Homeಮುಖಪುಟಹಲಾಲ್, ಜಟ್ಕಾ ವಿವಾದದ ಸುಳಿಯಲ್ಲಿ - ದೇವನೂರ ಮಹಾದೇವ

ಹಲಾಲ್, ಜಟ್ಕಾ ವಿವಾದದ ಸುಳಿಯಲ್ಲಿ – ದೇವನೂರ ಮಹಾದೇವ

ಹಿಂದು-ಮುಸ್ಲಿಂ ಸಹಬಾಳ್ವೆಯ ಖಂಡುಗ ಹಾಲಿಗೆ ಒಂದು ಸೊಲಗ ವಿಷದ ಹೆಪ್ಪು ಹಾಕಿ ಸಮಾಜ ಛಿದ್ರಗೊಳಿಸಿ, ಧರ್ಮ ಕೋಮು ಧೃವೀಕರಣದ ಓಟು ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ.

- Advertisement -
- Advertisement -

ಇಂದು, ಮಾಂಸವನ್ನು ಎಂದೂ ತಿನ್ನದ ಪ.ಮಲ್ಲೇಶ್ ಅವರು ಹಲಾಲ್ ಮಾಂಸ ಕೊಂಡುಕೊಂಡಿದ್ದಾರೆ! ಇದು ನಿಜಕ್ಕೂ ಚಾರಿತ್ರಿಕ. ಮಲ್ಲೇಶ್ ಇಂದಿನ ವಿಷಮಯ ವಾತಾವರಣ ಕಂಡು ಜಿಗುಪ್ಸೆಗೊಂಡು ಈ ರೀತಿ ಅಭಿವ್ಯಕ್ತಿ ವ್ಯಕ್ತಪಡಿಸಿದ್ದಾರೆ. ನೊಂದವರಿಗೆ ಏನೋ ಒಂದಿಷ್ಟು ಸಾಂತ್ವಾನ ನೀಡಿದ್ದಾರೆ. ಇದು ಸಣ್ಣ ಕ್ರಿಯೆಯಾದರೂ ಅದು ಹಣತೆಯ ಬೆಳಕಿನಂತೆ.

ನಮ್ಮ ಹಳ್ಳಿ ಕಡೆ ಒಂದು ಮಾತಿದೆ – “ಆಯ್ದುಕೊಂಡು ತಿನ್ನೋ ಕೋಳಿಗೆ ಕಾಲು ಮುರಿಯಬಾರದು” ಅಂತ. ಹಾಗೇ ಇನ್ನೊಂದು ಮಾತೂ ಇದೆ – “ಹೊಟ್ಟೆಗೆ ಹೊಡೆಯಬಾರದು, ಅದು ಅಧರ್ಮ, ಪಾಪ” ಅಂತ. ಇಂದು ನಮ್ಮ ಸುತ್ತಮುತ್ತ ಇವೇ ಆಗುತ್ತಿವೆ. ಒಂದು ಉದಾಹರಣೆ – ಹಳೇಪೇಪರ್, ಖಾಲಿಬಾಟಲ್, ಹಾಲಿನ ಕವರ್ ಮಾರಲು ನಾನು ಕಾಯುತ್ತಿದ್ದೇನೆ. ಕೊಂಡುಕೊಳ್ಳುವವರು ಯಾರೊಬ್ಬರೂ ಕಾಣುತ್ತಿಲ್ಲ. ಕಲುಷಿತ ವಾತಾವರಣದಿಂದ ನಿಶ್ಯಬ್ಧರಾಗಿದ್ದಾರೆ. ಎಲ್ಲಿದ್ದಾರೋ ಏನು ಮಾಡುತ್ತಿದ್ದಾರೊ ಗೊತ್ತಿಲ್ಲ.

