Homeಮುಖಪುಟ'ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

"ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ”ಎಂದು ರಾಜಾ ಪಟೇರಿಯಾ ಸ್ಪಷ್ಟನೆ ನೀಡಿದ್ದರು.

- Advertisement -
- Advertisement -

“ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು. “ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ”  ಎಂದಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ.

ಅವರ ವಿವಾದಾತ್ಮಕ ಹೇಳಿಕೆಯ ವಿರುದ್ದ ಸೋಮವಾರ ಎಫ್‌ಐಆರ್ ದಾಖಲಾಗಿತ್ತು. ಇಂದು ಬೆಳಿಗ್ಗೆ ಪನ್ನಾದಲ್ಲಿರುವ ಅವರ ಮನೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಿಜೆಪಿ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಕಾಂಗ್ರೆಸ್ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ. ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡುತ್ತಾರೆ. ಇದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷವಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳನ್ನು ಬಹಿರಂಗಪಡಿಸಲಾಗಿದೆ. ಆದರೆ ಅಂತಹ ವಿಷಯಗಳನ್ನು ಸಹಿಸುವುದಿಲ್ಲ, ಎಫ್‌ಐಆರ್ ದಾಖಲಾಗುತ್ತಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಪಾವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ರಾಜಾ ಪಟೇರಿಯಾ, “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕೆಂಬ ಅರ್ಥದಲ್ಲಿ ಹೇಳಿದ್ದೆ” ಎಂದಿದ್ದಾರೆ.

ವೈರಲ್ ವೀಡಿಯೊದಲ್ಲಿ ಪಟೇರಿಯಾ ಅವರು ಹೇಳಿರುವುದೇನು?

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ರಾಜಾ ಪಟೇರಿಯಾ ಮಾತನಾಡುತ್ತಾ ಪ್ರಧಾನಿ ಮೋದಿಯವರನ್ನು ಉಲ್ಲೇಖಿಸುತ್ತಾರೆ. “ಮೋದಿ ಚುನಾವಣಾ ವ್ಯವಸ್ಥೆಯನ್ನು ಕೊನೆಗೊಳಿಸುತ್ತಾರೆ. ಮೋದಿಯವರು ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ಒಡೆದು ಆಳುತ್ತಾರೆ. ದಲಿತರು, ಬುಡಕಟ್ಟು ಜನರು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ, ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು” ಎಂದು ಕಾರ್ಯಕರ್ತರಿಗೆ ತಿಳಿಸುತ್ತಾರೆ.

ನಂತರ ಮಾತನಾಡುತ್ತಾ ರಾಜಾ ಪಟೇರಿಯಾ, “ಕೊಲೆ ಎಂದರೆ ಸೋಲು ಎಂಬರ್ಥ” ಎಂದು ಸ್ಪಷ್ಟನೆ ನೀಡುತ್ತಾರೆ. “ನಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತವನ್ನು ಅನುಸರಿಸುತ್ತೇನೆ. ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...