Homeಮುಖಪುಟವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

ವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

- Advertisement -
- Advertisement -

ದೆಹಲಿ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಹುಮತ ಸಾಬೀತುಪಡಿಸಿದ್ದಾರೆ.

ಒಟ್ಟು 62 ಎಎಪಿ ಶಾಸಕರ ಪೈಕಿ 54 ಮಂದಿ ವಿಶ್ವಾಸ ಮತಯಾಚನೆ ವೇಳೆ ಹಾಜರಿದ್ದರು. ಎಲ್ಲರೂ ಮುಖ್ಯಮಂತ್ರಿ ಪರ ಮತ ಚಲಾಯಿಸಿದ್ದಾರೆ. “ನಮ್ಮ ಯಾವುದೇ ಶಾಸಕ ಪಕ್ಷಾಂತರ ಮಾಡಿಲ್ಲ. ಇಬ್ಬರು ಶಾಸಕರು ಜೈಲಿನಲ್ಲಿದ್ದಾರೆ, ಕೆಲವರಿಗೆ ಅನಾರೋಗ್ಯವಿದೆ, ಇನ್ನೂ ಕೆಲವರು ಹೊರಗಿದ್ದಾರೆ” ಎಂದು ವಿಶ್ವಾಸಮತ ಗೆದ್ದ ಬಳಿಕ ಕೇಜ್ರಿವಾಲ್ ಹೇಳಿದ್ದಾರೆ.

“ನಮ್ಮ ಸರ್ಕಾರಕ್ಕೆ ಬಹುಮತವಿತ್ತು. ಆದರೆ, ಬಿಜೆಪಿ ಕೆಲ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದೆ. ಈ ಕಾರಣಕ್ಕೆ ವಿಶ್ವಾಸಮತ ಯಾಚನೆಯ ಅಗತ್ಯ ಬಂತು” ಎಂದಿದ್ದಾರೆ.

“ನಮ್ಮ ಕೆಲ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಕ್ಷಾಂತರ ಮಾಡಲು ಹಣದ ಆಮಿಷವೊಡ್ಡಿದ್ದಾರೆ. ಸುಮಾರು ಏಳು ಮಂದಿ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಆಫರ್ ನೀಡಲಾಗಿದೆ. ನನ್ನನ್ನು ಬಂಧಿಸುವ ಮೂಲಕ ಸರ್ಕಾರವನ್ನು ಉರುಳಿಸಬಹುದು ಎಂದು ಬಿಜೆಪಿ ತಂತ್ರ ಹೂಡುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ನೀವು ನನ್ನನ್ನು ಬಂಧಿಸಬಹುದು. ಆದರೆ, ನನ್ನ ಆಲೋಚನೆಗಳನ್ನು ಹೇಗೆ ಬಂಧಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಎಎಪಿ ಬಿಜೆಪಿಗೆ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಅದು ಎಲ್ಲಾ ಕಡೆಯಿಂದ ದಾಳಿಗೆ ಒಳಗಾಗುತ್ತಿದೆ. ನಮ್ಮ ಮಂತ್ರಿಗಳನ್ನು ಬಂಧಿಸಿದ್ದಾರೆ. ದೇಶದಾದ್ಯಂತ ಜನರಿಗೆ ಇದರ ಅರಿವಿದೆ. ಜನರು ಮೂರ್ಖರು ಎಂದು ಅವರು ಭಾವಿಸಿದ್ದಾರೆ. ಆದರೆ, ಅದು ಅವರ ತಪ್ಪು ಕಲ್ಪನೆ. ಮೋದಿ ಅವರು ಅರವಿಂದ್ ಕೇಜ್ರಿವಾಲ್‌ ಅನ್ನು ಹತ್ತಿಕಲು ಯತ್ನಿಸುತ್ತಿದ್ದಾರೆ ಎಂದು ಇತ್ತೀಚೆಗೆ ಪಾರ್ಕ್‌, ಗ್ರೌಂಡ್‌ಗಳಲ್ಲಿಯೂ ಚರ್ಚೆ ನಡೆಯುತ್ತಿದೆ. ಮಕ್ಕಳು ಕೂಡ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಗರು ತಮ್ಮನ್ನು ತಾವು ರಾಮಭಕ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ, ನಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಔಷಧಿ ಸರಬರಾಜು ನಿಲ್ಲಿಸಿದ್ದಾರೆ. ಬಡವರಿಗಾಗಿ ಇರುವ ಔಷಧಿಗಳನ್ನು ತಡೆಯುವಂತೆ ಭಗವಾನ್ ರಾಮ ನಿಮ್ಮತ್ರ ಹೇಳಿದ್ದಾನಾ? ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ. 2029ರ ಒಳಗೆ ದೇಶವನ್ನು ಬಿಜೆಪಿ ಮುಕ್ತ ಮಾಡುವುದಾಗಿ ಶಪಥ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಇಂದು (ಫೆ.17) ಬೆಳಿಗ್ಗೆ ರೂಸ್ ಅವೆನ್ಯೂ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಳಿಕ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ನಮ್ಮ ಸರ್ಕಾರ ಸುಭದ್ರವಾಗಿದೆ. ಎಲ್ಲಾ ಶಾಸಕರು ಜೊತೆಗಿದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...