Homeಮುಖಪುಟಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿಯ ಸಂಘಟನೆಗೆ, ವಿಶೇಷವಾಗಿ ಉಗ್ರಗಾಮಿ-ಪೀಡಿತ ಪುಲ್ವಾಮಾದಲ್ಲಿ ಪಕ್ಷ ಸಂಘಟನೆಯಲ್ಲಿ ವಹೀದ್ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ಡಿಡಿಸಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯೊಂದಿಗೆ ಜೊತೆ ಸಂಬಂಧ ಹಾಗೂ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಕಮಾಂಡರ್ ನವೀನ್ ಬಾಬು ಜೊತೆ ನಂಟಿರುವ ಆರೋಪದಲ್ಲಿ ವಹೀದ್‌ ಪರ್ರಾ ಅವರನ್ನು ನವೆಂಬರ್‌ 25ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈಗ  ವಹೀದ್ ಪರ್ರಾ‍ ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಂಗಳವಾರ (ಡಿ.22) ನಡೆದ ಡಿಡಿಸಿ ಚುನಾವನಾ ಮತ ಏಣಿಕೆಯಲ್ಲಿ ಕ್ಷಿಣ ಕಾಶ್ಮೀರದ ಪುಲ್ವಾಮಾದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಸದಸ್ಯರಾಗಿ ಮೆಹಬೂಬಾ ಮುಫ್ತಿ ಅವರ ಆಪ್ತ ಸಹಾಯಕ ವಹೀದ್‌ ಪರ್ರಾ ಚುನಾಯಿತರಾಗಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ಪಿಡಿಪಿ ಅಧ್ಯಕ್ಷೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಟ್ವಿಟರ್‌ನಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ವಹೀದ್ ಅವರನ್ನು ಅಭಿನಂದಿಸಿದ್ದಾರೆ.

 

“ಪಿಡಿಪಿಯ ವಹೀದ್ ಪರ್ರಾ‍ ಮೊದಲ ಚುನಾವಣೆಯಲ್ಲಿ ಭಾರಿ ಅಂತರದ ಮತಗಳಿಂದ ಜಯಗಳಿಸಿದ್ದಾರೆ. ವಹೀದ್ ನಾಮಪತ್ರ ಸಲ್ಲಿಸಿದ ಕೂಡಲೇ ಆಧಾರ ರಹಿತ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರೂ ಸಹ ಜನರು ತಮ್ಮ ಪ್ರೀತಿ ಮತ್ತು ನಂಬಿಕೆಯನ್ನು ತೋರಿಸಿದ್ದಾರೆ. ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇನೆ” ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.

ಪೀಪಲ್ಸ್‌‌ ಅಲಯನ್ಸ್‌ ಫಾರ್‌ ಗುಪ್ಕರ್‌ ಡಿಕ್ಲೆರೇಷನ್‌ (PAGD) ಅಭ್ಯರ್ಥಿಯಾಗಿ ವಹೀದ್‌ ಚುನಾವಣಾ ಕಣಕ್ಕಿಳಿದಿದ್ದರು. ಬಿಜೆಪಿಯ ಸಜ್ದಾ ಅಹ್ಮದ್ ರೈನಾ ವಿರುದ್ಧ ದೊಡ್ಡ ಅಂತರದಿಂದ ಗೆದ್ದಿದ್ದಾರೆ. ವಹೀದ್‌ 1,322 ಮತಗಳನ್ನು ಪಡೆದರೆ, ರೈನಾ ಕೇವಲ 314 ಮತ ಗಳಿಸಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿಯ ಸಂಘಟನೆಗೆ, ವಿಶೇಷವಾಗಿ ಉಗ್ರಗಾಮಿ-ಪೀಡಿತ ಪುಲ್ವಾಮಾದಲ್ಲಿ ಪಕ್ಷ ಸಂಘಟನೆಯಲ್ಲಿ ವಹೀದ್ ಪ್ರಮುಖ ಪಾತ್ರ ವಹಿಸಿದ್ದರು. ಇಲ್ಲಿಂದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ನವೆಂಬರ್‌ 20 ರಂದು ನಾಮಪತ್ರ ಸಲ್ಲಿಸಿದರು. ನವೆಂಬರ್‌ 25ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಮೆಹಬೂಬ ಮುಫ್ತಿ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...