Homeಮುಖಪುಟಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ

ಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ

- Advertisement -
- Advertisement -

ಉತ್ತರ ಪ್ರದೆಶದ ಪ್ರತಾಪ್‌ಗಢದ ಪಟ್ಟಿ ಪೊಲೀಸ್ ಠಾಣೆಯ ತನಿಖಾ ಕೊಠಡಿಯ ಶೌಚಾಲಯದಲ್ಲಿ ಸೋಮವಾರ ಮುಂಜಾನೆ 22 ವರ್ಷದ ದಲಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರತಾಪ್‌ಗಢ ಎಸ್‌ಪಿ, ಕರ್ತವ್ಯಲೋಪದ ಆರೋಪದ ಮೇಲೆ ಪಟ್ಟಿ ಠಾಣಾಧಿಕಾರಿ ಆನಂದ್ ಪಾಲ್ ಸಿಂಗ್ ಮತ್ತು ಸಬ್‌ಇನ್ಸ್‌ಪೆಕ್ಟರ್ ಓಂಕಾರ್ ಸಿಂಗ್ ಅವರನ್ನು ಅಮಾನತುಗೊಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ ಅರ್ಜುನ್ ಅಲಿಯಾಸ್ ಶೈಲೇಶ್‌ನನ್ನು ಭಾನುವಾರ ಬಂಧಿಸಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಸೋಮವಾರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಿತ್ತು. ಮಾಹಿತಿ ತಿಳಿದ ತಕ್ಷಣ ಎಸ್‌ಪಿ (ಪ್ರತಾಪ್‌ಗಢ) ದೀಪಕ್ ಭುಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ವಿಧಿವಿಜ್ಞಾನ ತಜ್ಞರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದರು.

“ಆರೋಪಿಯು ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಠಾಣೆಯ ಆವರಣದಲ್ಲಿದ್ದ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡಿದ್ದಾನೆ” ಎಂದು ಹೆಚ್ಚುವರಿ ಎಸ್‌ಪಿ (ಪ್ರತಾಪ್‌ಗಢ ಪೂರ್ವ) ಅಲೋಕ್ ಕುಮಾರ್ ತಿಳಿಸಿದ್ದಾರೆ.

17 ವರ್ಷದ ತನ್ನ ತಂಗಿಯನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಸಹೋದರ ಜುಲೈ 11ರಂದು ಮೊಲ್ನಾಪುರ ನಿವಾಸಿ ಅರ್ಜುನ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 137(2) ಮತ್ತು 87ರ ಅಡಿ ಮೊದಲ ಎಫ್‌ಐಆರ್ ದಾಖಲಿಸಿದ್ದನು ಎಂದು ಅವರು ಹೇಳಿದರು.

ಪೊಲೀಸರು ಬಾಲಕಿಯನ್ನು ಹೈದರಾಬಾದ್‌ನಲ್ಲಿ ಪತ್ತೆಹಚ್ಚಿದರು. ಕುಟುಂಬ ಸದಸ್ಯರು ಬೈದಿದ್ದರಿಂದ ತಾನು ಮನೆ ಬಿಟ್ಟು ಬಂದಿದ್ದಾಗಿ ಆಕೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಳು. ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ಸಾಬೀತಾಗಿರಲಿಲ್ಲ.

ಆದರೂ, ಆಗಸ್ಟ್ 16ರಂದು ತನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ಆಗಸ್ಟ್ 17ರಂದು ಅರ್ಜುನ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 137(2)ರ ಅಡಿಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪಟ್ಟಿ ಪೊಲೀಸರ ತಂಡವು, ಘಾಜಿಯಾಬಾದ್‌ನಲ್ಲಿ ಅರ್ಜುನ್ ಮತ್ತು ಬಾಲಕಿಯನ್ನು ಪತ್ತೆಹಚ್ಚಿ ಭಾನುವಾರ ಪಟ್ಟಿ ಪೊಲೀಸ್ ಠಾಣೆಗೆ ಕರೆತಂದಿತ್ತು.

ಬಾಲಕಿಯನ್ನು ‘ಒನ್-ಸ್ಟಾಪ್ ಸೆಂಟರ್’ಗೆ ಕಳುಹಿಸಲಾಗಿತ್ತು, ಯುವಕನನ್ನು ತನಿಖಾ ಕೊಠಡಿಯಲ್ಲಿ ಇರಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆಯಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

‘ವಂದೇ ಮಾತರಂ’ ದೇಶದ ರಾಷ್ಟ್ರೀಯ ಗೀತೆಯಾಗಿ (National Song) ಮುಂದುವರಿಯಲಿದೆ, ಆದರೆ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ನೈಜ ಧಾರ್ಮಿಕ ಆಕ್ಷೇಪಣೆ ಹೊಂದಿರುವ ಯಾವುದೇ ವ್ಯಕ್ತಿಯು ಅದರ ಕೆಲವು ಚರಣಗಳನ್ನು...