ಹಳೇಪೇಪರ್, ಹಾಲಿನ ಕವರ್, ಖಾಲಿ ಬಾಟಲ್ ಮಾರಾಟದಿಂದಾಗಿ ಇವುಗಳ ಪುನರ್ ಬಳಕೆಯಾಗುತ್ತಿತ್ತು. ಈಗ ಈ ಕಾಯಕ ನಿಂತಿದೆ. ಇದರಿಂದಾಗಿ, ಪೇಪರ್‌ಗಾಗಿ ಮರ ಕಡಿಯುವುದು ಹೆಚ್ಚುತ್ತದೆ. ಪರಿಣಾಮವಾಗಿ ಬಿಸಿಲು ಏರುತ್ತದೆ. ಕಾರ್ಬಲ್ ಡೈಆಕ್ಸೈಡ್ ಹೆಚ್ಚುತ್ತದೆ. ಭೂಮಿ ಬೇಯುತ್ತದೆ. ಪ್ಲಾಸ್ಟಿಕ್ ತ್ಯಾಜ್ಯ ಭೂಮಿಗೆ ಸೇರುವುದರಿಂದಲೂ ಭೂಮಿ ಅನಾರೋಗ್ಯವಾಗುತ್ತದೆ. ಇದನ್ನು ಸ್ವಲ್ಪಮಟ್ಟಿಗೆ ತಪ್ಪಿಸುತ್ತಿದ್ದ ಹಳೆಪೇಪರ್ ಮಾರಾಟದ ಕಾಯಕ ಜೀವಿಗಳು ಮಾಡುತ್ತಿದ್ದುದು ನಿಜಕ್ಕೂ ಭೂಮಿ ಸೇವೆ. ಇದೇ ದೇಶಸೇವೆ. ಇದು ಬಹುಶಃ ಆ ಕಾಯಕ ಜೀವಿಗಳಿಗೂ ಗೊತ್ತಿಲ್ಲ. ಸಮಾಜಕ್ಕೂ ಗೊತ್ತಿಲ್ಲ. ಇದು ದುರಂತ. ಆಯ್ತು, ಕಾವಿ ಬಟ್ಟೆ ತೊಟ್ಟು, ಇಂದು ಆರ್ಭಟಿಸುತ್ತಿರುವ ಮಠಮಾನ್ಯ ಸಂಘಟನೆಗಳು ತಮ್ಮ ಮರಿಗಳಿಂದ ‘ಅಹಂಕಾರ ನಿರಸನ ಕ್ರಿಯೆ’ಗಾಗಿ ಈ ಕಾಯಕ ಮಾಡಿಸಬಹುದಲ್ಲ?

