Homeಕರ್ನಾಟಕವಿಜಯೋತ್ಸವದ ಮೆರವಣಿಗೆಯಲ್ಲಿ ತಲವಾರ್ ಝಳಪಿಸಿದ ಯತ್ನಾಳ ಬೆಂಬಲಿಗನ ಬಂಧನ

ವಿಜಯೋತ್ಸವದ ಮೆರವಣಿಗೆಯಲ್ಲಿ ತಲವಾರ್ ಝಳಪಿಸಿದ ಯತ್ನಾಳ ಬೆಂಬಲಿಗನ ಬಂಧನ

- Advertisement -
- Advertisement -

ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸಿದರು. ಯತ್ನಾಳ ಗೆಲುವಿನ ಬೆನ್ನಲ್ಲೇ ಅವರ ಬೆಂಬಲಿಗರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಯತ್ನಾಳ ಬೆಂಬಲಿಗ ಮಹೇಶ ಹಳ್ಳದಮನಿ(26) ಎನ್ನುವ ವ್ಯಕ್ತಿಯು ತಲವಾರ್ ಝಳಪಿಸಿದ್ದನು. ಇದೀಗ ಆತನನ್ನು ಬಂಧಿಸಲಾಗಿದೆ.

ಯತ್ನಾಳ ವಿಜಯೋತ್ಸವದಲ್ಲಿ ಆರೋಪಿಯು ತಲವಾರ್‌ ಝಳಪಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಭಾನುವಾರವೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಈ ಹಿಂದೆ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಹಿರೇಹರಕುಣಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದ ಯತ್ನಾಳ ಅವರು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಜಾರಿಗೆ ಬರುತ್ತದೆ ಎಂದಿದ್ದರು. ಮುಂದುವರೆದು, ”ಹಿಂದೂ ಮತ್ತು ದೇಶದ ವಿರುದ್ಧ ಯಾರಾದರು ಮಾತಾಡಿದರೆ ಶೂಟ್ ಮಾಡುವುದು ಖಚಿತ, ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ​ ಎನ್​ಕೌಂಟರ್ ನಿಶ್ಚಿತ, ರಸ್ತೆ ಮಧ್ಯೆಯೇ ನಿಲ್ಲಿಸಿ ಗುಂಡು ಹಾರಿಸಲಾಗುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಘಟನೆ ಬೆನ್ನಲ್ಲೇ ಯತ್ನಾಳ ಅವರ ವಿವಾದಾತ್ಮಕ ಹೇಳಿಕೆಯೊಂದಿಗೆ ವಿಜಯೋತ್ಸವದಲ್ಲಿ ಅವರ ಬೆಂಬಲಿಗ ತಲವಾರ್ ಝಳಪಿಸಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಿಜಯೋತ್ಸವ ಆಚರಿಸಿದರೆ ಗಲಾಟೆಗಳು ನಡೆಯಬಹುದು ಎನ್ನುವ ಕಾರಣಕ್ಕೆ ಮುನ್ನೆಚರಿಕಾ ಕ್ರಮವಾಗಿ ಎಲ್ಲ ಕಡೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆದರೆ ಯತ್ನಾಳ ಜಯಗಳಿಸುತ್ತಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ದೊಡ್ಡ ಪ್ರಮಾಣದಲ್ಲಿ ವಿಜಯೋತ್ಸವ ಆಚರಿಸಿದ್ದರು. ಈ ವೇಳೆ ಯುವಕನೊಬ್ಬ ತಲವಾರ್ ಝಳಪಿಸಿದ್ದನು. ಇದು ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ವಿಜಯಪುರ ಜಿಲ್ಲೆಯಲ್ಲಿ ಇಂತಹ ಘಟನೆಗಳು ಸಾಮಾನ್ಯ ಎನ್ನುವಂತಾಗಿ ಹೋಗಿದೆ. ಏಕೆಂದರೆ ಕೆಲದಿನಗಳ ಹಿಂದೆ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿತ್ತು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರು ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದರು. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿ, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದರು.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದರು, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....