Homeಮುಖಪುಟ60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರಿದ್ದಾರೆ.

- Advertisement -
- Advertisement -

ಭಾನುವಾರ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ’ದೆಹಲಿಯ ನಿರ್ಮಾತೃಗಳು’ ಎಂದು ಕರೆಯಲ್ಪಡುವ 60 ಜನರ ಗುಂಪಿನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಮೂಲಕ ಆಮ್‌ ಆದ್ಮಿ ಪಾರ್ಟಿ ಹುಟ್ಟಿದ ರಾಮ್‌ಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯವಾಗಿ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಪಕ್ಷಗಳ ಮುಖಂಡರನ್ನು ಆಹ್ವಾನಿಸದಿರುವುದು ಗಮನಾರ್ಹವಾಗಿದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಗರದ ಏಳು ಬಿಜೆಪಿ ಸಂಸದರಿಗೆ ಆಹ್ವಾನವನ್ನು ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಮುಖಂಡ ಗೋಪಾಲ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಪಿಎಂಒಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಪಕ್ಷದ ಇತರ ಹಿರಿಯ ಸದಸ್ಯರು ಪ್ರಧಾನಮಂತ್ರಿಯ ಆಹ್ವಾನ ಕೇವಲ “ಪ್ರೋಟೋಕಾಲ್” ಎಂದು ಹೇಳಿದ್ದಾರೆ. ಆದಾಗ್ಯೂ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಧಾನಿ ಕಚೇರಿಯ ವೇಳಾಪಟ್ಟಿಯ ಪ್ರಕಾರ, 30 ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಗೆ ಭಾನುವಾರ ಪ್ರಯಾಣಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಸಾಮಾನ್ಯರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವ ವಿಚಾರದ ಕುರಿತು ತ್ವರಿತ ಕರಡನ್ನು – ‘ದೆಹಲಿ ಕೆ ನಿರ್ಮಾತಾ’ ಬ್ಯಾನರ್ ಅಡಿಯಲ್ಲಿ – ಕೇಜ್ರಿವಾಲ್ ಅವರ ಕಚೇರಿಗೆ ಶುಕ್ರವಾರ ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಮಹಿಳಾ ಭದ್ರತೆಗಾಗಿ ನಿಯೋಜಿಸಲಾದ ಮಾರ್ಷಲ್‌ಗಳು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ಐಐಟಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಪಿಡಬ್ಲ್ಯೂಡಿ ಎಂಜಿನಿಯರ್‌ಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ವಿತರಣಾ ಏಜಂಟು ಸೇರಿದ್ದಾರೆ ಎನ್ನಲಾಗುತ್ತಿದೆ.

“ಅತಿಥಿಗಳನ್ನು ತಮ್ಮ ಉದ್ಯೋಗಗಳಲ್ಲಿನ ಸಾಧನೆಯ ಆಧಾರದ ಮೇಲೆ ಸರ್ಕಾರಗಳು, ನಾಗರಿಕ ಸಂಸ್ಥೆಗಳು ಅಥವಾ ಮಾಧ್ಯಮಗಳು ಅಥವಾ ಕೆಲವು ಸಂದರ್ಭಗಳಲ್ಲಿ ವಿಭಾಗದ ಮುಖ್ಯಸ್ಥರಿಂದ ಉಲ್ಲೇಖದ ಆಧಾರದ ಮೇಲೆ ಆಯ್ಕೆಯಾಗಿದ್ದಾರೆ” ಎಂದು ಹಿರಿಯ ಎಎಪಿ ಮುಖಂಡರು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯೇತರ ಆಡಳಿತದ ರಾಜ್ಯಗಳಿಂದ ಬೇರೆ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕೀಯ ಮುಖಂಡರನ್ನು ಆಹ್ವಾನಿಸದಿರುವುದು, ಈ ಸಮಯದಲ್ಲಿ ಪಕ್ಷವು ಯಾವುದೇ ಸೈದ್ಧಾಂತಿಕ ವಯಲದೊಂದಿಗೆ ಗುರುತಿಸಿಕೊಳ್ಳದಿರಲು ಬಯಸುವುದಿಲ್ಲ ಎಂಬುದರ ಸ್ಪಷ್ಟ ಸಂಕೇತವಾಗಿದೆ ಎಂದು ಅಭಿವೃದ್ಧಿಶೀಲ ಸಂಘಗಳ ಅಧ್ಯಯನ ಕೇಂದ್ರದ ರಾಜಕೀಯ ವಿಶ್ಲೇಷಕ ಪ್ರವೀಣ್ ರೈ ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ತನ್ನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಸಾಮಾನ್ಯ ಜನರನ್ನು ಆಹ್ವಾನಿಸುವ ಮಟ್ಟಿಗೆ, ಇದು ದೆಹಲಿಯ ನಾಗರಿಕರ ಮೇಲಿನ ನಂಬಿಕೆಯ ಪುನರ್ ದೃಢೀಕರಣ ಮತ್ತು ಒಳಗೊಳ್ಳುವ ಆಡಳಿತದ ಎಎಪಿ ಕಲ್ಪನೆಯ ಪ್ರತಿಬಿಂಬವಾಗಿದೆ. ವಿಎಪಿ ಸಂಸ್ಕೃತಿ ಮತ್ತು ಸೆಲೆಬ್ರಿಟಿಗಳ ಅನುಮೋದನೆಯನ್ನು ಎಎಪಿ ನಂಬುವುದಿಲ್ಲ ಎಂಬ ದೊಡ್ಡ ರಾಜಕೀಯ ಸಂದೇಶವನ್ನೂ ಇದು ಕಳುಹಿಸುತ್ತದೆ. ಇದಕ್ಕೆ ತದ್ವಿರುದ್ಧವಾಗಿ ಅದೇ ಜಾಗವನ್ನು ಸಾಮಾನ್ಯರೊಂದಿಗೆ ಹಂಚಿಕೊಳ್ಳಲು ಮತ್ತು ಹೊಸ ರಾಜಕೀಯ ಇನ್ನಿಂಗ್ಸ್‌ಗಾಗಿ ಅವರ ಆಶೀರ್ವಾದ ಪಡೆಯಲು ಎಎಪಿ ಬಯಸಿದೆ ಎಂದು ಅವರು ಹೇಳಿದ್ದಾರೆ.

ಎಎಪಿಯ ಈ ವಿನೂತನ ಯೋಜನೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿಯ ಮಾಧ್ಯಮ ವಕ್ತಾರ ನೀಲಕಂತ್ ಬಕ್ಷಿ, “ಇದು ಅವರ ಪ್ರದರ್ಶನ. ಅವರು ಬಯಸಿದ್ದನ್ನು ಅವರು ಮಾಡಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...