HomeUncategorizedಪ್ರತಿದಿನ ಕ್ಷೇತ್ರದ ಜನರನ್ನು ಭೇಟಿಯಾಗಿ: ಎಎಪಿ ಶಾಸಕರಿಗೆ ಜೈಲಿನಿಂದ ಕೇಜ್ರಿವಾಲ್‌ ಸಂದೇಶ

ಪ್ರತಿದಿನ ಕ್ಷೇತ್ರದ ಜನರನ್ನು ಭೇಟಿಯಾಗಿ: ಎಎಪಿ ಶಾಸಕರಿಗೆ ಜೈಲಿನಿಂದ ಕೇಜ್ರಿವಾಲ್‌ ಸಂದೇಶ

- Advertisement -
- Advertisement -

ತಮ್ಮ ಕ್ಷೇತ್ರದ ಜನರನ್ನು ಭೇಟಿಯಾಗುವಂತೆ ಮತ್ತು ಜನರು ಯಾವುದೇ ಸಮಸ್ಯೆಗಳನ್ನು ಎದುರಿಸದಂತೆ ನೋಡಿಕೊಳ್ಳುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸಂದೇಶವನ್ನು ಕಳುಹಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಸಂದೇಶವನ್ನು ಓದಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಶಾಸಕರಿಗೆ ಸಂದೇಶವನ್ನು ಕಳುಹಿಸಿದ್ದಾರೆ, ಸಂದೇಶದಲ್ಲಿ ನಾನು ಜೈಲಿನಲ್ಲಿರುವ ಕಾರಣ, ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಬೇಕು ಮತ್ತು ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಉಲ್ಲೇಖಿಸಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಆರು ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ, ಈ ಬೆಳವಣಿಗೆ ಮಧ್ಯೆ ಪತ್ರಿಕಾಗೋಷ್ಟಿ ಹೊರಬಂದಿದ್ದು, ಸುನೀತಾ ಕೇಜ್ರಿವಾಲ್ ಅವರನ್ನು ರಾಷ್ಟ್ರ ರಾಜಧಾನಿಯ ಅವರ ನಿವಾಸದಲ್ಲಿ ಸಂಜಯ್‌ ಸಿಂಗ್‌ ಭೇಟಿಯಾಗಿದ್ದಾರೆ.

ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಅವರಿಗೆ ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಇತ್ತೀಚೆಗೆ ಇಂಡಿಯಾ ಮೈತ್ರಿಕೂಟದ ವತಿಯಿಂದ ದೆಹಲಿಯ ರಾಮಲೀಮಲಾ ಮೈದಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುನೀತಾ ಕೇಜ್ರಿವಾಲ್, ಕಳೆದ 75 ವರ್ಷಗಳಲ್ಲಿ ದೆಹಲಿಯ ಜನರು ಅನ್ಯಾಯವನ್ನು ಎದುರಿಸಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ನಾವು ದೆಹಲಿಯನ್ನು ಸಂಪೂರ್ಣ ರಾಜ್ಯವನ್ನಾಗಿ ಮಾಡುತ್ತೇವೆ. ನಿಮ್ಮ ಸ್ವಂತ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ನಿಮಗಾಗಿ ಸಂದೇಶವನ್ನು ಕಳುಹಿಸಿದ್ದಾರೆ. ಈ ಸಂದೇಶವನ್ನು ಓದುವ ಮೊದಲು, ನಾನು ನಿಮಗೆ ಒಂದು ವಿಷಯವನ್ನು ಕೇಳಲು ಬಯಸುತ್ತೇನೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ನನ್ನ ಗಂಡನನ್ನು ಜೈಲಿಗೆ ಹಾಕಿದ್ದು, ಪ್ರಧಾನಿ ಮಾಡಿದ್ದು ಸರಿಯೇ? ಕೇಜ್ರಿವಾಲ್ ಅವರು ನಿಜವಾದ ದೇಶಭಕ್ತ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ನೀವು ನಂಬುತ್ತೀರಾ? ಕೇಜ್ರಿವಾಲ್ ಜೈಲಿನಲ್ಲಿದ್ದಾರೆ, ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅವರು ರಾಜೀನಾಮೆ ನೀಡಬೇಕೇ? ನಿಮ್ಮ ಕೇಜ್ರಿವಾಲ್ ಸಿಂಹ, ಅವರನ್ನು ಹೆಚ್ಚು ಕಾಲ ಜೈಲಿನಲ್ಲಿಡಲು ಬಿಜೆಪಿಗೆ ಸಾಧ್ಯವಾಗುವುದಿಲ್ಲ…” ಎಂದು ಹೇಳಿದ್ದರು.

ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದ ಸುನೀತಾ ಕೇಜ್ರಿವಾಲ್, “ನನ್ನ ಪ್ರೀತಿಯ ಸಹೋದ್ಯೋಗಿಗಳೇ, ನಿಮ್ಮ ಮಗ, ನಿಮ್ಮ ಸಹೋದರ ಜೈಲಿನಿಂದ ಶುಭಾಶಯಗಳನ್ನು ಸ್ವೀಕರಿಸಿ. ನಾನು ನಿಮ್ಮ ಮತವನ್ನು ಕೇಳುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ನಾನು ಗೆಲ್ಲುವ ಅಥವಾ ಸೋಲುವ ಬಗ್ಗೆ ಚರ್ಚಿಸುವುದಿಲ್ಲ. ಇಂದು ನಾನು ಈ ದೇಶದ ಎಲ್ಲಾ 1.4 ಶತಕೋಟಿ ಜನರನ್ನು ಭವ್ಯ ಭಾರತವನ್ನು ನಿರ್ಮಿಸಲು ಆಹ್ವಾನಿಸುತ್ತೇನೆ ಎಂದು ಹೇಳಿದ್ದರು. ದೇವರು ಭಾರತಕ್ಕೆ ಎಲ್ಲವನ್ನೂ ಉಡುಗೊರೆಯಾಗಿ ನೀಡಿದ್ದಾನೆ. ಆದರೂ ನಾವೇಕೆ ಹಿಂದುಳಿದಿದ್ದೇವೆ? ನಾವೇಕೆ ಅನಕ್ಷರಸ್ಥರು? ನಾನು ಇಲ್ಲಿ ಜೈಲಿನಲ್ಲಿದ್ದೇನೆ, ಅಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯವಿದೆ. ನಾನು ಭಾರತ ಮಾತೆಗಾಗಿ ಯೋಚಿಸುತ್ತೇನೆ. ಭಾರತಮಾತೆ ತುಂಬಾ ದುಃಖಿತಳಾಗಿದ್ದಾಳೆ. ಭಾರತ ಮಾತೆ ನೋವಿನಲ್ಲಿದ್ದಾರೆ, ಸಂಕಟದಿಂದ ಅಳುತ್ತಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸಂದೇಶವನ್ನು ಓದಿದ್ದರು.

ಇದನ್ನು ಓದಿ: ಸಿಎಂ ಹುದ್ದೆಯಿಂದ ಕೇಜ್ರಿವಾಲ್‌ನ್ನು ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...