Homeಮುಖಪುಟ10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ...

10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ?

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಎಂಫಿಲ್‌ ವಿದ್ಯಾರ್ಥಿನಿ ದೇವಂಗನಾ ಕಾಳಿತಾ ಅವರನ್ನು 10 ದಿನಗಳ ಅವಧಿಯಲ್ಲಿ ಮೂರನೇ ಬಾರಿಗೆ ಬಂಧಿಸಲಾಗಿದೆ. ಈ ಬಾರಿ ದೆಹಲಿ ಪೊಲೀಸ್ ಅಪರಾಧ ವಿಭಾಗವು ಆಕೆಯನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಈ ಹಿಂದೆ ಮೇ 23 ರಂದು ಜಾಫ್ರಾಬಾದ್ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ದೇವಂಗನಾ ಕಾಳಿತಾಳನ್ನು ಸಹ ವಿದ್ಯಾರ್ಥಿನಿ ನತಾಶಾ ನರ್ವಾಲ್ ಅವರೊಂದಿಗೆ ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಆದರೆ ನ್ಯಾಯಾಲಯ ಅವಳಿಗೆ ಜಾಮೀನು ನೀಡಿದ ನಂತರ, ಮೇ 28 ರಂದು ದೆಹಲಿ ಪೊಲೀಸರು ಮತ್ತೆ  ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ಬಂಧಿಸಿದರು. ಅವರ ಮೇಲೆ ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ (UAPA) ನರ್ವಾಲ್ ವಿರುದ್ಧವೂ ಆರೋಪ ಹೊರಿಸಲಾಗಿದೆ.

ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದ್ದರೆ, ನ್ಯಾಯಾಲಯವು ಎರಡು ಮಾತ್ರ ನೀಡಿತು. ಈಗ ಬಂಧನದ ಅವಧಿ ಮುಗಿದ ತಕ್ಷಣ, ಕಲಿತಾಳನ್ನು ಮೂರನೆಯ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ, ಅಥವಾ ನ್ಯಾಯಾಂಗ ಬಂಧನದಿಂದ ಸ್ಥಳಾಂತರಿಸಲಾಗಿದೆ. ಈ ಬಾರಿ ಅವಳ ಮೇಲೆ ಕಾನೂನುಬಾಹಿರ ಸಭೆ ಮತ್ತು ದರಿಯಾಗಂಜ್‌ನಲ್ಲಿ ಗಲಭೆ ಮಾಡಿದ ಆರೋಪ ಹೊರಿಸಲಾಗಿದೆ.

ಮೊದಲ ಪ್ರಕರಣದಲ್ಲಿ ಕಾಳಿತಾ ಮತ್ತು ನರ್ವಾಲ್ ಅವರಿಗೆ ಜಾಮೀನು ನೀಡಲಾಗಿದ್ದರೂ, ದೆಹಲಿ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳನ್ನು ‘ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವುದರಿಂದ’ ಅವರ ವಿರುದ್ಧ ವಿಚಾರಣೆಗೆ ಒಳಪಡಿಸಲಾಗಿದೆಯೆಂದು ಹೇಳಿದೆ.

“ಆರೋಪಿಗಳು ಸಮಾಜದಲ್ಲಿ ಬಲವಾದ ಬೇರುಗಳನ್ನು ಹೊಂದಿದ್ದಾರೆ ಮತ್ತು ಸುಶಿಕ್ಷಿತರು. ತನಿಖೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರೊಂದಿಗೆ ಸಹಕರಿಸಲು ಸಿದ್ಧರಾಗಿದ್ದಾರೆ ”ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಫೆಬ್ರವರಿ 22 ಮತ್ತು 23 ರಂದು ಜಾಫ್ರಾಬಾದ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು. ಅದೇ ಸಮಯದಲ್ಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸಿಎಎ ವಿರೋಧಿ ಪ್ರತಿಭಟನೆಗಳನ್ನು ಪೊಲೀಸರು ನಿಲ್ಲಿಸದಿದ್ದರೆ ನಾವೇ ನಿಲ್ಲಿಸಬೇಕಾಗುತ್ತದೆ ಎಂದು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದರು.

“ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್‌ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಅದರ ನಂತರ ಕೋಮು ಹಿಂಸಾಚಾರವು ದೊಡ್ಡ ಮಟ್ಟದಲ್ಲಿ ಭುಗಿಲೆದ್ದಿದ್ದು ಈಶಾನ್ಯ ದೆಹಲಿಯಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಪ್ರಚೋದಿಸಿದ ಕಾರಣಕ್ಕೆ ಕಪಿಲ್‌ ಮಿಶ್ರಾರನ್ನು ದೆಹಲಿ ಪೊಲೀಸರು ಇನ್ನೂ ಬಂಧಿಸಿಲ್ಲ ಅಥವಾ ಪ್ರಕರಣ ದಾಖಲಿಸಿಲ್ಲ ಏಕೆ” ಎಂದು ಪಿಂಜ್ರಾ ತೋಡ್‌ ಸಂಘಟನೆ ಪ್ರಶ್ನಿಸಿದೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರಕ್ಕೆ ಪ್ರಚೋದನೆ: BJPಯ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲು


“ಯುಎಪಿಎಯಂತಹ ಕಠಿಣ ಕಾನೂನುಗಳ ಬಳಕೆ ಮತ್ತು ಪ್ರಜಾಪ್ರಭುತ್ವವಾದಿ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ದಾಖಲಿಸಿ ಬಂಧಿಸುತ್ತಿರುವುದು ಅಧಿಕಾರದ ಸ್ಪಷ್ಟ ದುರುಪಯೋಗವಾಗಿದೆ. ದೇವಂಗನ ಮತ್ತು ನತಾಶಾ ಅವರ ಮೇಲಿನ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಪೊಲೀಸರು ಮತ್ತೆ ಮತ್ತೆ ಬಂಧಿಸುವ ತಂತ್ರವನ್ನು ನಾವು ಖಂಡಿಸುತ್ತೇವೆ” ಎಂದು ಪಿಂಜ್ರಾ ತೋಡ್ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ : CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...