Homeಮುಖಪುಟರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ 'ಪುರುಷಾಧಿಪತ್ಯ ಅಳಿಸಿ' ಟೀಶರ್ಟ್ ಈಗ ಚರ್ಚಿತ ವಿಷಯ

ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಟೀಶರ್ಟ್ ಮೇಲೆ "Roses are Red, Violets are Blue, Lets Smash Patriarchy, Me and You" (ಗುಲಾಬಿಗಳು ಕೆಂಪು, ನೇರಳೆಗಳು ನೀಲಿ, ಪಿತೃಪ್ರಧಾನತೆಯನ್ನು ಅಳಿಸೋಣ, ನಾನು ಮತ್ತು ನೀವು" ಎಂದು ಬರೆದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಕ್ಕೆ ಮೂರು ದಿನಗಳ ಕಾಲ ಪ್ರಶ್ನಿಸಿದ ನಂತರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ರಿಯಾ ಚಕ್ರವರ್ತಿ ಅವರನ್ನು ಇಂದು ಬಂಧಿಸಿದೆ.

“ರಿಯಾ ಅವರನ್ನು ಬಂಧಿಸಿದ ಮಾಹಿತಿಯನ್ನು ಕುಟುಂಬಕ್ಕೆ ಈಗಾಗಲೇ ನೀಡಲಾಗಿದೆ” ಎಂದು ಎನ್‌ಸಿಬಿಯ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

ಬಂಧನದ ನಂತರ ಆಕೆಯನ್ನು ವೈದ್ಯಕೀಯ ತಪಾಸಣೆ ಮತ್ತು ಕೊರೊನಾ ಪರೀಕ್ಷೆಗಳಿಗಾಗಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ತನ್ನ ಬಾಂದ್ರಾ ಅಪಾರ್ಟ್‌ಮೆಂಟ್‌ನ‌ಲ್ಲಿ ಶವವಾಗಿ ಪತ್ತೆಯಾಗಿದ್ದರು. ತನ್ನ ಮಗನನ್ನು ಆತ್ಮಹತ್ಯೆಗೆ ದೂಡಿದ್ದಾರೆ ಮತ್ತು ಅವನ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೆ ರಿಯಾ ಹಲವಾರು ಸಂದರ್ಭಗಳಲ್ಲಿ ಆರೋಪಗಳನ್ನು ನಿರಾಕರಿಸಿದ್ದರು.

ಸುಶಾಂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ರಿಯಾ ಸೇರಿದಂತೆ ಸಾಕಷ್ಟು ಮಂದಿಯನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಿಯಾಗೆ ಡ್ರಗ್ ಜಾಲದೊಂದಿಗೆ ಸಂಪರ್ಕವಿದೆ ಎಂದು ಅನುಮಾನಿಸಲಾಗಿತ್ತು. ಅಲ್ಲದೆ ಡ್ರಗ್ಸ್ ಬಗ್ಗೆ ರಿಯಾ ಅವರ ಮೊಬೈಲ್ನಲ್ಲಿ ನಡೆಸಲಾಗಿದ್ದ ಸಂಭಾಷಣೆಯ ದಾಖಲೆ ಹೊರ ಬಿದ್ದಿತ್ತು. ಇದೇ ಕಾರಣದಿಂದ NCB ರಿಯಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ಇಂದು ಮೂರನೇ ದಿನ ರಿಯಾ ಎಂದಿನಂತೆ NCB ನಡೆಸುತ್ತಿರುವ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ನಟಿ ರಿಯಾ ಅವರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. ಅದಕ್ಕೂ ಮೊದಲು ಇದೇ ಪ್ರಕರದಲ್ಲಿ ರಿಯಾ ಅವರ ಸಹೋದರ ಶೋವಿಕ್, ಸುಶಾಂತ್ ಮನೆಯಲ್ಲಿ ಕೆಲಸಕ್ಕಿದ್ದ ದೀಪೇಶ್ ಸಾವಂತ್ ಹಾಗೂ ಸುಶಾಂತ್ ಅವರ ಮನೆಯ ವ್ಯವಸ್ಥಾಪಕ ಸ್ಯಾಮುಯೆಲ್ ಮಿರಾಂಡ ಅವರನ್ನು NCB ಅಧಿಕಾರಿಗಳು ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದರು.

ಇಂದು ವಿಚಾರಣಗೆ ಹಾಜರಾಗಿದ್ದ ರಿಯಾ ತೊಟ್ಟಿದ್ದ ಕಪ್ಪು ಬಣ್ಣದ ಟೀಶರ್ಟ್ ಚರ್ಚಾ ವಿಷಯವಾಗಿದೆ. ಈ ಟೀಶರ್ಟ್ ‘Roses are Red’ ಬ್ರಾಂಡ್ ನದ್ದಾಗಿದ್ದು, ಈ ಬ್ರಾಂಡ್ ಬಟ್ಟೆಗಳ ಮೇಲೆ ಕ್ರಾಂತಿಕಾರಕ ಮತ್ತು ಪ್ರಗತಿಪರ ಬರವಣಿಗೆಗಳನ್ನು ಬರೆಯಲಾಗಿರುತ್ತದೆ. ಅಂತಹ ಬರವಣಿಗೆಯಿರುವ ಬಟ್ಟೆಯೊಂದನ್ನು ಇಂದು ರಿಯಾ ಧರಿಸಿದ್ದು ಗಮನ ಸೆಳೆದಿದೆ.

ಅದರ ಮೇಲೆ “Roses are Red, Violets are Blue, Lets Smash Patriarchy, Me and You” (ಗುಲಾಬಿಗಳು ಕೆಂಪು, ನೇರಳೆಗಳು ನೀಲಿ, ಪಿತೃಪ್ರಧಾನತೆಯನ್ನು ಅಳಿಸೋಣ, ನಾನು ಮತ್ತು ನೀವು” ಎಂದು ಬರೆದಿತ್ತು. ಇದು ಈಗ ಚರ್ಚೆಗೆ ಗ್ರಾಸವಾಗಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ:ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...