Homeಮುಖಪುಟಎಎಪಿ ಜೊತೆಗಿನ ಮೈತ್ರಿಗೆ ಅಸಮಾಧಾನ: ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ರಾಜೀನಾಮೆ

ಎಎಪಿ ಜೊತೆಗಿನ ಮೈತ್ರಿಗೆ ಅಸಮಾಧಾನ: ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ರಾಜೀನಾಮೆ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ದೆಹಲಿ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದು, ಎಎಪಿ ಜೊತೆಗೆ ರಾಜ್ಯದಲ್ಲಿ ಮೈತ್ರಿಯಿಂದ ಅಸಮಾಧಾನಗೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಅರವಿಂದರ್ ಸಿಂಗ್ ಲವ್ಲಿ ಅವರನ್ನು ಆಗಸ್ಟ್ 31, 2023ರಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ದಿವಂಗತ ಶೀಲಾ ದೀಕ್ಷಿತ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಅವರು ಸಚಿವರೂ ಕೂಡ ಆಗಿದ್ದರು.

ಅರವಿಂದರ್ ಸಿಂಗ್ ಲವ್ಲಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ದೆಹಲಿ ಕಾಂಗ್ರೆಸ್‌ ಘಟಕವು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದೊಂದಿಗಿನ(ಎಎಪಿ) ಮೈತ್ರಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದಿಲ್ಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿತ್ತು. ಅದರೂ  ಪಕ್ಷವು ದಿಲ್ಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಲೋಕಸಭೆ ಚುನಾವಣೆಗಾಗಿ ದೆಹಲಿಯಲ್ಲಿ ಎಎಪಿ ಜೊತೆ 4:3 ಸೀಟು ಹಂಚಿಕೆ ಒಪ್ಪಂದಕ್ಕೆ ಕಾಂಗ್ರೆಸ್ ಆಗಮಿಸಿತ್ತು. ಈ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಕಾಂಗ್ರೆಸ್ 3 ಸ್ಥಾನಗಳನ್ನು ಪಡೆದುಕೊಂಡಿದೆ. ವಾಯವ್ಯ ದೆಹಲಿ, ಈಶಾನ್ಯ ದೆಹಲಿ ಮತ್ತು ಚಾಂದಿನಿ ಚೌಕ್‌ನ್ನು ಕಾಂಗ್ರೆಸ್‌ಗೆ ಬಿಟ್ಟಕೊಡಲಾಗಿತ್ತು.

ದೆಹಲಿ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನದ ಹೊರತಾಗಿಯೂ, ಇಡೀ ರಾಜ್ಯ ಘಟಕವು ಹೈಕಮಾಂಡ್‌ನ ಅಂತಿಮ ಆದೇಶವನ್ನು ಅನುಸರಿಸುತ್ತದೆ ಎಂದು ಅವರು ಖಚಿತಪಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಸೂಚನೆಯ ಮೇರೆಗೆ, ನಾನು ಕೇಜ್ರಿವಾಲ್ ಅವರ ಬಂಧನದ ರಾತ್ರಿ ಸುಭಾಷ್ ಚೋಪ್ರಾ ಮತ್ತು ಸಂದೀಪ್ ದೀಕ್ಷಿತ್ ಅವರೊಂದಿಗೆ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿದ್ದೆ, ಇದು ನನಗೆ ಇಷ್ಟವಿರಲಿಲ್ಲ ಎಂದು ಹೇಳಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಿದ ಕೂಡಲೇ ಚುನಾವಣಾ ಕಣದಿಂದ ಸಾರ್ವಜನಿಕವಾಗಿ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದೇನೆ ಮತ್ತು ದೆಹಲಿಯ ಇತರ ಹಿರಿಯ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ಸಿಗುವಂತೆ ಮಾಡಲು ನಾನು ಈ ರೀತಿಯ ನಿರ್ಧಾರಕ್ಕೆ ಬಂದಿದ್ದೆ ಎಂದು ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...