Homeಮುಖಪುಟಮೋದಿ ಆಳ್ವಿಕೆಯಲ್ಲಿ ಮೂರುವರೆ ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ: ಪ್ರಿಯಾಂಕ ಆರೋಪ

ಮೋದಿ ಆಳ್ವಿಕೆಯಲ್ಲಿ ಮೂರುವರೆ ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ: ಪ್ರಿಯಾಂಕ ಆರೋಪ

- Advertisement -
- Advertisement -

ನರೇಂದ್ರ ಮೋದಿ ಆಳ್ವಿಕೆಯಲ್ಲಿ ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 3.64 ಕೋಟಿ ಜನ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ. 

ದೇಶದ 7 ಪ್ರಮುಖ ಆದ್ಯತ ಸೆಕ್ಟರ್‌ಗಳು ನಷ್ಟದಲ್ಲಿ ಮುಳುಗಿವೆ ಎಂಬುದು ವರದಿಯಾಗಿದೆ. ಇದರಿಂದ ನಿರುದ್ಯೋಗ ಹೆಚ್ಚಾಗುತ್ತಿದ್ದು, ಇದು ಪ್ರಧಾನ ನರೇಂದ್ರ ಮೋದಿ ಸರ್ಕಾರದ ದೊಡ್ಡ ವೈಫಲ್ಯ ಎಂದು ಅವರು ಕಿಡಿಕಾರಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್  ಮಾಡಿರುವ ಪ್ರಿಯಾಂಕ ಗಾಂಧಿ, ಉದ್ಯೋಗ ನೀಡುವ ಎಲ್ಲ ದೊಡ್ಡ ಭರವಸೆಗಳ ವಾಸ್ತವ ಇದು. ದೇಶದ ಏಳು ಪ್ರಮುಖ ಕ್ಷೇತ್ರಗಳಲ್ಲಿಯೇ ಸುಮಾರು ಮೂರೂವರೆ ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ. ಇದು ಸರ್ಕಾರದ ದೊಡ್ಡ ದೊಡ್ಡ ಮಾತುಗಳ ಮತ್ತು ಜಾಹೀರಾತುಗಳ ಫಲಿತಾಂಶವಾಗಿದೆ. ಅದಕ್ಕಾಗಿಯೇ ಸರ್ಕಾರವು ಕೆಲಸದ ಬಗ್ಗೆ ಮಾತನಾಡುವುದರಿಂದ ದೂರ ಸರಿಯುತ್ತದೆ ಎಂದು ಅವರು ಆರೋಪಿಸಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...