ದ್ವೇಷ ಅಸಹನೆಯ ಕುಸಂಸ್ಕೃತಿಯ ರಂಗಪ್ರವೇಶವು ‘ಹಿಜಾಬ್ ನಿಷೇಧವಾಗಬೇಕು’ ಎಂಬ ದಾಂಧಲೆಯಿಂದ ಆರಂಭವಾಗುತ್ತದೆ. ಯಾರಿಗೊ ಒಬ್ಬರಿಗೆ ಕೋರ್ಟ್ ತೀರ್ಪು ವಿರುದ್ಧವಾದಾಗ ಆ ವ್ಯಕ್ತಿ ಹಾಗೂ ಆ ಕುಟುಂಬದವರು ಸಂಭ್ರಮಿಸಬೇಕಿತ್ತೆ? ಅವರು ತಮ್ಮ ದುಃಖಕ್ಕೆ ತಮ್ಮ ಮನೆ ಬಾಗಿಲು ಮುಚ್ಚಿಕೊಂಡು ಮೌನವಾದರು ಎಂದಿಟ್ಟುಕೊಳ್ಳೋಣ. ಇದು ನ್ಯಾಯಾಂಗದ ಆದೇಶ ಉಲ್ಲಂಘನೆಯಾಗುತ್ತದೆಯೆ? ಇಲ್ಲೂ ಇದೇ ರೀತಿ ಆಯ್ತು. ಹಿಜಾಬ್ ವಿರುದ್ಧ ಕೋರ್ಟ್ ತೀರ್ಪು ವಿರುದ್ಧವಾದಾಗ- 17-03-2022ರಂದು ಬಂದ್ ಸತ್ಯಾಗ್ರಹಕ್ಕೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ ನೀಡುತ್ತದೆ. ಮುಸ್ಲಿಂ ಸಂಘಟನೆಗಳ ಒಕ್ಕೂಟ ತಮ್ಮ ಕರಪತ್ರದಲ್ಲಿ ಹೀಗೆ ಹೇಳುತ್ತಾರೆ – “ಇಂದು ನಡೆಯುತ್ತಿರುವ ಬಂದ್ ಯಾರ ವಿರುದ್ಧವಾದುದೂ ಅಲ್ಲ. ಯಾರಿಗೂ ತೊಂದರೆ ಕೊಡುವಂಥದ್ದೂ ಅಲ್ಲ. ‘ಉಪವಾಸ ಸತ್ಯಾಗ್ರಹ’ದ ರೀತಿ ನಾವು ‘ಬಂದ್ ಸತ್ಯಾಗ್ರಹ’ ನಡೆಸುತ್ತಿದ್ದೇವೆ ಅಷ್ಟೆ. ನಾವು ನಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೆ ನಮಗಾಗಿರುವ ನೋವನ್ನು ಅಭಿವ್ಯಕ್ತಿ ಪಡಿಸುತ್ತಿದ್ದೇವೆ. ಯಾರಿಗೂ ಬಲವಂತ ಮಾಡುತ್ತಿಲ್ಲ. ಬೀದಿಗೆ ಇಳಿಯುತ್ತಿಲ್ಲ. ಘೋಷಣೆಯನ್ನೂ ಹಾಕುತ್ತಿಲ್ಲ. ನಾವು ಬಹಳ ಬಹಳ ನೊಂದಿದ್ದೇವೆ ಎಂದಷ್ಟೆ ಎಲ್ಲಾ ಧರ್ಮದ ಬಂಧುಗಳಿಗೆ ಹೇಳಬಯಸುತ್ತೇವೆ” – ಇದಿಷ್ಟೇ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಮಾತುಗಳು. ಹಾಗೆ ನೋಡುವುದಾದರೆ ಈ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಬಂದ್ ನಾಗರೀಕವಾದ ಒಂದು ಘನತೆಯ ಮಾದರಿಯನ್ನು ಸೃಷ್ಟಿಸಿದೆ. ಆದರೆ ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು ಎಂಬಂತೆ ಕೆಲವರಿಗೆ ಕಂಡಿದೆ! ಹಾಗಾಗಿ ಈ ಬಂದ್ ನೆಪಮಾಡಿಕೊಂಡು ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಕ್ಕೆ ತಗಾದೆ ತೆಗೆದರು. ಇಂದು ಆ ಗುಂಪೇ ಹಲಾಲ್ ಮಾಂಸಕ್ಕೆ ಮುಗಿಬಿದ್ದಿದ್ದಾರೆ. ಮಾಂಸ ತಿನ್ನದವರೇ ಹೆಚ್ಚಾಗಿ ಹಲಾಲ್ ಮಾಂಸಕ್ಕೆ ಯಕ್ಷಗಾನ, ನಾಟಕ ಮಾಡುತ್ತಿದ್ದಾರೆ. ಧರ್ಮದ ಮುಖವಾಡದಲ್ಲಿ ಅದರೊಳಗೆ ಅಧರ್ಮ, ದ್ವೇಷ ಕುಣಿದು ಕುಪ್ಪಳಿಸುತ್ತಿದೆ. ಯಾಕಾಗಿ? ಹಿಂದು-ಮುಸ್ಲಿಂ ಸಹಬಾಳ್ವೆಯ ಖಂಡುಗ ಹಾಲಿಗೆ ಒಂದು ಸೊಲಗ ವಿಷದ ಹೆಪ್ಪು ಹಾಕಿ ಸಮಾಜ ಛಿದ್ರಗೊಳಿಸಿ, ಧರ್ಮ ಕೋಮು ಧೃವೀಕರಣದ ಓಟು ಬ್ಯಾಂಕ್ ರಾಜಕಾರಣದ ಗೆಲುವಿಗಾಗಿ. ಇದಕ್ಕಾಗಿ ಅಧರ್ಮವೇ ಧರ್ಮದ ಮುಖವಾಡದಲ್ಲಿ ದ್ವೇಷ ಅಸಹನೆಯನ್ನು ಬಿತ್ತಿ, ಬೆಳೆದು, ಕೊಂದು, ಉಂಡು, ತಿಂದು ಕೊಬ್ಬುತ್ತಿದೆ. (ಇದನ್ನೆಲ್ಲಾ ನೋಡಿದಾಗ ಕುವೆಂಪು ಅವರು ಹೇಳಿದ ಒಂದು ರೂಪಕ ನೆನಪಾಗುತ್ತಿದೆ – “ಲಂಗೋಟಿ ಕಟ್ಟಿಕೊಂಡು ಕುಸ್ತಿ ಮಾಡುವವರೊಟ್ಟಿಗೆ ಕುಸ್ತಿ ಮಾಡಬಹುದು. ಆದರೆ ಲಂಗೋಟಿ ಬಿಚ್ಚಿ ಕುಸ್ತಿ ಮಾಡುವವರ ಜೊತೆ ಹೇಗೆ ಕುಸ್ತಿ ಮಾಡುವುದು? ನಾವು ಆ ನಿರ್ಲಜ್ಜ ಅಖಾಡಕ್ಕೆ ಹೋಗಲೇಬಾರದು”.) ಇಂದು ಲಂಗೋಟಿ ಇಲ್ಲದೆ, ನಿರ್ಲಜ್ಜವಾಗಿ ಕುಸ್ತಿ ಆಡುವವರೇ, ಎತ್ತ ನೋಡಿದರೂ ಕಾಣಿಸುತ್ತಿದ್ದಾರೆ. ನಾವು ಕುಸ್ತಿ ಆಡುವುದೆಂತು?

