Homeಮುಖಪುಟಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.

- Advertisement -
- Advertisement -

#ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿದೆ. ಮಧ್ಯಾಹ್ನದಿಂದ ಸಂಜೆಯವರೆಗೂ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದ್ದು, ಈ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು ಮೂರು ಲಕ್ಷ ಟ್ವೀಟ್‌ಗಳು ದಾಖಲಾಗಿವೆ.

ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ವಿರುದ್ಧ ದೂರುಗಳನ್ನು ದಾಖಲಿಸಿದ್ದಾರೆ. ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿವೆ.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ ಗೋಸ್ವಾಮಿ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ಗೋಸ್ವಾಮಿಯವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದಾರೆ.

ಮತ್ತುಷ್ಟು ಜನರು ನಿಜವಾದ ಪತ್ರಕರ್ತರೆಂದರೆ ಅದು ಎನ್‌ಡಿಟಿವಿಯ ರವೀಶ್‌ ಕುಮಾರ್‌ರವರು. ಅರ್ನಬ್‌ ಏನಿದ್ದರೂ ರಬ್ಬೀಶ್‌ ಎಂದು ಟೀಕಿಸಿದ್ದಾರೆ. ಕೆಲ ಟ್ವೀಟ್‌ಗಳು ಈ ಕೆಳಗಿನಂತಿವೆ.

ಅರ್ನಬ್ ಗೋಸ್ವಾಮಿ ಅವರಿಂದ ಸೋನಿಯಾ ಗಾಂಧಿಯವರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ. ಅವನು ಹುಚ್ಚನಾಗಿದ್ದಾನೆ ಮತ್ತು ಎಲ್ಲಾ ಮಿತಿಗಳನ್ನು ದಾಟಿದ್ದಾನೆ, ಅವನು ತನ್ನ ಬಗ್ಗೆ ನಾಚಿಕೆಪಡಬೇಕು. ನಾನು ಸಂಪಾದಕರ ಸಂಘವನ್ನು ಕೇಳುತ್ತೇನೆ, ಇದು ಪತ್ರಿಕೋದ್ಯಮಕ್ಕೆ ಸಾರ್ವಕಾಲಿಕ ಅವಮಾನವಲ್ಲವೇ? ರಾಜೀವ್ ಚಂದ್ರಶೇಖರ್ ಅವರನ್ನು ತಕ್ಷಣ ವಜಾ ಮಾಡಬೇಕು ಎಂದು ರಾಜಸ್ತಾನ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಇದೇ ಸಮಯದಲ್ಲಿ ಐ ಸಪೋರ್ಟ್‌ ಅರ್ನಬ್‌ ಗೋಸ್ವಾಮಿ ಎಂದು ಸುಮಾರು 2 ಲಕ್ಷ ಟ್ವೀಟ್‌ಗಳು ಸಹ ದಾಖಲಾಗಿವೆ. ಯಾವಾಗ ಅವರ ವಿರುದ್ಧ ಟೀಕೆಗಳು ಜೋರಾಯಿತೊ ನಂತರ ಅವರ ಅಭಿಮಾನಿಗಳು ಅವರ ಪರ ಟ್ವಿಟ್ಟರ್‌ ಟ್ರೆಂಡ್‌ಗೆ ಇಳಿದಿದ್ದಾರೆ.


ಇದನ್ನೂ ಓದಿ: ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರ್ನಬ್ ಗೋಸ್ವಾಮಿ ಪತ್ರಕರ್ತನ ವೃತ್ತಿಗೆ ಲಾಯಕ್ಕಾದವನಲ್ಲ. ಅವನು ಬಿ.ಜೆ.ಪಿ.ಯ ವಕ್ತಾರನಾಗಲಿ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...