Homeಮುಖಪುಟಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

ಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

- Advertisement -
- Advertisement -

ಅರುಣಾಚಲ ಪ್ರದೇಶದ ನದಿಯೊಂದು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಕಮೆಂಗ್ ನದಿಯ ಮೇಲ್ಮೈಯಲ್ಲಿ ತೇಲುತ್ತಿರುವ ಮೀನುಗಳನ್ನು ತಿನ್ನದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅದು ವರದಿ ಮಾಡಿದೆ.

ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಹುಟ್ಟುವ ನದಿಯು ಕಪ್ಪು ಬಣ್ಣಕ್ಕೆ ತಿರುಗಲು ಒಟ್ಟು ಕರಗಿದ ಪದಾರ್ಥಗಳ ( total dissolved substances-ಟಿಡಿಎಸ್‌) ಹೆಚ್ಚಿನ ಅಂಶವೇ ಕಾರಣ ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಟಿಡಿಎಸ್ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ಹೆಚ್ಚಿನ ಮಟ್ಟದ ಟಿಡಿಎಸ್‌ನಿಂದಾಗಿ ನೀರಿನ ಅಡಿಯಲ್ಲಿರುವ ಮೀನುಗಳು ಕಡಿಮೆ ಗೋಚರತೆಯನ್ನು ಅನುಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮೆಂಗ್ ನದಿಯಲ್ಲಿನ ಟಿಡಿಎಸ್ ಪ್ರತಿ ಲೀಟರ್‌ಗೆ 6,800 ಮಿ.ಗ್ರಾಂ ಆಗಿತ್ತು, ಇದು ಪ್ರತಿ ಲೀಟರ್‌ಗೆ ಸಾಮಾನ್ಯ ಶ್ರೇಣಿಯ 300-1,200 ಮಿಗ್ರಾಂಗಿಂತ ಹೆಚ್ಚಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ಹೇಳಿದ್ದಾರೆ.

“ನದಿಯ ಪರಿಸ್ಥಿತಿ ಹೀಗೇ ಇದ್ದರೆ, ಇನ್ನು ಕಲವೇ ದಿನಗಳಲ್ಲಿ ನದಿಯ ಜಲಚರಗಳು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

 

ಈ ಮಧ್ಯೆ, ಘಟನೆ ನಡೆದ ಸೆಪ್ಪಾ ಗ್ರಾಮದ ನಿವಾಸಿಗಳು ಚೀನಾವನ್ನು ದೂಷಿಸಿದ್ದಾರೆ. ಗಡಿಯುದ್ದಕ್ಕೂ ನೆರೆಯ ದೇಶವು ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳಿಂದ ಟಿಡಿಎಸ್ ಮಟ್ಟವು ಅಪಾಯಕಾರಿಯಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಕಮೆಂಗ್ ನದಿಯ ನೀರಿನ ಬಣ್ಣ ಹಠಾತ್ ಬದಲಾವಣೆ ಮತ್ತು ಹೆಚ್ಚಿನ ಪ್ರಮಾಣದ ಮೀನುಗಳ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕೆಂದು ಸೆಪ್ಪಾ ಪೂರ್ವ ಶಾಸಕ ತಪುಕ್ ಟಾಕು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2017 ರಲ್ಲಿ, ಪಾಸಿಘಾಟ್‌ನಲ್ಲಿ ಸಿಯಾಂಗ್ ನದಿಯು ಇದೇ ರೀತಿಯ ಕಪ್ಪಾಗಿರುವುದು ವರದಿಯಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...