Homeಕರ್ನಾಟಕBreaking News: ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರ ಬಂಧನ

Breaking News: ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರ ಬಂಧನ

- Advertisement -
- Advertisement -

ಅಪ್ರಾಪ್ತ ಬಾಲಕಿಯರಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಇಂದು (ಗುರುವಾರ) ಸಂಜೆಯಿಂದಲೇ ಮಠದಲ್ಲಿ ಸ್ವಾಮೀಜಿಯ ವಿಚಾರಣೆಗಳನ್ನು ನಡೆಸಿದ್ದ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು, ರಾತ್ರಿ 10ರ ಸುಮಾರಿಗೆ ಮಠದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

‘ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ತಿಳಿಸಿದ್ದಾರೆ.

ಫೋಕ್ಸೋ ಪ್ರಕರಣ ದಾಖಲಾಗಿ ಆರು ದಿನಗಳ ಬಳಿಕ ಪೊಲೀಸರು ಮುರುಘಾ ಶರಣರನ್ನು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಈ ಬೆಳವಣಿಗೆಯ ಮಧ್ಯೆ ಚಿತ್ರದುರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಮೈಸೂರು ‘ಒಡನಾಡಿ’ ಸಂಸ್ಥೆ ಪ್ರಕರಣವನ್ನು ಹೊರಗೆಳೆದ ಮೇಲೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಆಗಸ್ಟ್ 26ರಂದು ನಗರದ ನಜರಾಬಾದ್​ ಠಾಣೆಯಲ್ಲಿ ದೂರು ದಾಖಲಿಸಿತ್ತು. ನಂತರದ ಬೆಳವಣಿಗೆಯಲ್ಲಿ ಈ ಪ್ರಕರಣವು ಚಿತ್ರದುರ್ಗ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಬಂಧನದ ಭೀತಿಯಲ್ಲಿದ್ದ ಮುರುಘಾ ಶರಣರು, ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್​, ಶುಕ್ರವಾರಕ್ಕೆ ಮುಂದೂಡಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು ಸಂಜೆ ವೇಳೆಗೆ ಎಲ್ಲ ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿತ್ತು. ಸ್ವಾಮೀಜಿ ವಿರುದ್ಧ ಪೋಕ್ಸೋ ಜೊತೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಮುರುಘಾ ಶರಣರ ಸಲುವಾಗಿಯೇ ಕಳೆದ ಮೂರು ದಿನಗಳಿಂದ ವಿಶೇಷ ವಾರ್ಡ್‌ ಸಿದ್ಧಪಡಿಸಲಾಗಿದೆ. ಅದೇ ವಾರ್ಡ್‌ನಲ್ಲಿ ಶರಣರನ್ನು ದಾಖಲಿಸಲಾಗುತ್ತದೆ ಎಂದು ತಿಳಿದುಬಂದಿರುವುದಾಗಿ ಪ್ರಜಾವಾಣಿ ವರದಿ ಮಾಡಿದೆ.

ಆರೋಪಿಯನ್ನು ಬಂಧಿಸುವಲ್ಲಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ‘ಸ್ವಾಮೀಜಿಗೊಂದು ನ್ಯಾಯ, ಸಾಮಾನ್ಯರಿಗೊಂದು ನ್ಯಾಯವೇ?’ ಎಂಬ ಪ್ರಶ್ನೆಯನ್ನು ಜನರು ಕೇಳಲಾರಂಭಿಸಿದ್ದರು. “ತನಿಖೆ ನಡೆಯುತ್ತಿದೆ. ಸೂಕ್ತ ಸಾಕ್ಷಿಗಳು ಸಿಕ್ಕ ತಕ್ಷಣ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದರು.

ಬಿಲ್ಕಿಸ್ ಬಾನು ಅವರನ್ನು ಅತ್ಯಾಚಾರ ಮಾಡಿದ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಹಾಗೂ ಮುರುಘಾ ಶರಣರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಾಳೆ (ಶುಕ್ರವಾರ) ರಾಜ್ಯಾದ್ಯಂತ ಪ್ರತಿಭಟನೆಗಳನ್ನೂ ಹಲವು ಸಂಘಟನೆಗಳು ಕೈಗೊಂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈತನ ಬಂಧನ ಆಗದೆ ಹೋಗಿದ್ರೆ ಆ ಪೊಲೀಸ್ನವರ ಇನ್ಸ್ಪೆಕ್ಟರ್ ,ಡಿ ಎಸ್ ಪಿ, ಎಸ್ ಪಿ, ಅವರ ಗುತ್ತಿಗೆಗೆ ಬರ್ತದಲ್ಲ ಅದಕ್ಕೆ ಬಂಧಿಸಿದ್ದಾರೆ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...