HomeಅಂಕಣಗಳುKarnataka against SIRKarnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

- Advertisement -
- Advertisement -

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ ಆರೋಪ ಮಾಡಿವೆ.

ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ ಎಫ್‌ಐಆರ್ ಬಿಡುಗಡೆ ಮಾಡಿರುವ ಸಂಘಟನೆಗಳು, ಪತ್ತೆಯಾಗದವರು ಅಥವಾ ಗೈರು ಹಾಜರಿ, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮರಣ ಹೊಂದಿದವರು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾದವರು ಮತ್ತು ಇತರರು (ASDDO)ಎಂದು ಪಟ್ಟಿ ಮಾಡಿರುವವರ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿವೆ.

ಮರಣ ಹೊಂದಿದವರು ಮತ್ತು ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾದವರ ಸಂಖ್ಯೆಗಳಲ್ಲಿ ಕೆಲವು ದೋಷಗಳಿದ್ದರೂ, ಅದರ ಬಗ್ಗೆ ನಮಗೆ ಮೂಲಭೂತ ತಕರಾರು ಇಲ್ಲ. ಆದರೆ, ಗೈರು ಹಾಜರಿ, ಶಾಶ್ವತವಾಗಿ ಸ್ಥಳಾಂತರಗೊಂಡವರು ಮತ್ತು ಇತರರು ಎಂದು ಡಿಲೀಟ್ ಮಾಡಿರುವ ಬಗ್ಗೆ ಗಂಭೀರ ಆಕ್ಷೇಪಗಳಿವೆ ಎಂದು ಸಂಘಟನೆಗಳು ಹೇಳಿವೆ.

‘ಗೈರು ಹಾಜರಿ’ ಎಂದರೆ ಇದ್ದಾರೆ. ಆದರೆ, ಅವರು ದುಡಿಯಲು ಹೋಗಿದ್ದರಿಂದಾಗಿ ಅಥವಾ ಅನ್ಯ ಕಾರಣಕ್ಕಾಗಿ ಊರಲ್ಲಿ ಇಲ್ಲದ ಕಾರಣದಿಂದಾಗಿ ಬಿಎಲ್‌ಓ ಮತ್ತು ಅವರ ಭೇಟಿ ಸಾಧ್ಯವಾಗಿಲ್ಲ. ಇವರೆಲ್ಲಾ ಅರ್ಹ ಮತದಾರರು. ‘ಇತರರು’ ಎಂದರೆ ಎನ್ಯುಮುರೇಷನ್‌ ಫಾರಂ ಪಡೆದಿದ್ದಾರೆ, ಆದರೆ ಅದನ್ನು ಸಂಗ್ರಹಿಸಿಕೊಂಡಿಲ್ಲ [ಎನ್ಯುಮುರೇಷನ್‌ ಫಾರಂ ಕೊಡಲು ನಿರಾಕರಿಸಿದವರು ಎಂದು ಆರೋಪವನ್ನು ಅವರ ತಲೆಗೆ ಕಟ್ಟಲಾಗಿದೆ]. ‘ಸ್ಥಳಾಂತರಗೊಂಡವರು’ ಎಂದರೆ ಬಾಡಿಗೆ ಮನೆ ಬದಲಾಯಿಸಿರುವ, ಬೇರೆ ಊರಿಗೆ ಸ್ಥಳಾಂಂತರಗೊಂಡವರು. ಇವರುಗಳ ಮತಗಳನ್ನು ಡಿಲೀಟ್ ಮಾಡಿರುವುದು ಅಕ್ರಮ ಎಂದು ಆಕ್ಷೇಪ ವ್ಯಕ್ತಪಡಿಸಿವೆ.

ವೋಟನ್ನು ಹೊಸ ವಿಳಾಸಕ್ಕೆ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ನೀಡುವ ಬದಲು, ಡಿಲೀಟ್‌ ಮಾಡಲಾಗಿದೆ. ಇದರಲ್ಲಿ ಕೆಲವು ಮತಗಳು ಹಳೆಯ ಕಡೆಯೂ ಉಳಿದು ಹೋಗಿವೆ. ಹೋದವರು ಹೊಸ ಕಡೆ ಹೊಸ ಕಾರ್ಡ್‌ ಸಹ ಮಾಡಿಸಿಕೊಂಡಿದ್ದಾರೆ. ಅನೇಕರಿಗೆ ಇಲ್ಲಿಯೂ ಇಲ್ಲ, ಅಲ್ಲಿಯೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮತದಾನದ ಹಕ್ಕನ್ನೇ ಕಳೆದುಕೊಂಡವರು, ಇನ್ನೊಂದು ಕಡೆ ಹೋಗಿ ಹೊಸ ಕಾರ್ಡ್‌ ಮಾಡಿಸಿಕೊಂಡಿರುವವರು ಎಷ್ಟು ಎಂಬ ವರ್ಗೀಕರಣ ಇಲ್ಲವಾದ್ದರಿಂದ 50-50 ಚಾನ್ಸ್‌ ಎಂದು ಲೆಕ್ಕ ಹಿಡಿದರೆ ಕನಿಷ್ಟ 33 ಲಕ್ಷ ಜನ ಡಿಲೀಟ್‌ ಆಗಿದ್ದಾರೆ. ಅಂದರೆ [15+4+33=52] ಲಕ್ಷ ಕರ್ನಾಟಕದ ಅರ್ಹ ಮತದಾರರು ತಮ್ಮ ಹಕ್ಕನ್ನು ಕಳೆದುಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ದುಡಿಯುವ ಹಾಗೂ ಶೋಷಿತ ವರ್ಗಗಳಿಗೆ ಸೇರಿದ ಜನರಾಗಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ ಆರೋಪ ಮಾಡಿವೆ.

ಆಗಸ್ಟ್ 19ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಒಟ್ಟು 1,07,96,415 ಮತದಾರರನ್ನು ಎಎಸ್‌ಡಿಡಿಒ ಎಂದು ಪಟ್ಟಿ ಮಾಡಲಾಗಿದೆ. ಈ ಪೈಕಿ 15,17,056 ಪತ್ತೆಯಾಗದವರು ಅಥವಾ ಗೈರು ಹಾಜರಾದವರು, 65,45,721 ಶಾಶ್ವತವಾಗಿ ಸ್ಥಳಾಂತರಗೊಂಡವರು, 16,39,871 ಮರಣ ಹೊಂದಿದವರು, 7,09,875 ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾದವರು ಮತ್ತು 3,83,892 ಇತರರ ಎಂದು ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...