Homeಮುಖಪುಟ"ಕೇಜ್ರಿವಾಲ್ ಕಿ ಗ್ಯಾರಂಟಿ" ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

“ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

- Advertisement -
- Advertisement -

ಲೋಕಸಭೆ ಚುನಾವಣೆಯ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೇಶದ ಜನರಿಗೆ ಭರಪೂರ ಭರವಸೆಯನ್ನು ನೀಡುವ “ಕೇಜ್ರಿವಾಲ್ ಕಿ ಗ್ಯಾರಂಟಿ” ಯೋಜನೆಯನ್ನು ಘೋಷಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ತಮ್ಮ ’10 ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ. ದೇಶಾದ್ಯಂತ 24 ಗಂಟೆಗಳ ಕಾಲ ಉಚಿತ ವಿದ್ಯುತ್, ಉಚಿತ ಶಿಕ್ಷಣ ಮತ್ತು ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಮತ್ತು ಭಾರತದ ಗಡಿಯಲ್ಲಿ ಚೀನಾ ವಶಪಡಿಸಿಕೊಂಡಿದೆ ಎನ್ನಲಾದ ಭೂಮಿಯನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ.

ಈ ಖಾತರಿಗಳ ಬಗ್ಗೆ ಇತರ ಇಂಡಿಯಾ ಬ್ಲಾಕ್ ಪಾಲುದಾರರೊಂದಿಗೆ ಚರ್ಚಿಸಿಲ್ಲ, ಆದರೆ ಯಾರಿಗೂ ಯಾವುದೇ ತಕರಾರು ಇಲ್ಲ ಎಂದು ಭಾವಿಸಿರುವುದಾಗಿ ಕೇಜ್ರಿವಾಲ್‌ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ ನಂತರ, ಈ ಭರವಸೆಗಳನ್ನು ಕಾರ್ಯಗತಗೊಳಿಸುವುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ ಕೇಜ್ರಿವಾಲ್‌ ಹೇಳಿದ್ದಾರೆ.

“ಕೇಜ್ರಿವಾಲ್ ಕಿ ಗ್ಯಾರಂಟಿ”ಯಡಿಯಲ್ಲಿನ 10 ಗ್ಯಾರೆಂಟಿಗಳು

ವಿದ್ಯುಚ್ಛಕ್ತಿ ಖಾತ್ರಿ: ದೇಶದಾದ್ಯಂತ ಮೊದಲ 200 ಯೂನಿಟ್ ವಿದ್ಯುತ್ ಉಚಿತದೊಂದಿಗೆ 24-ಗಂಟೆಗಳ ಕಾಲ ವಿದ್ಯುತ್ ಸರಬರಾಜು.

ಶಿಕ್ಷಣ ಖಾತ್ರಿ: ಎಲ್ಲರಿಗೂ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುವ ಮತ್ತು ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಭರವಸೆ.

ಆರೋಗ್ಯ ಖಾತ್ರಿ: ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಭರವಸೆ.

ಚೀನಾ ಆಕ್ರಮಿಸಿಕೊಂಡಿರುವ ಭಾರತದ ಭೂಮಿಯನ್ನು ಮುಕ್ತಗೊಳಿಸುವ  ಗ್ಯಾರಂಟಿ: ಭಾರತದ ಭೂಮಿಯನ್ನು ಚೀನಾದಿಂದ ಮುಕ್ತಗೊಳಿಸಲಾಗುವುದು, ಸೇನೆಗೆ ಮುಕ್ತ ಕಾರ್ಯ ನಿರ್ವಹಣೆಗೆ ಅವಕಾಶ ನೀಡುವ ಭರವಸೆ.

ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರಂಟಿ: ನರೇಂದ್ರ ಮೋದಿ ಸರ್ಕಾರ ಆರಂಭಿಸಿದ ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರೆಂಟಿ.

MSPಯ ಖಾತರಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರೆಂಟಿ.

ರಾಜ್ಯದ ಸ್ಥಾನಮಾನದ ಭರವಸೆ: ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನದ ಭರವಸೆ.

ಉದ್ಯೋಗ ಖಾತ್ರಿ: ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಯೋಜನೆ.

ಭ್ರಷ್ಟಾಚಾರದ ವಿರುದ್ಧ ಕ್ರಮ: ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಭರವಸೆ.

GST ಮೇಲೆ ಗ್ಯಾರಂಟಿ: ಸರಕು ಮತ್ತು ಸೇವಾ ತೆರಿಗೆಯನ್ನು (GST) ಸರಳಗೊಳಿಸುವ ಯೋಜನೆಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಉಪಸ್ಥಿತರಿದ್ದರು. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಬಿಡಗಡೆಯಾಗಿದ್ದರು. ನಿನ್ನೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...