Homeಮುಖಪುಟದುರಹಂಕಾರ ವಿಪತ್ತಿಗೆ ಕಾರಣ: ಕಾಂಗ್ರೆಸ್‌ ಸೋಲಿಗೆ ಟಿಎಂಸಿ ವ್ಯಂಗ್ಯ

ದುರಹಂಕಾರ ವಿಪತ್ತಿಗೆ ಕಾರಣ: ಕಾಂಗ್ರೆಸ್‌ ಸೋಲಿಗೆ ಟಿಎಂಸಿ ವ್ಯಂಗ್ಯ

- Advertisement -
- Advertisement -

ಹರಿಯಾಣ ಚುನಾವಣಾ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ವಿರುದ್ಧ ವ್ಯಂಗ್ಯವಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ, ಪ್ರಾದೇಶಿಕ ಪಕ್ಷಗಳು ತಾವು ಗೆಲ್ಲುತ್ತೇವೆ ಎಂದು ಭಾವಿಸಿರುವ ಸ್ಥಳಗಳಲ್ಲಿ ಅವರಿಗೆ ಅವಕಾಶ ನೀಡದ ವರ್ತನೆ ಚುನಾವಣಾ ಸೋಲಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ದುರಹಂಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಕೋಖಲೆ, ಯಾವುದೇ ಪಕ್ಷದ ಹೆಸರಿಸದೆ, ಅಹಂಕಾರ, ಅರ್ಹತೆ ಮತ್ತು ಪ್ರಾದೇಶಿಕ ಪಕ್ಷಗಳನ್ನು ಕೀಳಾಗಿ ನೋಡುವುದು ದುರಂತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

“ಈ ವರ್ತನೆಯು ಚುನಾವಣಾ ಸೋಲಿಗೆ ಕಾರಣವಾಗುತ್ತದೆ. ಗೆಲ್ಲುತ್ತೇವೆ ಎಂದು ನಾವು ಭಾವಿಸಿದರೆ, ನಾವು ಯಾವುದೇ ಪ್ರಾದೇಶಿಕ ಪಕ್ಷಕ್ಕೆ ಅವಕಾಶ ನೀಡುವುದಿಲ್ಲ … ಆದರೆ ನಾವು ಇಲ್ಲದಿರುವ ರಾಜ್ಯಗಳಲ್ಲಿ, ಪ್ರಾದೇಶಿಕ ಪಕ್ಷಗಳು ನಮಗೆ ಅವಕಾಶ ಕಲ್ಪಿಸಬೇಕು” ಎಂದು ಟಿಎಂಸಿ ಸಂಸದ ಗೋಖಲೆ ಹೇಳಿದ್ದಾರೆ.

ದುರಹಂಕಾರ, ಅರ್ಹತೆ, ಪ್ರಾದೇಶಿಕ ಪಕ್ಷಗಳನ್ನು ಕೀಳಾಗಿ ಕಾಣುವುದು ಅನಾಹುತಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಹರಿಯಾಣದಲ್ಲಿ ಬಿಜೆಪಿಯು ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ಕಾಂಗ್ರೆಸ್‌ ಅನ್ನು ಮೂರನೇ ಬಾರಿಗೆ ಸೋಲಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಒಂದು ದಿನದ ನಂತರ ಗೋಖಲೆ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕನನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಕೈಬಿಟ್ಟ ಎಐಎಡಿಎಂಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಕಾಂಗ್ರೆಸ್ ಚುನಾವಣಾ ತಂತ್ರವನ್ನು ಪ್ರಶ್ನಿಸಿದ್ದರು. ಅವರ ಪಕ್ಷ ಎಎಪಿ ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿತ್ತು. ಆದರೆ ಕಾಂಗ್ರೆಸ್ ಅದಕ್ಕೆ ಒಪ್ಪಿರಲಿಲ್ಲ. ಚುನಾವಣೆ ಫಲಿತಾಂಶದ ನಂತರ ಅವರು ಪ್ರತಿಕ್ರಿಯಿಸಿ, ಇತ್ತೀಚಿನ ಸುತ್ತಿನ ಚುನಾವಣೆಗಳ ದೊಡ್ಡ ಪಾಠವೆಂದರೆ “ಅತಿಯಾದ ಆತ್ಮವಿಶ್ವಾಸ” ಇರಬಾರದು ಎಂದು ಮಂಗಳವಾರ ಹೇಳಿದ್ದರು.

ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ಚುನಾವಣೆಯಲ್ಲಿ ಎಲ್ಲಾ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷಗಳನ್ನು ಕರೆದುಕೊಂಡು ಹೋಗಬೇಕಾಗಿದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಹೇಳಿದ್ದಾರೆ.

ವಿರೋಧ ಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಒಕ್ಕೂಟದ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಿದರೆ, ಕಾಂಗ್ರೆಸ್ ಸಿಪಿಐ(ಎಂ) ಮತ್ತು ಇತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ವಿಡಿಯೊ ನೋಡಿ:‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...