Homeಮುಖಪುಟಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ನಾನು ಅನುಮತಿ ನೀಡಲಿಲ್ಲ’- ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಕೇಜ್ರಿವಾಲ್ ಬೆಳಿಗ್ಗೆ 10 ಗಂಟೆಗೆ  ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿದ್ದರು.

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮೊದಲ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್. ಕೇಂದ್ರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ನಾಳೆ ಕರೆ ನೀಡಲಾಗಿರುವ, “ಭಾರತ್ ಬಂದ್” ಗೆ ಬೆಂಬಲ ನೀಡಿದ ಹಲವಾರು ವಿರೋಧ ಪಕ್ಷದ ನಾಯಕರಲ್ಲಿ ಕೇಜ್ರಿವಾಲ್ ಕೂಡ ಇದ್ದಾರೆ.

“ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ನಿನ್ನೆ ಟ್ವೀಟ್‌ನಲ್ಲಿ ತಿಳಿಸಿದ್ದರು.

ಸಿಂಗು ಮತ್ತು ಟಿಕ್ರಿ ಗಡಿಗಳಲ್ಲಿ ಸುಮಾರು 10 ದಿನಗಳಿಂದ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ, ಅಲ್ಲಿ ಪಂಜಾಬ್ ಮತ್ತು ಹರಿಯಾಣದಿಂದ ಬಂದಿರುವ ಸಾವಿರಾರು ರೈತರು ಜಮಾಯಿಸಿದ್ದಾರೆ. ಇತ್ತ ಗಾಜಿಪುರ ಗಡಿಯಲ್ಲಿ ರೈತರ ಸಂಖ್ಯೆ ಹೆಚ್ಚಾಗಿದ್ದು, ಉತ್ತರಪ್ರದೇಶದಿಂದ ಬಂದಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ.

ಇದನ್ನು ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

’ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಆಪ್ ಸರ್ಕಾರ, ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ನೇತೃತ್ವದಲ್ಲಿ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಿತ್ತು. ಇದನ್ನು ರಾಜಕಾರಣ ಎಂದು ಬಿಜೆಪಿ ಟೀಕಿಸಿತ್ತು.

“ಇದು ಕೇವಲ ರೈತರ ಹೋರಾಟವಲ್ಲ, ಎಲ್ಲಾ ದೇಶವಾಸಿಗಳ ಹೋರಾಟ. ಭಾರತವು ಕೃಷಿ ದೇಶವಾಗಿದ್ದು, ರೈತರು ಅತೃಪ್ತರಾಗಿದ್ದರೆ, ಅದು ದೇಶದ ಮೇಲೆ ಪರಿಣಾಮ ಬೀರುತ್ತದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ”ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.


ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...