Homeಮುಖಪುಟಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

- Advertisement -
- Advertisement -

ದಿನ ದಿನಕ್ಕೂ ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿರುವವ ಹೆಸರು ಬಯಲಾಗುತ್ತಲೇ ಇದೆ. ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಉನ್ನತ ಮಟ್ಟದ ತನಿಖೆಯ ನೇತೃತ್ವ ವಹಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರ ಹೆಸರು ಕಂಡುಬಂದಿದೆ.

ಫಾರ್ಬಿಡನ್‌ ಸ್ಟೋರಿಸ್‌ ಬಿಡುಗಡೆ ಮಾಡಿರುವ ತನಿಖಾ ವರದಿ ‘ಪೆಗಾಸಸ್‌ ಪ್ರಾಜೆಕ್ಟ್‌‌’ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದೆ. 2016 ರಿಂದ ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ಇದರಲ್ಲಿ ನಮ್ಮ ದೇಶದ 300 ಕ್ಕೂ ಹೆಚ್ಚು ಜನರನ್ನು ಗುರಿಮಾಡಲಾಗಿದೆ ಎಂದು ವರದಿಯಾಗಿದೆ.

ಹಿರಿಯ ಜಾರಿ ನಿರ್ದೇಶನಾಲಯ ಅಧಿಕಾರಿ ರಾಜೇಶ್ವರ ಸಿಂಗ್ ಅವರ ಎರಡು ದೂರವಾಣಿ ಸಂಖ್ಯೆಗಳು ಮತ್ತು ಅವರ ಕುಟುಂಬದ ಮೂರು ಮಹಿಳೆಯರ ನಾಲ್ಕು ದೂರವಾಣಿ ಸಂಖ್ಯೆಗಳು ಪೆಗಾಸಸ್ ಗೂಢಚರ್ಯೆ ಕಣ್ಗಾವಲು ಪಟ್ಟಿಯಲ್ಲಿ ಕಂಬುಬಂದಿದೆ.

ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕರಾಗಿ ಕೆಲಸ ಮಾಡಿದ್ದ ಮಾಜಿ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ವಿ.ಕೆ.ಜೈನ್ ಅವರ ದೂರವಾಣಿ ಸಂಖ್ಯೆ ಕೂಡ ಪೆಗಾಸಸ್ ಪಟ್ಟಿಯಲ್ಲಿ ಕಂಡು ಬಂದಿದೆ.

ಇದಲ್ಲದೇ, ಸೋರಿಕೆಯಾದ ದಾಖಲೆಗಳಲ್ಲಿ ಪ್ರಧಾನ ಮಂತ್ರಿ ಕಚೇರಿ ಮತ್ತು ಎನ್‌ಐಟಿಐ ಆಯೋಗದ ತಲಾ ಒಬ್ಬೊಬ್ಬ ಅಧಿಕಾರಿ ಇದ್ದಾರೆ ಎನ್ನಲಾಗಿದೆ.

ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಬಳಸಿ ಸರ್ಕಾರಿ ಸಂಸ್ಥೆಗಳು ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಹಗರಣದ ಬಗ್ಗೆ ಸುಮೋಟೊ ಕೇಸ್ ದಾಖಲಿಸಿಕೊಂಡು ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿವಸೇನೆ ಮನವಿ ಮಾಡಿದೆ. ದೇಶಾದ್ಯಂತ ಕಾಂಗ್ರೆಸ್ ಪೆಗಾಸಸ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...