ಉತ್ತರ ಪ್ರದೇಶ ಸೇರಿದಂತೆ 3 ರಾಜ್ಯಗಳ 12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಭಾರತೀಯ ಚುನಾವಣಾ ಆಯೋಗವು (ಇಸಿಐ) 11 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಗಳು ಹಾಗೂ ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೆ ಉಪಚುನಾವಣೆಯನ್ನು ಅಕ್ಟೋಬರ್ 16ರಂದು ನಡೆಸುವುದಾಗಿ ಘೋಷಿಸಿದೆ. ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ನಡೆಯಲಿರುವ 11 ಸ್ಥಾನಗಳ...

ಪತ್ರಕರ್ತ ರವಿ ನಾಯರ್ ಬಂಧನ ಮುಂದುವರಿಕೆ: ಅದಾನಿ ಮಾನನಷ್ಟ ಪ್ರಕರಣದಲ್ಲಿ ಬಿಡುಗಡೆ ಅರ್ಜಿ ಮುಂದೂಡಿದ ಗುಜರಾತ್ ಹೈಕೋರ್ಟ್ 

ಅದಾನಿ ಎಂಟರ್‌ಪ್ರೈಸಸ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಬಂಧನ ಪ್ರಶ್ನಿಸಿ ಪತ್ರಕರ್ತ ರವಿ ನಾಯರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ಸೋಮವಾರ ಮುಂದೂಡಿದೆ. ನಾಯರ್ ಅವರ ಅರ್ಜಿಗೆ ಪ್ರತಿಕ್ರಿಯಿಸಲು ಅದಾನಿ ಎಂಟರ್‌ಪ್ರೈಸಸ್‌ಗೆ...

ರಾಮನ ಹೆಸರಿಗೆ ಕಳಂಕ ತರಬೇಡಿ’: ರಾಮಮಂದಿರ ದೇಣಿಗೆ ಪ್ರಕರಣದ ಚಾರ್ಜ್‌ಶೀಟ್‌ ವಿಳಂಬದ ಕುರಿತು ಕಾಂಗ್ರೆಸ್‌ ಆಕ್ರೋಶ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆ ಕುರಿತು ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದ್ದು, ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದೆ. ದೇಣಿಗೆ ನಿರ್ವಹಣೆ ಮತ್ತು...

SIR ಹೆಸರಿನಲ್ಲಿ ಚುನಾವಣಾ ಆಯೋಗದ ವಿಐಪಿ ಹಾಗೂ ಸಾಮಾನ್ಯ ಮತದಾರರು ಎಂಬ ಪದವೇ ಅಸಂವಿಧಾನಿಕ: ಮಲ್ಲಿಕಾರ್ಜುನ ಖರ್ಗೆ

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ದೇಶದ ಪ್ರಜೆಗಳ ಮತದಾನದ ಹಕ್ಕನ್ನೇ ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ...

ದೆಹಲಿ ಎಸ್‌ಐಆರ್‌: ಮುಸ್ಲಿಂ, ಎಸ್‌ಸಿ ಹಾಗೂ ವಲಸಿಗರ ಪ್ರದೇಶಗಳಲ್ಲೇ ಭಾರೀ ಮತದಾರರ ಹೆಸರುಗಳ ಹೊರಗಿಡುವಿಕೆ: ವರದಿ

ನವದೆಹಲಿ: ದೆಹಲಿಯಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಈ ಹಿಂದೆ ನೋಂದಾಯಿತರಾಗಿದ್ದ ಸುಮಾರು ಮೂವರಲ್ಲಿ ಒಬ್ಬರ ಹೆಸರು ಕಾಣೆಯಾಗಿರುವುದು ಗಮನಾರ್ಹ ಸಂಗತಿಯಾಗಿ ಹೊರಹೊಮ್ಮಿದೆ. ಅದರಲ್ಲೂ...

‘ಬಾಂಗ್ಲಾದೇಶಿ’ ಎಂಬ ಹಣೆಪಟ್ಟಿ, 87 ದಿನಗಳ ಬಂಧನ, ಬಳಿಕ ಜಾಮೀನು : ಇದು ಬಂಗಾಳಿ ಮುಸ್ಲಿಮನ ಕರುಣಾಜನಕ ಕಥೆ

ಜಲೀಲ್ ಅಖ್ತರ್ ಅವರು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಗ್ರೋಯಿ ಗ್ರಾಮದಲ್ಲಿ 70 ವರ್ಷಗಳ ಕಾಲ ಅತ್ಯಂತ ಶಾಂತಿಯುತ ಮತ್ತು ನಿರಾಳವಾದ ಜೀವನವನ್ನು ನಡೆಸುತ್ತಿದ್ದರು. ಭೂ ರಹಿತ ಗ್ರಾಮಸ್ಥರಾಗಿದ್ದ ಅವರು, ದಿನಗೂಲಿ...

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ದೂರು

ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ. ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ...

‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ

ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು...

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...