Homeಅಂತರಾಷ್ಟ್ರೀಯಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ವಾರೆಂಟ್!

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ವಾರೆಂಟ್!

ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಕಳೆದ ವರ್ಷದ ನವೆಂಬರ್‌ನಲ್ಲಿ ಅವರು ಲಂಡನ್‌ಗೆ ಪ್ರಯಾಣಿಸಿದ್ದರು.

- Advertisement -
- Advertisement -

ಅಕ್ರಮ ಭೂ ಹಂಚಿಕೆ ಪ್ರಕರಣದ ಸಂಬಂಧಿಸಿದಂತೆ, ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಅವರ ಬಂಧನಕ್ಕೆ ಪಾಕಿಸ್ತಾನ ಸರ್ಕಾರವು ವಾರೆಂಟ್‌ ಹೊರಡಿಸಿದೆ. ನವಾಜ್ ಷರೀಫ್‌ ಸೇರಿದಂತೆ ಅವರ ಪುತ್ರಿ ಮರಿಯಂ ಹಾಗೂ ಅಳಿಯ ಮಹಮ್ಮದ್‌ ಸಫ್ದಾರ್‌ ಕೂಡಾ ಅಕ್ರಮ ಭೂ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

ಪ್ರಸ್ತುತ ನವಾಜ್‌ ಷರೀಫ್ ಲಂಡನ್‌ನಲ್ಲಿ ವಾಸಿಸುತ್ತಿದ್ದು, ವಿದೇಶದಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಮಾಡಿಕೊಂಡಿದ್ದ ಮನವಿಗೆ ಲಾಹೋರ್‌ ಹೈಕೋರ್ಟ್‌ ಅನುಮತಿ ನೀಡಿದ್ದರಿಂದ, ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಕಳೆದ ವರ್ಷದ ನವೆಂಬರ್‌ನಲ್ಲಿ ಲಂಡನ್‌ಗೆ ಪ್ರಯಾಣಿಸಿದ್ದರು.

ಇದನ್ನೂ ಓದಿ: ನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ಡಿಸೆಂಬರ್‌ 2018 ರಂದು ಅಲ್‌ ಅಜಿಜಿಯಾ ಸ್ಟೀಲ್‌ ಮಿಲ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನವಾಜ್‌ ಷರೀಫ್‌ಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಈ ಎರಡೂ ಪ್ರಕರಣಗಳಲ್ಲಿಯೂ ಅವರಿಗೆ ಜಾಮೀನು ನೀಡಲಾಗಿತ್ತು.

“ಫಾಕಿಸ್ತಾನಕ್ಕೆ ಮರಳಲು ನವಾಜ್ ಷರೀಫ್‌ಗೆ ಎಂಟು ವಾರಗಳ ಗಡುವು ನೀಡಲಾಗಿತ್ತು. ಅವರ ಆರೋಗ್ಯ ಹದಗೆಟ್ಟಿರುವುದರಿಂದ ಇನ್ನೂ ಹಿಂತಿರುಗಿಲ್ಲ” ಎಂದು ನವಾಜ್‌ ಷರೀಫ್‌ ಪರ ವಕೀಲರು ತಿಳಿಸಿದ್ದಾರೆ.

ನವಾಜ್ ಷರೀಫ್‌ ಬಂಧನಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸರ್ಕಾರವು ಹೊರಡಿಸಿರುವ ವಾರೆಂಟ್,‌ ಲಂಡನ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ಗೆ ಗುರುವಾರವೇ ತಲುಪಿದ್ದು, ಇದರ ಕುರಿತು ಹೈ ಕಮಿಷನ್‌ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಪಾಕಿಸ್ತಾನಿ ದಿನ ಪತ್ರಿಕೆ ’ದಿ ಡಾನ್’‌ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

ತನ್ನ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆಯ ಸಂಧರ್ಭ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕೆಂದು ಕೋರಿ ನವಾಜ್ ಷರೀಫ್‌ ಅರ್ಜಿ ಸಲ್ಲಿಸಿದ್ದರಾದರೂ, ಇದನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ವಜಾಗೊಳಿಸಿತ್ತು.


ಇದನ್ನೂ ಓದಿ: ಸಂವಿಧಾನ ಬದಲಾಯಿಸುವ ಹುನ್ನಾರವನ್ನು ಜನರೇ ಪ್ರಶ್ನಿಸಿ ತಡೆಗಟ್ಟಬೇಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರೆಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರೆಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರೆಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...