ಭಾನುವಾರ ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಮತ್ತೆ ಆಯ್ಕೆಯಾದರು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಅವರು ಪಕ್ಷದ ಕಾರ್ಯದರ್ಶಿಯಾಗಿ ಆಯ್ಕೆಯಾದರೆ, ಎನ್ ಡಿ ಗುಪ್ತಾ ಅವರು ಪಕ್ಷದ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿಯ ಹೊಸ 34 ಸದಸ್ಯರ ಕಾರ್ಯಕಾರಿ ಸದಸ್ಯರನ್ನು ಶನಿವಾರ ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಅರವಿಂದ ಕೇಜ್ರಿವಾಲ್ ಅವರು ಕೂಡಾ ಇದ್ದರು.
“ಭಗತ್ ಸಿಂಗ್ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ಮುಖ್ಯ ವಿಚಾರವಾದಿಗಳಾಗಿದ್ದಾರೆ. ಅವರು ತೋರಿಸಿದ ಮಾರ್ಗದಲ್ಲಿ ನಾವು ನಡೆಯುತ್ತೇವೆ. ಭಗತ್ ಸಿಂಗ್, ಚಿಕ್ಕ ವಯಸ್ಸಿನಲ್ಲಿಯೇ ದೇಶಕ್ಕಾಗಿ ಸರ್ವೋಚ್ಚ ತ್ಯಾಗ ಮಾಡಿದರು…ಭಗತ್ ಸಿಂಗ್ ಅವರಂತೆ ನಮ್ಮ ಪ್ರತಿಯೊಬ್ಬ ಸ್ವಯಂಸೇವಕರು ಸರ್ವೋಚ್ಚ ತ್ಯಾಗ ಮಾಡಲು ಸಿದ್ಧರಾಗಿರಬೇಕು” ಎಂದು ಕೇಜ್ರಿವಾಲ್ ಶನಿವಾರ ವಿಡಿಯೋ ಭಾಷಣದಲ್ಲಿ ಹೇಳಿದ್ದರು.
“ರಾಷ್ಟ್ರೀಯ ಮಂಡಳಿಯ ಎಲ್ಲಾ ಹೊಸ ಸದಸ್ಯರಿಗೆ, ನಿಮ್ಮ ಮನಸ್ಸಿನಲ್ಲಿ ಒಂದು ಆಲೋಚನೆ ಇರಬೇಕು ಎಂದು ನಾನು ಹೇಳಲು ಬಯಸುತ್ತೇನೆ. ಎಎಪಿಯಲ್ಲಿ ಯಾವುದೇ ಹುದ್ದೆಯನ್ನು ಬಯಸಬೇಡಿ” ಎಂದು ಶನಿವಾರ ಅರವಿಂದ ಕೇಜ್ರಿವಾಲ್ ಅವರು ತಿಳಿಸಿದ್ದರು.
ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ


