Homeಮುಖಪುಟಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

- Advertisement -
- Advertisement -

ಡ್ರೈವರ್ ಇದ್ರೀಶ್ ಪಾಶಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ ಎಂದು ತೀವ್ರ ಒತ್ತಡ ಕೇಳಿ ಬಂದಿದೆ. ಕೊಲೆ ನಡೆದು ನಾಲ್ಕು ದಿನಗಳಾದರೂ ಬಂಧಿಸದೇ ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಬಹುತ್ವ ಕರ್ನಾಟಕ ಮತ್ತು ಕಾಂಗ್ರೆಸ್ ಪಕ್ಷ ಪ್ರಶ್ನಿಸಿವೆ.

ಇದ್ರೀಶ್ ಪಾಶಾ ಕೊಲೆ ಪರಿಸ್ಥಿತಿಗೆ ಕಾರಣವಾದ ಕರ್ನಾಟಕ ಪೊಲೀಸ್ ಮತ್ತು ಕರ್ನಾಟಕ ಸರ್ಕಾರದ ನಿಷ್ಕ್ರಿಯತೆಯನ್ನು ನಾವು ಖಂಡಿಸುತ್ತೇವೆ! ಗೋ ರಕ್ಷಣೆಗೆ ಸಂಬಂಧಿಸಿದ ತೆಹಸೀನ್ ಪೂನಾವಾಲಾ ಪುಕರಣದಲ್ಲಿ ಕರ್ನಾಟಕ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು. ಪುನೀತ್ ಕೆರೆಹಳ್ಳಿ, ಬಹಿರಂಗವಾಗಿ ವಿಡಿಯೋ ಹೇಳಿಕೆಗಳನ್ನು ನೀಡುತ್ತಿದ್ದರೂ ಇನ್ನೂ ಯಾಕೆ ಬಂಧಿಸಿಲ್ಲ? ಅವನನ್ನು ರಕ್ಷಿಸುವವರು ಯಾರು? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಪುನೀತ್ ಕೆರೆಹಳ್ಳಿ ಮತ್ತು ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಬಜರಂಗದಳ, ರಾಷ್ಟ್ರ ರಕ್ಷಣಾ ವೇದಿಕೆ ಮತ್ತು ಇತರರು ಕಾನೂನನ್ನು ಕೈಗೆ ತೆಗೆದುಕೊಂಡಿರುವುದರ ಕುರಿತು ಹಾಲಿ ಹೈ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಬಹಳ ಮುಖ್ಯವಾಗಿ, ಪೋಲೀಸರ ನಿಷ್ಕ್ರಿಯತೆ ಗಮನಿಸಬೇಕು. ರಾಜ್ಯ ಸರ್ಕಾರದ ನಿಷ್ಕ್ರಿಯತೆಯೇ ಈ ಪರಿಸ್ಥಿತಿಗೆ ಕಾರಣವಾಗಿರುವುದರಿಂದ, ಲಿಂಚಿಂಗ್‌ನ ಎಲ್ಲಾ ಸಂತ್ರಸ್ತರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ದ್ವೇಷಪೂರಿತ ಅಪರಾಧಗಳನ್ನು ಅಂತ್ಯಗೊಳಿಸಲು ತಡೆಗಟ್ಟುವ, ಪರಿಹಾರ ಮತ್ತು ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ತೆಪ್ಪಿನ್ ಪೂನಾವಾಲಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ [AIR 2018 SC 3354] ನಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಅದರಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕಟ್ಟುನಿಟ್ಟಾದ ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ವಿಳಂಬವಿಲ್ಲದೆ ಎಫ್‌ಐಆರ್ ನೋಂದಣಿ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ಕಿರುಕುಳವನ್ನು ತಡೆಯುವುದು, ಗುಂಪು ಹಿಂಸಾಚಾರದ ಪ್ರಕರಣಗಳನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ವಿಚಾರಣೆಗೆ ಒಳಗಾಗುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರನ್ನು ಬಂಧಿಸುವಲ್ಲಿ ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಬೇಕು ಮತ್ತು ತರಾತುರಿಯಲ್ಲಿ ಹೊರತಂದಿರುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಕರ್ನಾಟಕ ಪ್ರಿವೆನೈನ್ ಆಫ್ ಸ್ಲಾಟರ್ ಅಂಡ್ ಪ್ರಿಸರ್ವೇಶನ್ ಆಫ್ ಕ್ಯಾಟಲ್ ಕಾಯಿದೆ 2021 ಯನ್ನು ಹಿಂಪಡೆಯಿರಿ ಎಂದು ಒತ್ತಾಯಿಸಲಾಗಿದೆ.

ಏನಂಥ ಹೇಡಿತನ ಸರಕಾರವೇ ನಿನ್ನದು? ತಲೆ ಹಿಡುಕ, ಕೊಲೆ ಗಡುಕ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ.

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು? ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ? ಆರಗ ಜ್ಞಾನೇಂದ್ರರವರೆ ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ನನ್ನ ಕ್ಷೇತ್ರ ವ್ಯಾಪ್ತಿಯ ಸಾತನೂರಿನಲ್ಲಿ ಮತೀಯ ಗೂಂಡಾಗಿರಿಯ ಭಾಗವಾಗಿ ಒಬ್ಬನ ಕೊಲೆಯಾಗಿದೆ. ಈ ಕೊಲೆಗೆ ಕಾರಣರಾದ ವ್ಯಕ್ತಿ ಬಿಜೆಪಿ ನಾಯಕರ ಆಪ್ತನಾಗಿದ್ದಾನೆ. ಈ ಹತ್ಯೆಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಹೊಣೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

‘‘ಈ ಕೊಲೆಗೆ ಸರ್ಕಾರವೇ ಕಾರಣ. ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು. ಅಲ್ಪಸಂಖ್ಯಾತರು ಬದುಕಲು ಅವಕಾಶ ಮಾಡಿಕೊಡಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಈ ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ‌ಸರ್ಕಾರ ಕೂಡಲೇ  25 ಲಕ್ಷ ರೂ ಪರಿಹಾರ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಸೋಮವಾರ ರಾತ್ರಿ ಮತ್ತೆ ಫೇಸ್‌ಬುಕ್‌ ಲೈವ್ ಬಂದು ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕೊಲೆ ಮಾಡಿಸಿರಬೇಕು ಎಂದು ಧಮಕಿ ಹಾಕಿದ್ದಾನೆ. ಈ ಕುರಿತು ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...