Homeಮುಖಪುಟ'ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ಹೇಡಿ ಮುಖ್ಯಮಂತ್ರಿಯ ನೇತೃತ್ವದ ಬಿಹಾರ ಸರ್ಕಾರವು ರೈತರ ಪರ ಧ್ವನಿ ಎತ್ತಿದ್ದಕ್ಕಾಗಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ನಮ್ಮನ್ನು ಬಂಧಿಸಿ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಅನುಮತಿಯಿಲ್ಲದೆ ಪ್ರತಿಭಟಿಸಿದ್ದಕ್ಕಾಗಿ ಬಿಹಾರದ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಮತ್ತು ಮಹಾಘಟಬಂಧನ್‌ನ ಇತರ 18 ನಾಯಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ತೇಜಸ್ವಿ ಯಾದವ್ ’ತಾಕತ್ತಿದ್ದರೆ ಬಂಧಿಸಿ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ತಮ್ಮ ಮೇಲೆ ದಾಖಲಾದ ಪ್ರಕರಣದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ’ಹೇಡಿ’ ಎಂದು ಕರೆದಿದ್ದಾರೆ.

“ಹೇಡಿ ಮುಖ್ಯಮಂತ್ರಿಯ ನೇತೃತ್ವದ ಬಿಹಾರ ಸರ್ಕಾರವು ರೈತರ ಪರ ಧ್ವನಿ ಎತ್ತಿದ್ದಕ್ಕಾಗಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ನಮ್ಮನ್ನು ಬಂಧಿಸಿ. ನೀವು ಮಾಡದಿದ್ದರೆ ನಾನು ನಾನೇ ಶರಣಾಗುತ್ತೇನೆ. ನಾನು ರೈತರಿಗಾಗಿ ಗಲ್ಲಿಗೇರಲು ಸಿದ್ಧವಾಗಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ 

ಕಳೆದ 10 ದಿನಗಳಿಂದ ಕಠಿಣ ಶೀತದಲ್ಲಿ ದೆಹಲಿಯ ಗಡಿಯುದ್ದಕ್ಕೂ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಬೆಂಬಲಿಸಿದ್ದಕ್ಕಾಗಿ ತೇಜಸ್ವಿ ಯಾದವ್ ಮೇಲೆ “ಸುಳ್ಳು ನೆಪಗಳನ್ನು” ಬಳಸಿ ಕೇಸು ದಾಖಲಿಸಲಾಗಿದೆ ಎಂದು ಅವರ ಪಕ್ಷ ಆರ್‌ಜೆಡಿ ಕೂಡಾ ಎನ್‌ಡಿಎ ಸರ್ಕಾರವನ್ನು ಟೀಕಿಸಿದೆ.

“ಬಿಹಾರ ಸರ್ಕಾರವು ರೈತರ ಪರ ನಿಂತು ಪ್ರತಿಭಟಿಸಿದ್ದಕ್ಕಾಗಿ ತೇಜಸ್ವಿ ಯಾದವ್ ಅವರ ಮೇಲೆ ಪ್ರಕರಣ ದಾಖಲು ಮಾಡಿದೆ. ಈ ಮೂಲಕ ಬಿಹಾರ ಸರ್ಕಾರವು ಸುಳ್ಳು ಮತ್ತು ಕುಂಟು ನೆಪಗಳನ್ನು ಬಳಸಿ ದ್ವಿಮುಖವನ್ನು ತೋರಿಸಿದೆ. ರೈತರಿಗಾಗಿ ಅಂತಹ ಸಾವಿರ ಎಫ್‌ಐಆರ್‌ಗಳಿಗೆ ನಾವು ಹೆದರುವುದಿಲ್ಲ” ಎಂದು ಪಕ್ಷ ಘೋಷಿಸಿದೆ.

ಇದಕ್ಕೂ ಮುನ್ನ ಆರ್‌ಜೆಡಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಚಿತ್ರವೊಂದನ್ನು ಟ್ವೀಟ್ ಮಾಡಿದ್ದು, ಅಲ್ಲಿ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗಿಲ್ಲ ಎಂದಿದೆ.

ಇದನ್ನೂ ಓದಿ:  ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

ಆ ಸಭೆಯಲ್ಲಿ ಆರೋಗ್ಯ ಸಚಿವ ಮಂಗಲ್ ಪಾಂಡೆ ಸೇರಿದಂತೆ ಇತರರು ಭಾಗವಹಿಸಿದ್ದರು ಎಂಬುದನ್ನು ಎತ್ತಿ ತೋರಿಸಿದ ಪಕ್ಷವು, “ಆಡಳಿತಾರೂಡ ಸಮ್ಮಿಶ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಪ್ರತಿಭಟನೆಗೆ ಅನುಮತಿ ನೀಡಲಿಲ್ಲ, ಆದರೆ ಅವರ ಸಭೆಗಳಲ್ಲಿ ಯಾವುದೇ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಿಲ್ಲ” ಎಂದು ಟೀಕಿಸಿದೆ.

ಶನಿವಾರ ಬಿಹಾರ ಸರ್ಕಾರ ಪ್ರತಿಭಟನೆ ನಡೆಸಲು ಅನುಮತಿ ನೀಡದಿದ್ದರೂ, ಪ್ರತಿಪಕ್ಷಗಳು ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಿದವು. ಅಲ್ಲಿ ಅವರು “ದೇಶಾದ್ಯಂತದ ರೈತರ ಹಿತಾಸಕ್ತಿಯನ್ನು ಕಾಪಾಡಲು ಯಾವುದೇ ಬೆಲೆ ತೆರಲು ಸಿದ್ದ” ಎಂದು ಪ್ರಮಾಣವಚನ ಸ್ವೀಕರಿಸಿದರು.

ತೇಜಸ್ವಿ ಯಾದವ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಿಸೆಂಬರ್ 8 ರಂದು ನಡೆಯುವ ಅಖಿಲ ಭಾರತ ಮುಷ್ಕರಕ್ಕೂ ಬೆಂಬಲ ಘೋಷಿಸಿದ್ದಾರೆ. ಅನುಮತಿ ಪಡೆಯದೆ ಸಭೆ ನಡೆಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ 500 ಅಪರಿಚಿತ ವ್ಯಕ್ತಿಗಳೂ ಸೇರಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...