Homeಮುಖಪುಟಜಾರಿ ನಿರ್ದೇಶನಾಲಯದ ಕಸ್ಟಡಿ ನಂತರ ಸಿಬಿಐ ವಶಕ್ಕೆ ಅರವಿಂದ್ ಕೇಜ್ರಿವಾಲ್!

ಜಾರಿ ನಿರ್ದೇಶನಾಲಯದ ಕಸ್ಟಡಿ ನಂತರ ಸಿಬಿಐ ವಶಕ್ಕೆ ಅರವಿಂದ್ ಕೇಜ್ರಿವಾಲ್!

- Advertisement -
- Advertisement -

ಜಾರಿ ನಿರ್ದೇಶನಾಲಯದ (ಇಡಿ) ಬಂಧನ ಅವಧಿ ಮುಗಿದ ನಂತರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಕಸ್ಟಡಿಗೆ ಕೋರಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ವಿವಾದದ ನಂತರ ಇದೀಗ ರದ್ದಾಗಿರುವ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಬಂಧಿಸಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

ಈ ನಡುವೆ, ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಗೆ ಉತ್ತರವನ್ನು ಸಲ್ಲಿಸಲು ಸಮಯ ನೀಡುವಂತೆ ಜಾರಿ ನಿರ್ದೇಶನಾಲಯ ಇಂದು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದೆ. ತನಿಖಾ ಸಂಸ್ಥೆಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ‘ಬೃಹತ್’ ಅರ್ಜಿಗೆ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶವನ್ನು ಕೋರಿದರು, ಅದನ್ನು ಮಂಗಳವಾರವಷ್ಟೇ ಅವರಿಗೆ ನೀಡಲಾಗಿದೆ.

ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಶುಕ್ರವಾರ ಕೇಜ್ರಿವಾಲ್ ಅವರನ್ನು “ಅವರ ವಿವರವಾದ ಮತ್ತು ನಿರಂತರ ವಿಚಾರಣೆಗಾಗಿ” ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿತ್ತು. ಬಲವಂತದ ಕ್ರಮದಿಂದ ಅವರಿಗೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಅವರನ್ನು ಬಂಧಿಸಲಾಯಿತು.

ಕೇಜ್ರಿವಾಲ್ ಅವರು “ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಸಂಚುಕೋರ ಮತ್ತು ಕಿಂಗ್‌ಪಿನ್” ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ನೀತಿಯನ್ನು ರೂಪಿಸುವಲ್ಲಿ, ಕಿಕ್‌ಬ್ಯಾಕ್‌ಗೆ ಬೇಡಿಕೆಯಿಡುವಲ್ಲಿ ಮತ್ತು ಅಪರಾಧದ ಆದಾಯವನ್ನು ನಿರ್ವಹಿಸುವಲ್ಲಿ ಅವರು ನೇರವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.

ಆದರೆ, ಕೇಜ್ರಿವಾಲ್ ಮತ್ತು ಎಎಪಿ ಆರೋಪಗಳನ್ನು ನಿರಾಕರಿಸಿವೆ. ಆಪಾದಿತ ಹಗರಣಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

ಇಂದು ಸಾರ್ವಜನಿಕ ಭಾಷಣ ಮಾಡಿದ ದೆಹಲಿ ಮುಖ್ಯಮಂತ್ರಿ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಗುರುವಾರ ನ್ಯಾಯಾಲಯದಲ್ಲಿ ಮದ್ಯ ನೀತಿ ಪ್ರಕರಣದ ಸತ್ಯವನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಮದ್ಯದ ಹಗರಣ ಎಂದು ಕರೆಯಲ್ಪಡುವ ಹಗರಣದ ಆದಾಯ ಎಲ್ಲಿದೆ ಎಂದು ಪ್ರಶ್ನಿಸಿದ ಸುನೀತಾ, ಹಣದ ವಿವರಗಳನ್ನು ನ್ಯಾಯಾಲಯದಲ್ಲಿ ಬಹಿರಂಗಪಡಿಸಲಾಗುವುದು ಎಂದು ಒತ್ತಿ ಹೇಳಿದರು.

ಇದನ್ನೂ ಓದಿ; ‘ಕ್ರಿಮಿನಲ್ ಪಿತೂರಿಯು ನಿರ್ದಿಷ್ಟ ಅಪರಾಧಕ್ಕೆ ಸಂಬಂಧಿಸಿಲ್ಲದಿದ್ದರೆ ಪಿಎಂಎಲ್‌ಎ ಅನ್ವಯಿಸುವುದಿಲ್ಲ..’; ಇಡಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...