Homeಮುಖಪುಟವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

- Advertisement -
- Advertisement -

ವಿದೇಶದಿಂದ ತುಮಕೂರು ನಗರಕ್ಕೆ ಬಂದಿರುವವರ ಮೇಲೆ ಆರೋಗ್ಯ ಇಲಾಖೆ ತೀವ್ರ ನಿಗಾವಹಿಸಿದೆ. ಕೊರೊನ ಸೋಂಕು ವ್ಯಾಪಕವಾಗಿ ಹರಡಿರುವ ದೇಶಗಳಿಂದ ನಗರಕ್ಕೆ ಬಂದಿರುವುದೇ ಇದಕ್ಕೆ ಕಾರಣ. ಕೊರೋನ ವೈರಸ್ ಪಾಸಿಟಿವ್ ಇರುವ ರೋಗಿಗಳು ಈವರೆಗೂ ಪತ್ತೆಯಾಗಿಲ್ಲ. ಆದರೂ ಅವರನ್ನು ಪ್ರತ್ಯೇಕ ಕೋಣೆಗಳಲ್ಲಿರುವಂತೆ ಎಚ್ಚರಿಕೆ ವಹಿಸಲಾಗಿದೆ ಮತ್ತು ಪರೀಕ್ಷೆ ನಡೆಸಲಾಗುತ್ತಿದೆ.

ಸೌದಿ ಅರೇಬಿಯಾ, ಬ್ಯಾಂಕಾಕ್, ವರ್ಜೇನಿಯಾ, ಅಮೆರಿಕಾ, ಇಂಡೋನೇಶಿಯಾದ ಬಾಲಿ, ಮಲೇಶಿಯಾ, ಒಮನ್, ಜರ್ಮನಿ, ದುಬೈ, ಮೆಕ್ಕಾ ಮದೀನಾ, ಚೀನಾ, ಇಟಲಿ, ಅಮೆರಿಕಾ ಸಂಯುಕ್ತ ಸಂಸ್ಥಾನ, ಕುವೈಟ್, ನೇಪಾಳ್, ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ ತುಮಕೂರು ನಗರಕ್ಕೆ ಬಂದಿದ್ದಾರೆ. ವಿದೇಶದಿಂದ ಬಂದಿರುವವರಲ್ಲಿ ದುಬೈ, ಸೌದಿ ಅರೇಬಿಯದಿಂದ ಬಂದಿರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ತುಮಕೂರಿನ ಮುಸ್ಲಿಂ ಬಾಹುಳ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ.

ಸೌದಿಅರೇಬಿಯಾ-9, ದುಬೈ-6 ಅಮೆರಿಕಾ-4, ಇಂಡೋನೇಶಿಯಾ-3, ಇಟಲಿ-3, ಚೀನಾ, ನೇಪಾಳ್, ಮೆಕ್ಕ ಜರ್ಮನಿ ತಲಾ ಒಬ್ಬೊಬ್ಬರು ತುಮಕೂರಿಗೆ ಬಂದಿದ್ದಾರೆ. ಇವರೆಲ್ಲರೂ ಕ್ಯಾತ್ಸಂದ್ರ, ಸೋಮೇಶ್ವರಪುರಂ, ಕೆ.ಆರ್.ಬಡಾವಣೆ, ನಜರಾಬಾದ್, ಸದಾಶಿವನಗರ, ಚಿಕ್ಕಪೇಟೆ, ಸಪ್ತಗಿರಿ ಬಡಾವಣೆ, ಸಂತೇಪೇಟೆ, ಕುರಿ ಪಾಳ್ಯ- ಹೀಗೆ ಎಲ್ಲೆಡೆ ವಾಸವಿದ್ದು ಅವರ ಮೇಲೆ ನಿಗಾ ಇಡಲು ವೈದ್ಯರನ್ನು ನೇಮಕ ಮಾಡಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ವಿದೇಶಗಳಿಂದ ಬಂದವರನ್ನು ಅವರ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿಟ್ಟು ನಿಗಾ ಇಡಲಾಗಿದೆ. ಕೊರೊನ ವೈರಸ್ ಹರಡಿರುವ ಯಾವುದೇ ಪ್ರಕರಣ ಇದುವರೆಗೆ ಪತ್ತೆಯಾಗಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಕೊರೋನ ರೋಗಿಗಳಿಗೆ ಪ್ರತ್ಯೇಕ ಕೊಠಡಿ ಸಜ್ಜುಗೊಳಿಸಿದ್ದು ಅವರನ್ನು ನೋಡಿಕೊಳ್ಳಲು 10 ಹಾಸಿಗೆಗಳನ್ನು ಇಡಲಾಗಿದೆ ಎಂದರು.

ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚು ಜನ ಸೇರುವ ಹೋಟೆಲ್ ಬಂದ್ ಮಾಡುವಂತೆ ಅದೇಶಿಸಿದ್ದರೂ ಎಲ್ಲಾ ಹೋಟೆಲ್‌ಗಳ ಬಾಗಿಲು ತೆಗೆದು ವ್ಯಾಪಾರ ನಡೆಸುತ್ತಿವೆ. ಸಭೆ ಸಮಾರಂಭಗಳು, ಸಿನಿಮಾ ಹಾಲ್‌ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತು ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನೂರಾರು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟು ನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಬೀದಿಬದಿಯಲ್ಲಿ ತಿಂಡಿತಿನಿಸುಗಳನ್ನು ಮಾರುವವರಿಗೆ ಪಾಲಿಕೆಯ ಅದೇಶ ಕೂಲಿ ಹುಟ್ಟದಂತೆ ಮಾಡಿದೆ.

ಇಟಲಿ, ಚೀನ ಅಮೇರಿಕಾ ಮೊದಲಾದ ಕಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ತೀವ್ರ ಪ್ರಾಣ ಹಾನಿ ಮಾಡಿದೆ. ಆದರೆ ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...