Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...