Homeಮುಖಪುಟಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

ಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

- Advertisement -
- Advertisement -

ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ನವ ದೆಹಲಿಯಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ‘ಸಂಸದ್ ಮೇ ಭಿ ಕೇಜ್ರಿವಾಲ್, ದಿಲ್ಲಿ ಹೋಗಿ ಔರ್ ಖುಷ್ ಹಾಲ್’ ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು. ಏಪ್ರಿಲ್-ಮೇksabha ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದೆ.

ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಯಿತು. ‘ನನ್ನ ಕುಟುಂಬವಾಗಿರುವ ದೆಹಲಿಯ ಜನರಿಗೆ ಸೇವೆ ಸಲ್ಲಿಸಲು ನಾನು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ’ ಎಂದು ಕೇಜ್ರಿವಾಲ್ ಹೇಳಿದರು.

‘ನಮ್ಮ ಘೋಷವಾಕ್ಯ ‘ಸಂಸದ್ ಮೇ ಭಿ ಕೇಜ್ರಿವಾಲ್, ತೊ ದಿಲ್ಲಿ ಹೋಗಿ ಔರ್ ಖುಷ್ ಹಾಲ್’ (ಸಂಸತ್‌ನಲ್ಲಿ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಹೆಚ್ಚು ಸಮೃದ್ಧವಾಗಲಿದೆ)’ ಎಂದು ಅವರು ಹೇಳಿದರು.

ದೆಹಲಿ -ಪಂಜಾಬ್ ರಾಜ್ಯಗಳು ಎಎಪಿ ಆಡಳಿತದಲ್ಲಿವೆ; ಈ ಎರಡು ರಾಜ್ಯಗಳಲ್ಲಿ ಮಾತ್ರ ಉಚಿತ ವಿದ್ಯುತ್ ಸರಬರಾಜು ಇದೆ ಎಂದು ಅವರು ಹೇಳಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಎಪಿ ಸರ್ಕಾರವು ಪ್ರಾರಂಭಿಸಿದ ಪ್ರತಿಯೊಂದು ಯೋಜನೆಯನ್ನು ಸ್ಥಗಿತಗೊಳಿಸುತ್ತದೆ. ಎಲ್ಲ ಏಳು ವಿರೋಧ ಪಕ್ಷದ ಅಭ್ಯರ್ಥಿಗಳನ್ನು ಸಂಸತ್ತಿಗೆ ಕಳುಹಿಸುವ ಮೂಲಕ ನಮ್ಮನ್ನು ಬಲಪಡಿಸಬೇಕು ಎಂದು ಜನರನ್ನು ಒತ್ತಾಯಿಸಿದರು.

‘ನೀವು ದೆಹಲಿಯಲ್ಲಿ ಸಾಮಾನ್ಯ ವ್ಯಕ್ತಿಯನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದ ಕಾರಣ ಅವರು ನಿಮ್ಮನ್ನು ದ್ವೇಷಿಸುತ್ತಾರೆ. ಅವರು ಬುಲ್ಡೋಜರ್‌ಗಳಿಂದ ಮೊಹಲ್ಲಾ ಕ್ಲಿನಿಕ್‌ಗಳನ್ನು ಕೆಡವಿದರು, ಅವರು ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ, ಆಸ್ಪತ್ರೆಗಳಲ್ಲಿ ಪರೀಕ್ಷೆಗಳು ಮತ್ತು ಔಷಧಿಗಳನ್ನು ನಿಲ್ಲಿಸಿದರು’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಆರೋಪ ಮಾಡಿದರು.

ಎಎಪಿ ಕಾರ್ಯಕರ್ತರು ಚುನಾವಣಾ ಪ್ರಚಾರದ ವೇಳೆ ಪಕ್ಷದ ಸರ್ಕಾರಗಳು ಮಾಡಿದ ಕೆಲಸಗಳನ್ನು ವಿವರಿಸುವ ಕರಪತ್ರಗಳನ್ನು ಹಂಚಲಿದ್ದಾರೆ ಎಂದು ಅವರು ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಮಾನ್ ಮಾತನಾಡಿ, ‘ನಮ್ಮ ರಾಜ್ಯವು ಲೋಕಸಭೆ ಚುನಾವಣೆಯಲ್ಲಿ 13-0 ಫಲಿತಾಂಶವನ್ನು ಎಎಪಿ ಪರವಾಗಿ ಪಡೆಯಲಿದೆ’ ಎಂದು ಹೇಳಿದರು. ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರದ ಕೆಲಸಕ್ಕೆ ಕೇಂದ್ರವು ಅಡ್ಡಿಪಡಿಸುತ್ತಿದೆ ಮತ್ತು ಪಂಜಾಬ್‌ನ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಆಪ್ ಉತ್ತಮ ಸಂಖ್ಯೆಯ ಸಂಸದರನ್ನು ಹೊಂದಿದ್ದರೆ ಪಂಜಾಬ್‌ನ ಹಣವನ್ನು ನಿಲ್ಲಿಸಲು ಮತ್ತು ದೆಹಲಿಯಲ್ಲಿ ಕೆಲಸ ತಡೆಯಲು ಯಾರೂ ಧೈರ್ಯ ಮಾಡುವುದಿಲ್ಲ ಎಂದು ಅವರು ಹೇಳಿದರು.

ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ತನ್ನೊಂದಿಗೆ ಮಾಡಿಕೊಂಡಿರುವ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಇಂಡಿಯಾ ಬ್ಲಾಕ್ ಪಾಲುದಾರ ಕಾಂಗ್ರೆಸ್ ಸಹಯೋಗದೊಂದಿಗೆ ಎಎಪಿ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿದೆ.

ಆದರೆ, ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಎಎಪಿ ಸ್ಪರ್ಧಿಸಲಿದೆ ಮತ್ತು ಉಳಿದ ಮೂರರಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಒಪ್ಪಂದದಡಿಯಲ್ಲಿ ಗುಜರಾತ್‌ನ ಭರೂಚ್, ಜಾಮ್‌ನಗರ ಮತ್ತು ಹರಿಯಾಣದ ಕುರುಕ್ಷೇತ್ರ ಎಂಬ ಎರಡು ಕ್ಷೇತ್ರಗಳನ್ನು ಪಕ್ಷವು ಪಡೆದುಕೊಂಡಿದೆ. ಪ್ರತ್ಯೇಕವಾಗಿ, ಎಎಪಿ ಅಸ್ಸಾಂನ ಗುವಾಹಟಿ, ದಿಬ್ರುಗಢ ಮತ್ತು ಸೋನಿತ್‌ಪುರ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...