Homeಮುಖಪುಟಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

- Advertisement -
- Advertisement -

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರಿಗೆ ಆಮ್ ಆದ್ಮಿ ಪಾರ್ಟಿ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ನೇರ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಾಂಗ್‌ಚುಕ್ ಅವರ ಹೋರಾಟಕ್ಕೆ ಸಾಥ್ ನೀಡಿದ ಕೇಜ್ರಿವಾಲ್, ಸೋನಮ್ ವಾಂಗ್‌ಚುಕ್ ದೇಶದ ದೊಡ್ಡ ಶಿಕ್ಷಣ ತಜ್ಞ. ಅವರು ಹಿಂದೆ ಲಡಾಖ್ ಹಕ್ಕುಗಳಿಗಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಇಂದು ಈ ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡಲು ಸಿದ್ಧರಾಗಿದ್ದಾರೆ ಎಂದು ಪ್ರಶಂಸಿಸಿದರು.

ವಾಂಗ್‌ಚುಕ್ ಅವರಿಗೆ ಸಲಾಂ ಹೊಡೆದ ಕೇಜ್ರಿವಾಲ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಸೋನಮ್ ವಾಂಗ್‌ಚುಕ್ ಅವರನ್ನು ದೇಶದ ಮುಂದಿನ ಶಿಕ್ಷಣ ಸಚಿವನ್ನಾಗಿ ಮಾಡಬೇಕು,” ಎಂದು ಪ್ರಧಾನಿ ಮೋದಿಯವರನ್ನು ಆಗ್ರಹಿಸಿದರು.

2011 ರಲ್ಲಿ ಅಣ್ಣಾ ಹಜಾರೆ ಜೊತೆ ನಡೆಸಿದ್ದ ಭ್ರಷ್ಟಾಚಾರ ವಿರೋಧಿ ಸುದೀರ್ಘ ಹೋರಾಟವನ್ನು ನೆನಪಿಸಿಕೊಂಡ ಮಾಜಿ ದೆಹಲಿ ಸಿಎಂ, ವಾಂಗ್‌ಚುಕ್ ಅವರು ಎಲ್ಲಿ ಮತ್ತೆ ಕ್ರಾಂತಿಕಾರಿ ಹೋರಾಟಕ್ಕೆ ನಾಂದಿ ಹಾಡುತ್ತಾರೋ ಎಂಬ ಭಯ ಪ್ರಧಾನಿಯವರನ್ನು ಕಾಡುತ್ತಿದೆ ಎಂದರು.

ಜಂತರ್ ಮಂತರ್‌ನಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು ದೇಶದ ಯುವಜನತೆಯ ಆತ್ಮವಿಶ್ವಾಸವನ್ನೇ ಕುಗ್ಗಿಸಿವೆ. ನಾನು ಕೂಡ ಐಐಟಿ (IIT) ಪರೀಕ್ಷೆ ಬರೆದು ಉತ್ತೀರ್ಣನಾಗಿದ್ದೆ, ನನ್ನ ಇಬ್ಬರು ಮಕ್ಕಳೂ ಅದೇ ಸಂಸ್ಥೆಯಲ್ಲಿ ಓದಿದ್ದಾರೆ. ಪ್ರವೇಶ ಪರೀಕ್ಷೆಗಳು ವಿದ್ಯಾರ್ಥಿಗಳ ಪಾಲಿಗೆ ಕಟ್ಟಕಡೆಯ ಕನಸಾಗಿರುತ್ತವೆ. ತಮ್ಮ ಕಠಿಣ ಪರಿಶ್ರಮದಿಂದ ಭವಿಷ್ಯ ರೂಪಿಸಿಕೊಳ್ಳಬಹುದು ಎಂಬ ಭರವಸೆಯಿಂದ ಅವರು ಪರೀಕ್ಷಾ ಹಾಲ್‌ಗೆ ಹೋಗುತ್ತಾರೆ. ಆದರೆ ಇಂತಹ ಅಕ್ರಮಗಳು ದೇಶದ ಭವಿಷ್ಯಕ್ಕೇ ಅತ್ಯಂತ ಅಪಾಯಕಾರಿ,” ಎಂದು ಕಳವಳ ವ್ಯಕ್ತಪಡಿಸಿದರು.

ಅಲ್ಲದೆ, 2024ರ ಪೇಪರ್ ಲೀಕ್ ಪ್ರಕರಣದ ಮುಖ್ಯ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುತ್ತಿರುವುದನ್ನು ಅವರು ತೀವ್ರವಾಗಿ ಟೀಕಿಸಿದರು. ವಿದ್ಯಾರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳನ್ನು ತಡೆಯಲು ಹಾಲಿ ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಬೇಕಿದೆ ಎಂದ ಕೇಜ್ರಿವಾಲ್ಸ ರ್ಕಾರ ಯುವಜನರ ಧ್ವನಿಗೆ ಮತ್ತು ಈ ‘ಕಾಕ್ರೋಚ್’ಗಳ ಪ್ರತಿಭಟನೆಗೆ ತಕ್ಷಣವೇ ಕಿವಿಗೊಡಬೇಕು, ಎಂದು ಆಗ್ರಹಿಸಿದರು. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿರುವ ಜುಲೈ 20 ರ ಬೃಹತ್ ‘ಸಂಸತ್ ಚಲೋ’ ಪಾದಯಾತ್ರೆಯಲ್ಲಿ ದೇಶದ ಮೂಲೆ ಮೂಲೆಗಳಿಂದ ಜನರು ಭಾಗವಹಿಸಬೇಕೆಂದು ಅವರು ಕರೆ ನೀಡಿದರು.

ಕೇಜ್ರಿವಾಲ್ ಅವರೊಂದಿಗೆ ಆಗಮಿಸಿದ್ದ ಆಪ್ ನಾಯಕ ಹಾಗೂ ದೆಹಲಿ ಮಾಜಿ ಸಚಿವ ಸೌರಭ್ ಭಾರದ್ವಾಜ್ ಕೂಡ ಜುಲೈ 20 ರ ಸಂಸತ್ ಮುತ್ತಿಗೆಗೆ ಬೆಂಬಲ ನೀಡಿದರು. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಾ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಿದ ಅವರು, ಒಂದು ವೇಳೆ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವಸ್ಥಾನದಿಂದ ತೆಗೆದುಹಾಕಿದರೆ, ದಯವಿಟ್ಟು ಅವರ ಜಾಗಕ್ಕೆ ಮತ್ತೆ ಸ್ಮೃತಿ ಇರಾನಿ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಬೇಡಿ ಎಂದು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...