Homeಮುಖಪುಟಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: 'ಅಧಿಕಾರದ ದುರುಪಯೋಗ' ಎಂದ ಹೈಕೋರ್ಟ್

ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

- Advertisement -
- Advertisement -

ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕಿ,  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಚಂದಾ ಕೊಚ್ಚರ್‌ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿರುವುದು “ಅಧಿಕಾರದ ದುರುಪಯೋಗ” ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅನುಜಾ ಪ್ರಭುದೇಸಾಯಿ ಮತ್ತು ಎನ್ ಆರ್ ಬೋರ್ಕರ್ ಅವರ ವಿಭಾಗೀಯ ಪೀಠವು ಫೆಬ್ರವರಿ 6ರಂದು ಕೊಚ್ಚರ್‌ಗಳ ಬಂಧನವನ್ನು ಕಾನೂನುಬಾಹಿರವೆಂದು ಹೇಳಿತ್ತು, ಅವರಿಗೆ ಜಾಮೀನು ಮಂಜೂರು ಮಾಡಿರುವ ಜನವರಿ 2023ರ ಮಧ್ಯಂತರ ಆದೇಶವನ್ನು ಎತ್ತಿ ಹಿಡಿದಿತ್ತು.

ಕೊಚ್ಚರ್‌ ದಂಪತಿಯನ್ನು ಬಂಧಿಸುವ ನಿರ್ಧಾರ ಬುದ್ದಿ ಅನ್ವಯಿಸದೆ ಮತ್ತು ಕಾನೂನನ್ನು ಪರಿಗಣಿಸದೆ ಮಾಡಿರುವ ಅಧಿಕಾರದ ದುರುಪಯೋಗವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕೊಚ್ಚರ್‌ ದಂಪತಿ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂಬ ಸಿಬಿಐ ವಾದವನ್ನು ಒಪ್ಪಿಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ ಮತ್ತು ವಿಚಾರಣೆಯ ಸಮಯದಲ್ಲಿ ಆರೋಪಿಗಳಿಗೆ ಮೌನವಾಗಿರಲು ಹಕ್ಕಿದೆ ಎಂದು ಹೇಳಿದೆ. ಮೌನದ ಹಕ್ಕನ್ನು ಭಾರತೀಯ ಸಂವಿಧಾನದ 20 (3)ನೇ ವಿಧಿಯು ನೀಡುತ್ತದೆ. ಮೌನವಾಗಿರುವ ಹಕ್ಕನ್ನು ಚಲಾಯಿಸುವುದನ್ನು ಅಸಹಕಾರದೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣದಲ್ಲಿ ದಂಪತಿಯನ್ನು ಡಿಸೆಂಬರ್ 23, 2022ರಂದು ಬಂಧಿಸಲಾಗಿತ್ತು. ಬಂಧನವನ್ನು ಪ್ರಶ್ನಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಕೋರಿದ್ದರು. 2023ರ ಜನವರಿಯಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು. ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನು ಬಾಂಬೆ ಹೈಕೋರ್ಟ್ ಅಕ್ರಮ ಎಂದು ಫೆಬ್ರವರಿ 6ರ ತೀರ್ಪಿನಲ್ಲಿ ಹೇಳಿತ್ತು.

ಫೆಬ್ರವರಿ 6ರ ಆದೇಶದಲ್ಲಿ, ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC)ನ ಸೆಕ್ಷನ್ 41Aಯ ಉಲ್ಲಂಘನೆಯನ್ನು ಕೋರ್ಟ್‌ ಗಮನಿಸಿದೆ. ಈ ನಿಬಂಧನೆಯು ಆರೋಪಿಯು ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿದ ಸೂಚನೆಯನ್ನು ಪಾಲಿಸಿದಾಗ ಬಂಧಿಸುವ ಅಧಿಕಾರವನ್ನು ತಡೆಯುತ್ತದೆ ಮತ್ತು ಅಗತ್ಯವೆಂದು ಪೊಲೀಸರು ಅಭಿಪ್ರಾಯಪಟ್ಟಾಗ ಮಾತ್ರ ಬಂಧನವನ್ನು ಮಾಡಬೇಕೆಂದು ಹೇಳುತ್ತದೆ.

ಕೊಚ್ಚರ್‌ಗಳ ವಿರುದ್ಧ ಎಫ್‌ಐಆರ್‌ನ್ನು 2019ರಲ್ಲಿ ದಾಖಲಿಸಲಾಗಿದೆ ಮತ್ತು ಅವರನ್ನು 2022ರಲ್ಲಿ  ವಿಚಾರಣೆಗೆ ಸಮನ್ಸ್‌ ನೀಡಲಾಗಿತ್ತು. ಅಪರಾಧದ ಗಂಭೀರತೆಯ ಹೊರತಾಗಿಯೂ ಅರ್ಜಿದಾರರನ್ನು ಅಪರಾಧದ ನೋಂದಣಿ ದಿನಾಂಕದಿಂದ ಮೂರು ವರ್ಷಗಳವರೆಗೆ ವಿಚಾರಣೆಗೆ ಒಳಪಡಿಸಲಾಗಿಲ್ಲ ಅಥವಾ ಸಮನ್ಸ್ ನೀಡಲಾಗಿಲ್ಲ ಎಂದು ಕೋರ್ಟ್‌ ಗಮನಿಸಿದೆ.

ಏನಿದು ಪ್ರಕರಣ:

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಮತ್ತು ಖಾಸಗಿ ಸಾಲ ನೀತಿಯನ್ನು ಉಲ್ಲಂಘಿಸಿ, ಧೂತ್‌ ಅವರ ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂಬುವುದು ಚಂದಾ ಕೊಚ್ಚರ್‌ಗಳ ವಿರುದ್ಧದ ಆರೋಪವಾಗಿದೆ.

2019ರ ಸಿಬಿಐನ ಪ್ರಥಮ ಮಾಹಿತಿ ವರದಿಯಲ್ಲಿ ಸಾಲದ ವಂಚನೆ ಆರೋಪಿಸಿ ಚಂದಾ ಕೊಚ್ಚರ್‌, ದೀಪಕ್ ಕೊಚ್ಚರ್‌ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚರ್ ಅವರ ನುಪವರ್ ರಿನ್ಯೂಬಲ್ಸ್ (ಎನ್‌ಆರ್‌ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು.

2018ರಲ್ಲಿ ಈ ಬಗ್ಗೆ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಕೊಚ್ಚರ್‌ ಅವರು ಐಸಿಐಸಿಐ ನಿರ್ದೇಶಕಿ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿದ್ದರು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.

ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...