ನಾವು ಈ ಸರ್ಕಾರಕ್ಕೆ ಇದಿಷ್ಟನ್ನಾದರೂ ಕೇಳಬೇಕು – “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ” ಇದೆಯಾ? ಇಲ್ಲವೇ ಇಲ್ಲ, ಬಿಲ್‌ಕುಲ್ ಕಾಣುತ್ತಿಲ್ಲ. ಛೂಬಿಟ್ಟ ಗುಂಪು, ತಾವೆ ಕಾನೂನು ಕೈಗೆತ್ತಿಕೊಂಡು, ತಾವೇ ನ್ಯಾಯಾಧೀಶರಂತೆ ಪೊಲೀಸ್‌ರಂತೆ ವರ್ತಿಸುತ್ತಿವೆ. ಆಯ್ತು, ಸರ್ಕಾರವಾದರೂ ಇದೆಯಾ? ನನಗಂತು ಇದೆ ಅಂತ ಅನ್ನಿಸುತ್ತಿಲ್ಲ. ಅಥವಾ ಬಜರಂಗದಳ, ಶ್ರೀರಾಮಸೇನೆ, ಕೆಲ ಮಠಗಳಿಗೆ ಸರ್ಕಾರವೇ ಕಣ್ಸನ್ನೆ ಮಾಡಿ ಲಾ & ಆರ್ಡರ್ ಹದಗೆಡಿಸಲು ಛೂ ಬಿಟ್ಟಿದಿಯಾ? ಇದಲ್ಲದೆ ಇನ್ನೇನು? ಬಜರಂಗದಳದ ಅಮಾಯಕ ಹುಡುಗರಿಗೆ ಉದ್ಯೋಗ ನೀಡಿದ್ದರೂ ಇಷ್ಟೆಲ್ಲಾ ಗಲಭೆ ಆಗುತ್ತಿರಲಿಲ್ಲ. ಈಗ ಇನ್ನೊಂದು ಪಿಶಾಚಿ ಇಣುಕುತ್ತಿದೆ – ಅದೇ ಪ್ರಾಣಿವಧೆ ಮಾಡುವಾಗ ಅದನ್ನು ಹೇಗೆ ಕೊಲ್ಲಬೇಕು ಅಂತ, ಕೆಲವರು ಮಾನವೀಯತೆಯಿಂದ ಕೊಲ್ಲಬೇಕು ಅಂತ ಅನ್ನುತ್ತಿದ್ದಾರೆ. ಪ್ರಾಣಿ ಕೊಲ್ಲುವುದೇ ಅದರ ಮಾಂಸ ತಿನ್ನುವುದಕ್ಕಾಗಿ. ಇದರಲ್ಲಿ ‘ಮಾನವೀಯತೆ’ ಪದಬಳಕೆ ಯಾಕೆ? ಪ್ರಾಣಿವಧೆ ಹೇಗೆ ಮಾಡಬೇಕೆಂಬ ಈ ವಿವಾದ ಹೆಚ್ಚಿದರೆ, ನೆನಪಿರಲಿ, ಅದರೊಳಗೆ ಮನುಷ್ಯ ವಧೆ ಬಚ್ಚಿಟ್ಟುಕೊಂಡಿದೆ. “ಒಂದು ಹಿಂದೂ ಹೆಣಬಿದ್ದರೆ ಅಲ್ಲಿ ಬಿಜೆಪಿ ಗೆಲವು ಗ್ಯಾರಂಟಿ” ಎಂಬ ಮನಸ್ಥಿತಿ ಇರುವಾಗ ಯಾವುದು ಅಸಾಧ್ಯ? ಮಾಂಸಾಹಾರಿಗಳು ಪ್ರಾಣಿವಧೆ ಮಾಡುತ್ತಿದ್ದರೆ ಸರ್ಕಾರ ನರಬಲಿ ಕೇಳುತ್ತಿದೆ, ತನ್ನ ಗೆಲುವಿಗಾಗಿ.

