Homeಮುಖಪುಟಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಬಂಧನ ಬಿಜೆಪಿಯ ಶವಪಟ್ಟಿಗೆಗಿರುವ ಕೊನೆಯ ಮೊಳೆ, ಎಎಪಿಯ ಉಪವಾಸ ಸತ್ಯಾಗ್ರಹ ಬಿಜೆಪಿಗರ ನಿದ್ದೆಗೆಡಿಸಿದೆ ಎಂದು ಎಎಪಿ ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ಎಎಪಿಯ ಹಿರಿಯ ನಾಯಕರು, ದೆಹಲಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ಶಾಸಕರು ಭಾನುವಾರ ಜಂತರ್ ಮಂತರ್‌ನಲ್ಲಿ ಸಾಮೂಹಿಕವಾಗಿ ಉಪಾಸ ಕೈಗೊಂಡಿದ್ದರು. ಈ ವೇಳೆ ಬಿಜೆಪಿ ಸರ್ವಾಧಿಕಾರ ಧೋರಣೆಯನ್ನು ತೋರುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ “ಜನರು ತಮ್ಮ ಮತಗಳ ಮೂಲಕ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ. .

ಬೆಳಿಗ್ಗೆ 11 ಗಂಟೆಗೆ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಪ್ರತಿಭಟನೆಯಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಉಪ ಸ್ಪೀಕರ್ ರಾಖಿ ಬಿರ್ಲಾ, ಕ್ಯಾಬಿನೆಟ್ ಸಚಿವರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಅತಿಶಿ, ಕೈಲಾಶ್ ಗಹ್ಲೋಟ್, ಇಮ್ರಾನ್ ಹುಸೇನ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ದೆಹಲಿಯ ಸಚಿವೆ ಪ್ರತಿಭಟನೆಯ ವೇಳೆ ಮಾತನಾಡಿದ್ದು, ಬಿಜೆಪಿ ಸರ್ವಾಧಿಕಾರವನ್ನು ಆಶ್ರಯಿಸುತ್ತಿದೆ. ಎಎಪಿಯ ಉಪವಾಸವು ಬಿಜೆಪಿಗೆ “ನಿದ್ರೆಯಿಲ್ಲದ ರಾತ್ರಿಗಳನ್ನು” ನೀಡುತ್ತಿದೆ. ಕೇಜ್ರಿವಾಲ್ ಬಂಧನವು ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಸ್ವಾತಂತ್ರ್ಯದ ಮೊದಲು, ಮಹಾತ್ಮರ ಉಪವಾಸವು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಅಡಿಪಾಯವನ್ನು ಅಲ್ಲಾಡಿಸಿತು. ಇಂದು ಎಎಪಿಯ ಈ ಉಪವಾಸ ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಕಸಿದುಕೊಳ್ಳಲಿದೆ. ಈ ದೇಶ ಈಗ ಎಚ್ಚೆತ್ತುಕೊಂಡಿದೆ, ಸರ್ವಾಧಿಕಾರಿಯ ಅಂತ್ಯ ಹತ್ತಿರವಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಸಂಜಯ್‌ ಸಿಂಗ್ ಮಾತನಾಡಿ, ಸುಳ್ಳು ಸಾಕ್ಷಿಗಳ ಸಹಾಯದಿಂದ ಅಮಾಯಕನನ್ನು ನಕಲಿ ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ ಎಂದು ಹೇಳಿದರು. ಕೇಜ್ರಿವಾಲ್ ಅವರನ್ನು ಬೆಂಬಲಿಸಿ ದೇಶದಲ್ಲಿ ಮಾತ್ರವಲ್ಲದೆ ವಿಶ್ವದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದು ನಮ್ಮ ದೊಡ್ಡ ಸಾಧನೆ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ನಮ್ಮ ಸಂದೇಶ ಜನರಿಗೆ ತಲುಪುತ್ತಿದೆ. ನಿಜವಾದ ಮದ್ಯದ ಹಗರಣವನ್ನು ಬಿಜೆಪಿ ಮಾಡಿದ್ದು, ಅದರ ಹಣದ ಜಾಡು ಕೂಡ ಪತ್ತೆಯಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆ ಬಿಜೆಪಿ ನಾಯಕರ ವಿರುದ್ಧ ತನಿಖೆ ನಡೆಸಬೇಕು ಎಂದು ಸಿಂಗ್ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಈಗ ಎಎಪಿಯ ಸಂದೇಶವನ್ನು ತಲುಪಿಸಲು ಮನೆ- ಮನೆಗೆ ತೆರಳುತ್ತಾರೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ‘ಸಿಬಿಐ’ ಮತ್ತು ‘ಇಡಿ’ಯ 456 ಸಾಕ್ಷಿಗಳಲ್ಲಿ ಕೇವಲ ನಾಲ್ವರು ಎಎಪಿ ರಾಷ್ಟ್ರೀಯ ಸಂಚಾಲಕರ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಸಾಕ್ಷಿಗಳು ಯಾವ ಸಂದರ್ಭದಲ್ಲಿ ಕೇಜ್ರಿವಾಲ್ ಹೆಸರನ್ನು ಹೇಳಿದ್ದಾರೆ ಎಂಬುವುದು ಜನರಿಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆಯ ವೇಳೆ ಭಗತ್ ಸಿಂಗ್, ಡಾ ಬಿಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ಫೋಟೋಗಳನ್ನು ಹಾಕಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಎಎಪಿ ಕಾರ್ಯಕರ್ತರು ದೇಶಭಕ್ತಿ ಗೀತೆಗಳನ್ನು ಹಾಡುತ್ತಾ, ಕವಿತೆಗಳನ್ನು ಓದುತ್ತಾ, ಕೇಜ್ರಿವಾಲ್ ಅವರ ಪೋಟೋಗಳನ್ನು ಪ್ರದರ್ಶಿಸಿದ್ದಾರೆ. ಎಎಪಿ ರಾಜ್ಯ ಘಟಕಗಳಿಂದ ಇತರ ರಾಜ್ಯಗಳಲ್ಲಿ ಕೂಡ ಇದೇ ರೀತಿಯ ಪ್ರತಿಭಟನೆಗಳು ನಡೆದಿದೆ.

ಇದನ್ನು ಓದಿ: ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...