೆ ವಲಸೆ ಹೋಗುವಾಗ ಅವರ ಆಸ್ತಿಯ ಗಣನೀಯ ಭಾಗ ಕೂಡ ವಿದೇಶಕ್ಕೆ ಹೋಗುತ್ತದೆ.

ಭಾರತದಿಂದ ಮಿಲಿಯನೇರ್‌ಗಳ ವಲಸೆಗೆ ಮುಖ್ಯ ಕಾರಣಗಳಲ್ಲಿ ತೆರಿಗೆ ಪ್ರಯೋಜನಗಳು, ಸುರಕ್ಷತೆ ಮತ್ತು ಆರ್ಥಿಕ ಪರಿಗಣನೆಗಳು, ನಿವೃತ್ತಿ ನಿರೀಕ್ಷೆಗಳು, ವ್ಯಾಪಾರ ಅವಕಾಶಗಳು ಮತ್ತು ಉತ್ತಮ ಜೀವನಶೈಲಿ ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...