Homeಮುಖಪುಟ370ನೇ ವಿಧಿ ರದ್ದತಿಗೆ ಮೆಹಬೂಬಾ ಮುಫ್ತಿ, ಅವರ ತಂದೆ ಕಾರಣ: ಎನ್‌ಸಿ

370ನೇ ವಿಧಿ ರದ್ದತಿಗೆ ಮೆಹಬೂಬಾ ಮುಫ್ತಿ, ಅವರ ತಂದೆ ಕಾರಣ: ಎನ್‌ಸಿ

- Advertisement -
- Advertisement -

370ನೇ ವಿಧಿಯನ್ನು ರದ್ದುಗೊಳಿಸಿ ಈ ಹಿಂದಿನ ಜಮ್ಮು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಕೆಳದರ್ಜೆಗಿಳಿಸಲು ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತು ಅವರ ದಿವಂಗತ ತಂದೆ ಮುಫ್ತಿ ಮೊಹಮ್ಮದ್ ಸಯೀದ್ ಕಾರಣ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಆರೋಪಿಸಿದೆ. 370ನೇ ವಿಧಿ

ಪಿಡಿಪಿಯನ್ನು ಟೀಕಿಸಿದ ಎನ್‌ಸಿ ನಾಯಕ, ಶಾಸಕ ತನ್ವೀರ್ ಸಾದಿಕ್ ಅವರು, ಮೆಹಬೂಬಾ ಮತ್ತು ಅವರ ದಿವಂಗತ ತಂದೆಯಿಂದಾಗಿ ಆಗಸ್ಟ್ 5, 2019ರ ಘಟನೆ ಸಂಭವಿಸಿತು ಮತ್ತು ಜಮ್ಮು ಕಾಶ್ಮೀರ “ತನ್ನ ಗುರುತನ್ನು ಕಳೆದುಕೊಂಡಿತು” ಎಂದು ಹೇಳಿದ್ದಾರೆ.

ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಜೊತೆಗೆ ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಕೆಳದರ್ಜೆಗಿಳಿಸಿ ವಿಭಜಿಸಿತು. ಜಮ್ಮು ಕಾಶ್ಮೀರವನ್ನು ವಿಧಾನಸಭೆಯಿರುವ ಮತ್ತು ಲಡಾಖ್ ಅನ್ನು ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. 370ನೇ ವಿಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಿಡಿಪಿ 2014 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿತ್ತು ಆದರೆ ಫಲಿತಾಂಶಗಳು ಅತಂತ್ರ ಸದನವನ್ನು ಸೃಷ್ಟಿಸಿದ ನಂತರ ಪಕ್ಷವೂ ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಿತ್ತು. ಅದಾಗ್ಯೂ, ಸ್ವಲ್ಪ ಕಾಲದಲ್ಲೆ ಬಿಜೆಪಿಯು ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡ ಕಾರಣ ಸರ್ಕಾರ ಪತನಗೊಂಡಿತ್ತು.

“ಆಗಸ್ಟ್ 5, 2019ರ ಘಟನೆ ನಡೆಯದಿದ್ದರೆ, ಬಹುಶಃ ನಾವು ನಮ್ಮ ರಾಜ್ಯತ್ವವನ್ನು ಕಳೆದುಕೊಳ್ಳುತ್ತಿರಲಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಇಲಾಖೆ ಚುನಾಯಿತ ಸರ್ಕಾರದ ಜೊತೆ ಇರುತ್ತಿತ್ತು” ಎಂದು ಎನ್‌ಸಿ ಶಾಸಕ ತನ್ವೀರ್ ಹೇಳಿದ್ದಾರೆ.

“ಜಮ್ಮು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವು ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆಯನ್ನು ನೇರವಾಗಿ ನಿಭಾಯಿಸಲು ಸಾಧ್ಯವಿಲ್ಲ. ಏಕೆಂದರೆ ಅದರ ನಿಯಂತ್ರಣ ಲೆಫ್ಟಿನೆಂಟ್-ಗವರ್ನರ್ ಅವರ ಕೈಯಲ್ಲಿದೆ. ಇದಕ್ಕೆ ಕಾರಣ ಪಿಡಿಪಿ” ಎಂದು ಅವರು ಹೇಳಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ, ವಿಶೇಷವಾಗಿ ಎನ್‌ಸಿ ಬಿಜೆಪಿಗೆ ಹತ್ತಿರವಾಗುತ್ತಿದೆ ಎಂಬ ಊಹಾಪೋಹವೆದ್ದಿದೆ. ಆದಾಗ್ಯೂ, ಇದನ್ನು ಅಲ್ಲಗೆಳೆದಿರುವ ತನ್ವೀರ್, “ಪಕ್ಷವು ಬಿಜೆಪಿ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜನರ ಆದೇಶವನ್ನು ಪಡೆದುಕೊಂಡಿತು. ನಾವು ಬಿಜೆಪಿಯ ನೀತಿಗಳನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಸೋಮವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ನಡುವಿನ ನಿಕಟತೆ ಇತ್ತು. ತನ್ವೀರ್, “ಗೃಹ ಸಚಿವರೊಂದಿಗಿನ ಸಭೆಗೆ ಅವರಿಗೆ (ಒಮರ್) ಯಾವುದೇ ವ್ಯವಸ್ಥೆಯ ಅಗತ್ಯವಿದೆಯೇ?” ಎಂದು ಕೇಳಿದ್ದಾರೆ.

ಇದನ್ನೂಓದಿ:  ದೆಹಲಿಯಲ್ಲಿ ಕುಳಿತು ಗುಂಪು ಹಲ್ಲೆ, ಗೋರಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

ದೆಹಲಿಯಲ್ಲಿ ಕುಳಿತು ಗುಂಪು ಹಲ್ಲೆ, ಗೋರಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...