Homeಕರ್ನಾಟಕಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ ಮಹತ್ವದ ಕುಸ್ತಿಪಟುಗಳನ್ನು ಎಳೆದಾಡಿ ವಶಕ್ಕೆ ಪಡೆಯಲಾಗಿದೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹೊಸ ಸಂಸತ್ತಿನ ಕಟ್ಟಡದ ಕಡೆಗೆ ಕುಸ್ತಿಪಟುಗಳು ತೆರಳಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಮಹಿಳಾ ಮಹಾಪಂಚಾಯತ್ ನಡೆಸುವ ಮೂಲಕ ಪ್ರಧಾನಿ ಮೋದಿಯವರ ಗಮನ ಸೆಳೆಯಲು ಕುಸ್ತಿಪಟುಗಳು ಬಯಸಿದ್ದರು.

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಪೆಡರೇಷನ್‌ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧನ ಮಾಡಬೇಕೆಂದು ಆಗ್ರಹಿಸಿ ಕುಸ್ತಿಪಟುಗಳು ಒಂದು ತಿಂಗಳಿಗಿಂತ ಹೆಚ್ಚು ಕಾಲ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜಂತರ್ ಮಂತರ್‌ನಲ್ಲಿ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದಿವೆ. ವಿನೇಶ್ ಫೋಗಟ್ ಮತ್ತು ಅವರ ಸೋದರಸಂಬಂಧಿ ಸಂಗೀತಾ ಫೋಗಟ್ ಬ್ಯಾರಿಕೇಡ್‌ಗಳನ್ನು ಭೇದಿಸಲು ಪ್ರಯತ್ನಿಸಿದಾಗ ಕುಸ್ತಿಪಟುಗಳು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ತಿಕ್ಕಾಟ ನಡೆಯಿತು.

ಪೊಲೀಸರು ಎಳೆದಾಡುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿರುವ ಸಾಕ್ಷಿ ಮಲ್ಲಿಕ್‌, “ನಮ್ಮ ಚಾಂಪಿಯನ್‌ಗಳನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ಜಗತ್ತು ನಮ್ಮನ್ನು ನೋಡುತ್ತಿದೆ” ಎಂದು ನೊಂದು ನುಡಿದಿದ್ದಾರೆ.

ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಘಟನೆಯ ಫೋಟೋಗಳನ್ನು ಹಂಚಿಕೊಂಡಿದ್ದು, “ಇದು ಭಯಾನಕ. ಜೈಲಿನಲ್ಲಿ ಇರಬೇಕಾದದನು ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಗೌರವ ಕಾಪಾಡಬೇಕಾದವರನ್ನು ದೆಹಲಿಯ ಬೀದಿಗಳಲ್ಲಿ ಎಳೆದು ತರಲಾಗುತ್ತಿದೆ. ನಾವು ಹಿಟ್ಲರ್ ಆಳ್ವಿಕೆಯ ಬಗ್ಗೆ ಕೇಳಿದ್ದೇವೆ. ಆದರೆ ಈಗ ನಾವು ಮೋದಿಯವರ ಆಡಳಿತದಲ್ಲಿ ಅದನ್ನು ನೋಡುತ್ತಿದ್ದೇವೆ. ಮೋದಿ ಸರ್ಕಾರವು ಅಪರಾಧಿಯನ್ನು ರಕ್ಷಿಸಲು ಇನ್ನು ಎಷ್ಟರ ಮಟ್ಟಿಗೆ ಹೋಗುತ್ತಿದೆ. ಸ್ವಲ್ಪ ನಾಚಿಕೆ ಇರಲಿ” ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, “ದೆಹಲಿ ಪೊಲೀಸರು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಇತರ ಕುಸ್ತಿಪಟುಗಳ ಮೇಲೆ ದೌರ್ಜನ್ಯ ನಡೆಸಿದ ರೀತಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಅವರನ್ನು ಕೂಡಲೇ ಪೊಲೀಸರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ನಾನು ನಮ್ಮ ಕುಸ್ತಿಪಟುಗಳ ಪರವಾಗಿ ನಿಲ್ಲುತ್ತೇನೆ” ಎಂದಿದ್ದಾರೆ.

ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಲವಂತವಾಗಿ ಬಸ್‌ಗಳಿಗೆ ಹತ್ತಿಸಿದರು. “ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ನಾವು ಸೂಕ್ತ ಸಮಯದಲ್ಲಿ ವಿಚಾರಣೆಯ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಸಿಪಿ ದೇವೇಂದ್ರ ಪಾಠಕ್ ಹೇಳಿದ್ದಾರೆ.

ಏಪ್ರಿಲ್ 23 ರಂದು ಕುಸ್ತಿಪಟುಗಳು ವ್ರೆಸ್ಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಆಂದೋಲನವನ್ನು ಪುನರಾರಂಭಿಸಿದ್ದರು. ಪ್ರತಿಭಟನಾ ಸ್ಥಳವನ್ನು ಪೊಲೀಸ್ ಅಧಿಕಾರಿಗಳು ತೆರವುಗೊಳಿಸುತ್ತಿರುವುದು ಕಂಡುಬಂದಿದೆ.

‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ಗೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕರೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದರು.

ಭಾನುವಾರ ದೆಹಲಿಯ ಲುಟಿಯನ್ಸ್ ಪ್ರದೇಶದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಮತ್ತು ಹಲವಾರು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ಸಂಸತ್ ಭವನದಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಯಾವುದೇ ಬೆಲೆ ತೆತ್ತಾದರೂ ಹೊಸ ಸಂಸತ್ ಭವನದ ಬಳಿ ತಮ್ಮ ‘ಮಹಾಪಂಚಾಯತ್’ ನಡೆಸುವುದಾಗಿ ಹೇಳಿದ್ದರು.

ಇದನ್ನೂ ಓದಿರಿ: ಪೋಕ್ಸೋ ಕಾಯ್ದೆ ದುರುಪಯೋಗ ಆಗುತ್ತಿದೆ: ಆರೋಪಿ ಬ್ರಿಜ್‌ ಭೂಷಣ್‌ ಹೇಳಿಕೆ

ಮಹಾ ಪಂಚಾಯತ್‌ ನಡೆಸಲು ಅನುಮತಿ ನೀಡಿರಲಿಲ್ಲ. ಪ್ರತಿಭಟನಾಕಾರರು ಹೊಸ ಸಂಸತ್‌ ಕಟ್ಟಡದ ಕಡೆಗೆ ಹೋಗದಂತೆ ಸೂಚಿಸಲಾಗಿತ್ತು. ಕುಸ್ತಿಪಟುಗಳು ಯಾವುದೇ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಬಾರದು ಎಂದು ಪೊಲೀಸರು ತಿಳಿಸಿದ್ದಾರೆ.

ಒಲಂಪಿಕ್ ಪದಕ ವಿಜೇತರಾದ ಬಜರಂಜ್ ಪೂನಿಯಾ, ಸಾಕ್ಷಿ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ವಿಜೇತ ವಿನೇಶ್ ಸೇರಿದಂತೆ ಹಲವು ಮುಂಚೂಣಿ ಕುಸ್ತಿಪಟುಗಳು ಹೋರಾಟದಲ್ಲಿ ನಿರತರಾಗಿದ್ದಾರೆ. ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಮತ್ತು ಓರ್ವ ಅಪ್ರಾಪ್ತ ಯುವತಿಗೆ ಬ್ರಿಜ್‌ ಭೂಷಣ್‌ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದರೆ. ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸದ ನಂತರ ಎರಡು ಎಫ್‌ಐಆರ್‌ಗಳನ್ನು ಬ್ರಿಜ್‌ ಭೂಷಣ್ ವಿರುದ್ಧ ದಾಖಲಿಸಲಾಗಿದೆ. ಆದರೆ ಅವರ ಬಂಧನವಾಗಿಲ್ಲ.

ದೇಶಕ್ಕೆ ಮಹತ್ವದ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳ ಸ್ಥಿತಿ ಇದಾಗಿದೆ. ದೇಶ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...