Homeಮುಖಪುಟಕೇಜ್ರಿವಾಲ್‌ರನ್ನು ಬಂಧಿಸಿದರೆ ಜೈಲಿನಿಂದಲೇ ಸರ್ಕಾರ ನಡೆಸುತ್ತಾರೆ: ಆಪ್

ಕೇಜ್ರಿವಾಲ್‌ರನ್ನು ಬಂಧಿಸಿದರೆ ಜೈಲಿನಿಂದಲೇ ಸರ್ಕಾರ ನಡೆಸುತ್ತಾರೆ: ಆಪ್

- Advertisement -
- Advertisement -

”ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದಿನ ದಿನಗಳಲ್ಲಿ ಬಂಧಿಸಿದರೆ ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ” ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ಮಂಗಳವಾರ ನಡೆದ ಆಮ್ ಆದ್ಮಿ ಪಕ್ಷದ ಶಾಸಕರ ಸಭೆಯಲ್ಲಿ ಬಿಜೆಪಿ ಯಾವುದಾದರೂ ಪಿತೂರಿ ಮೂಲಕ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದರೂ ಅವರು ರಾಜೀನಾಮೆ ನೀಡಬಾರದು ಎಂದು ಪಕ್ಷದ ಎಲ್ಲಾ ನಾಯಕರು ಒಮ್ಮತದಿಂದ ಹೇಳಿದ್ದಾರೆ” ಎಂದು ದೆಹಲಿ ಸಚಿವ ಅತಿಶಿ ಹೇಳಿದ್ದಾರೆ.

”ಸರ್ಕಾರವನ್ನು ನಡೆಸಲು ದೆಹಲಿಯ ಜನರು ಅವರಿಗೆ ಜನಾದೇಶ ನೀಡಿದ್ದಾರೆ. ಅಗತ್ಯವಿದ್ದರೆ ನಾವು ಪ್ರಮುಖ ಕಡತಗಳನ್ನು ತಿಹಾರ್ ಜೈಲಿಗೆ ಕಳುಹಿಸಲು ನ್ಯಾಯಾಲಯದಿಂದ ಅನುಮತಿ ಪಡೆಯುತ್ತೇವೆ. ಅಗತ್ಯವಿದ್ದರೆ ನಾವು ಅಲ್ಲಿ ಕ್ಯಾಬಿನೆಟ್ ಸಭೆ ನಡೆಸಿ ಅಧಿಕಾರಿಗಳನ್ನು ಕರೆಸುತ್ತೇವೆ” ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಪಿಟಿಐಗೆ ತಿಳಿಸಿದರು.

ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ನಾಲ್ಕು ದಿನಗಳ ನಂತರ ಅತಿಶಿ ಈ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಅವರು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಪ್ರಯಾಣಿಸಿರುವ ಕಾರಣ ಸಮನ್ಸ್‌ನ್ನು ಹಿಂಪಡೆಯುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.

ಈ ಪ್ರಕರಣವು ಆಮ್ ಆದ್ಮಿ ಪಕ್ಷದ ಸರ್ಕಾರವು ಈಗ ರದ್ದುಗೊಳಿಸಿರುವ ಅಬಕಾರಿ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎನ್ನುವ ಆರೋಪದ ಮೇಲೆ ಏಪ್ರಿಲ್ 16 ರಂದು ಕೇಂದ್ರ ತನಿಖಾ ದಳವು ಕೇಜ್ರಿವಾಲ್ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತು.

ಇದನ್ನೂ ಓದಿ: “ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ”: ಭೂಪೇಶ್ ಬಾಘೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...