Homeಅಂತರಾಷ್ಟ್ರೀಯಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ಕಂಡಿಲ್ಲ- ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ 101 ಮನೆಗಳುಳ್ಳ ಗ್ರಾಮವೊಂದನ್ನು ನಿರ್ಮಿಸಿದ್ದ ಚೀನಾ ಈಗ ಅಧಿಕೃತವಾಗಿ, “ನಮ್ಮ ಪ್ರದೇಶದೊಳಗೆ ಅಭಿವೃದ್ಧಿ ಕಾರ್ಯಗಳು ನಡೆಯುವುದು ಸಾಮಾನ್ಯ” ಎಂದು ಗುರುವಾರ ಹೇಳಿದೆ.

“ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ನೋಡಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್ ಅವರು ಮಾಧ್ಯಮ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಹೇಳಿದ್ದಾರೆ.

ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತದೆ. ಆದರೆ ಈಶಾನ್ಯ ರಾಜ್ಯವು ದೇಶದ ಅವಿಭಾಜ್ಯ ಅಂಗ ಎಂಬುದು ಭಾರತದ ಸ್ಥಿರ ನಿಲುವಾಗಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

“ಚೀನಾದ ಅಭಿವೃದ್ಧಿ ಮತ್ತು ನಿರ್ಮಾಣ ಚಟುವಟಿಕೆಗಳು ನಮ್ಮ ಭೂಪ್ರದೇಶದೊಳಗೆ ಸಾಮಾನ್ಯವಾಗಿದೆ. ಇದು ನಮ್ಮ ಪ್ರದೇಶವಾಗಿರುವುದರಿಂದ ಇಲ್ಲಿ ಟೀಕೆಗೆ ಅವಕಾಶವಿಲ್ಲ” ಎಂದು ಹುವಾ ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚೀನಾ, ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ನಿರ್ಮಿಸಿದ್ದು, ಇವುಗಳನ್ನು ತೋರಿಸುವ ಉಪಗ್ರಹ ಚಿತ್ರಗಳು ದೊರಕಿವೆ.

“ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿದ್ದು. ಇದು ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ. ಆಗಸ್ಟ್ 26, 2019 ರ ಉಪಗ್ರಹ ಚಿತ್ರದಲ್ಲಿ ಅಲ್ಲಿ ಯಾವುದೇ ಗ್ರಾಮದ ಕುರುಹು ಇರಲಿಲ್ಲ. ಹಾಗಾಗಿ ಈ ಗ್ರಾಮ ಕಳೆದ ವರ್ಷ ನಿರ್ಮಾಣವಾಗಿದೆ” ಎಂದು ಅಂದಾಜಿಸಲಾಗಿದೆ.

ನವೆಂಬರ್ 1, 2020 ದಿನಾಂಕ ನಮೂದಿಸಲ್ಪಟ್ಟಿರುವ ಈ ಉಪಗ್ರಹ ಚಿತ್ರಗಳನ್ನು ಹಲವಾರು ತಜ್ಞರು ವಿಶ್ಲೇಷಿಸಿದ್ದಾರೆ. ಭಾರತ-ಚೀನಾ ನಡುವಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಬಳಿಯ ಭಾರತೀಯ ಭೂಭಾಗದಲ್ಲಿ ನಿರ್ಮಾಣಗೊಂಡಿರುವ ಈ ಗ್ರಾಮವು ವಾಸ್ತವಿಕ ಗಡಿ ರೇಖೆಯಿಂದ ಅಂದಾಜು 4.5 ಕಿಮೀ ಒಳಗಿದೆ.

ಇದನ್ನೂ ಓದಿ: ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ಈ ಉಪಗ್ರಹ ಚಿತ್ರಗಳನ್ನು ಪ್ಲಾನೆಟ್ ಲ್ಯಾಬ್ಸ್ ಇಂಕ್ ಮೂಲಕ ಪಡೆದಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ. ಭಾರತ ಸರ್ಕಾರ ತನ್ನ ಅಧಿಕೃತ ನಕ್ಷೆ ಎಂದು ಬಳಸುವ ಸರ್ವೇಯರ್ ಜನರಲ್ ಆಫ್ ಇಂಡಿಯಾದ ಆನ್ಲೈನ್ ನಕ್ಷೆಯಲ್ಲೂ ಚೀನಾದ ಈ ಗ್ರಾಮ ಭಾರತದ ಭೂಭಾಗದಲ್ಲಿರುವುದು ಕಾಣಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, “ಗಡಿ ಪ್ರದೇಶಗಳಲ್ಲಿ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಕುರಿತಂತೆ ಇತ್ತೀಚಿಗಿನ ವರದಿಗಳನ್ನು ನೋಡಿದ್ದೇವೆ. ಹಿಂದೆ ಕೂಡ ಚೀನಾ ಇಂತಹ ನಿರ್ಮಾಣ ಕೆಲಸ ನಡೆಸಿದೆ. ಗಡಿ ಪ್ರದೇಶದಲ್ಲಿನ ಮೂಲಭೂತ ಸೌಲಭ್ಯ ಉತ್ತಮ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ಪ್ರದೇಶದ ಜನರಿಗೆ ಅನುಕೂಲವಾಗಲು ಅಲ್ಲಿ ರಸ್ತೆ, ಸೇತುವೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಚೀನಾವನ್ನು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರ ಅಗತ್ಯ: ಕೆನ್ನೆತ್ ಜಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...