ಬೇಲಿಯೇ ಎದ್ದು ಹೊಲ ಮೇಯುತ್ತಾ ಇರುವಾಗ ಯಾರನ್ನು ಕೇಳುವುದು? ಉಳಿದಿರುವುದು ಒಂದೇ ದಾರಿ. ನಾಡಿನ ಯಾವುದೇ ಮೂಲೆಗೆ ಹೋದರೂ, ಯಾವುದೇ ಹಳ್ಳಿಗೆ ಹೋದರೂ ಸಕಲ ಹದಿನೆಂಟು ಜಾತಿ ಧರ್ಮಕ್ಕೆ ಸೇರಿದ ಸಹಬಾಳ್ವೆ ಬಯಸುವ ಮನುಷ್ಯರು ಸಿಕ್ಕೇ ಸಿಗುತ್ತಾರೆ. ನಾವೀಗ ಅವರ ಕಡೆ ನೋಡಬೇಕಿದೆ. ಎಲ್ಲಡೆಯೂ ‘ಸಕಲೆಂಟು ಜಾತಿ/ಮತ ಸಹಬಾಳ್ವೆ ಸಂಘ’ ಚಿಗುರಬೇಕಾಗಿದೆ. ನಾಡು ಉಳಿಯಬೇಕಾದರೆ ಅದು ಕ್ರಿಯಾಶೀಲವಾಗಬೇಕಾಗಿದೆ.

  • ದೇವನೂರ ಮಹಾದೇವ

(ಕನ್ನಡದ ಹಿರಿಯ ಸಾಹಿತಿಗಳು ಮತ್ತು ಜನಪರ ಹೋರಾಟಗಾರರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಡೋಜ ದೇವನೂರು ಮಹದೇವ ಅವರ ಈ ಮಾನವೀಯ ಮಾತುಗಳು ಅಂದರಾದ ಜನರ ಕಣ್ಣು ತೆರೆಸಲಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...